ಟಿಪ್ಪು ಜಯಂತಿ ಆಚರಣೆ ರದ್ದು ಬಳಿಕ ಮತ್ತೊಂದು ಮಹತ್ವದ ಹೆಜ್ಜೆ ಇಡಲು ಮುಂದಾದ ಬಿಎಸ್ವೈ

ಟಿಪ್ಪು ಜಯಂತಿ ಆಚರಣೆ ರದ್ದು ಬಳಿಕ ಮತ್ತೊಂದು ಮಹತ್ವದ ಹೆಜ್ಜೆ ಇಡಲು ಮುಂದಾದ ಬಿಎಸ್ವೈ

ಕಳೆದ ಕೆಲವು ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ಭಾರಿ ವಿವಾದವನ್ನು ಸೃಷ್ಟಿಸಿ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತಿತ್ತು. ರಾಜ್ಯದ ಬಹುತೇಕ ಜನರು ಟಿಪ್ಪು ಜಯಂತಿಯ ವಿರುದ್ಧ ಧ್ವನಿ ಎತ್ತಿದರೂ ಸಹ ಸರ್ಕಾರವು ಟಿಪ್ಪು ಜಯಂತಿ ಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಟಿಪ್ಪು ಜಯಂತಿ ಆಚರಣೆ ಮಾಡಿ ಬಾರಿ ವಿವಾದವನ್ನು ಮೈಮೇಲೆ ಎಳೆದು ಕೊಳ್ಳುತ್ತಿತ್ತು. ಆದರೆ ಎಲ್ಲರೂ ಊಹೆ ಮಾಡಿದಂತೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ಕೂಡಲೇ ಟಿಪ್ಪು ಜಯಂತಿ ಆಚರಣೆಯನ್ನು ಸಂಪೂರ್ಣವಾಗಿ ರದ್ದು ಮಾಡಿ ಆದೇಶ ಹೊರಡಿಸಿತ್ತು. ಈ ಮೂಲಕ ಬಿಎಸ್ವೈ ಸರ್ಕಾರ ಭರ್ಜರಿ ಆರಂಭವನ್ನು ಪಡೆದಿತ್ತು. ಅದೇ ರೀತಿ ಇದೀಗ ಮತ್ತೊಂದು ಮಹತ್ವದ ಹೆಜ್ಜೆಯನ್ನು ನೀಡಲು ಬಿಜೆಪಿ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.

ಒಂದು ವೇಳೆ ಇದೇ ನಡೆದಲ್ಲಿ ಕರ್ನಾಟಕದಲ್ಲಿ ಈಗಾಗಲೇ ಹಲವಾರು ವಿವಾದಗಳನ್ನು ಸೃಷ್ಟಿಸುತ್ತಿರುವ ಕೆಲವರಿಗೆ ದೊಡ್ಡ ಶಾಕ್ ಎದುರಾಗಲಿದೆ. ಅಷ್ಟಕ್ಕೂ ಮಹತ್ವದ ಹೆಜ್ಜೆಯಾದರೂ ಏನು ಗೊತ್ತಾ?? ಇಲ್ಲಿದೆ ನೋಡಿ, ಇದೀಗ ರಾಜ್ಯದಲ್ಲಿ ಕಳೆದ ಕೆಲವು ವರ್ಷಗಳಿಂದ ಗೋಕಳ್ಳತನ ಸೇರಿದಂತೆ ಕದ್ದು ಗೋವುಗಳನ್ನು ಸಾಗಿಸುತ್ತಿದ್ದಾರೆ. ಹಿಂದುಗಳು ದೇವರಿಗೆ ಸಮಾನ ವಂತೆ ಗೋವುಗಳನ್ನು ಪೂಜಿಸುವ ಕಾರಣ ಗೋಕಳ್ಳತನ, ಕದ್ದ ಗೋವುಗಳ ಸಾಕಾಣಿಕೆ ಹಾಗೂ ಗೋಹತ್ಯೆ ಬಾರಿ ವಿವಾದವನ್ನು ಸೃಷ್ಟಿಸುತ್ತಿದೆ. ಎಷ್ಟರಮಟ್ಟಿಗೆ ಎಂದರೆ, ಕಳ್ಳ ಸಾಗಾಣಿಕೆ ಮಾಡುವವರನ್ನು ಜನಸಾಮಾನ್ಯರು ಬೀದಿಗಿಳಿದು ತಾವೇ ಸ್ವತಹ ಕಾನೂನನ್ನು ಕೈಗೆ ತೆಗೆದುಕೊಂಡು ದಂಡಿಸುತ್ತಿದ್ದಾರೆ. ಈ ರೀತಿಯ ಪ್ರಕರಣಗಳು ಕೇವಲ ಕರ್ನಾಟಕ ರಾಜ್ಯದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಸದ್ದು ಮಾಡುತ್ತಿವೆ.

ಹೀಗಿರುವಾಗ ಈ ಎಲ್ಲಾ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಯಲು ಹಾಗೂ ಹಿಂದೂ ಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಲು ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರ ಸಿದ್ಧವಾಗಿದೆ ಎನ್ನಲಾಗುತ್ತಿದೆ. ಈ ಕುರಿತು ಬಿಜೆಪಿ ಸರ್ಕಾರವು ಇಡೀ ಕರ್ನಾಟಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂಬ ಮಾಹಿತಿ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಅಷ್ಟೇ ಅಲ್ಲದೆ ಇನ್ನು ಮುಂದೆ ಗೋವುಗಳ ಸಾಗಾಣಿಕೆಯನ್ನು ಸಂಪೂರ್ಣವಾಗಿ ರದ್ದು ಮಾಡುವ ಮೂಲಕ ರಾಜ್ಯದಲ್ಲಿ ಗೋ ಕಳ್ಳತನವನ್ನು ತಡೆ ಹಿಡಿಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ವಿಶೇಷ ಆದೇಶವನ್ನು ಹೊರಡಿಸಲು ಬಿಎಸ್ ಯಡಿಯೂರಪ್ಪ ನವರು ಸಂಪೂರ್ಣವಾಗಿ ಮಾಹಿತಿಗಳನ್ನು ಕಲೆಹಾಕಿ ರಾಜ್ಯ ಸರ್ಕಾರಕ್ಕೆ ಕೂಡಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.