ಹೊರಬಿತ್ತು ಮತ್ತೊಂದು ಮಹಾ ಸಮೀಕ್ಷೆ ! ವಿರೋಧ ಪಕ್ಷಗಳಿಗೆ ಮರ್ಮಾಘಾತ ! ಮೋದಿ ಸುನಾಮಿಗೆ ನಶಿಸಿ ಹೋಗುತ್ತಿದೆ ಕಾಂಗ್ರೆಸ್

ಇದೀಗ ಎಲ್ಲಿ ನೋಡಿದರೂ ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಭಾರಿ ಸದ್ದು ಮಾಡುತ್ತಿದೆ. ಒಂದು ವೇಳೆ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದಂತೆ ಈ ವಿಧಾನಸಭಾ ಚುನಾವಣೆ ಗಳಲ್ಲಿಯೂ ಸಹ ಮಕಾಡೆ ಮಲಗಿದರೆ ಕಾಂಗ್ರೆಸ್ ಪಕ್ಷದ ಅಂತ್ಯ ಬಹುತೇಕ ಖಚಿತವಾಗಲಿದೆ. ನರೇಂದ್ರ ಮೋದಿ ರವರ ಅಲೆಯು ಸುನಾಮಿಯಾಗಿ ಪರಿವರ್ತನೆಗೊಂಡ ಮೇಲೆ ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಇನ್ನಿಲ್ಲದಂತೆ ಪ್ರಯತ್ನ ಪಟ್ಟು ವಿಫಲವಾಗುತ್ತಿದೆ. ಇದರಿಂದ ದಿನೇ ದಿನೇ ಕಾಂಗ್ರೆಸ್ ಪಕ್ಷವು ನಶಿಸಿ ಹೋಗುತ್ತಿದ್ದು ದೇಶದ ಕೆಲವೇ ಕೆಲವು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಅಲ್ಲಿಯೂ ಸಹ ನೀಡಿದ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದು ಇದೀಗ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರೇ ಈ ರೀತಿಯ ಕಟು ಸತ್ಯಗಳನ್ನು ಹೊರಹಾಕುತ್ತಿದ್ದಾರೆ.

ಇಷ್ಟೆಲ್ಲಾ ಸವಾಲುಗಳ ನಡುವೆ ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ದೊಡ್ಡ ಶಾಕ್ ಎದುರಾಗಿದೆ. ಅಷ್ಟೇ ಅಲ್ಲದೆ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಪ್ರಯತ್ನ ಪಡುತ್ತಿರುವ ಪ್ರಾದೇಶಿಕ ಪಕ್ಷಗಳಿಗೂ ಸಹ ಚುನಾವಣಾ ಪೂರ್ವ ಸಮೀಕ್ಷೆಗಳು ಖುಷಿ ತಂದಿಲ್ಲ. ಯಾಕೆಂದರೆ ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವನ್ನು ದಾಖಲಿಸಿರುವ ಬಿಜೆಪಿ ಪಕ್ಷವು ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ನಡೆಯುವ ಹರಿಯಾಣ ಹಾಗೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಅಂತರದ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಎಲ್ಲಾ ಸಮೀಕ್ಷೆಗಳು ಹೇಳುತ್ತಿವೆ. ಇತ್ತೀಚೆಗಷ್ಟೇ ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿದ ಸಮೀಕ್ಷೆಗಳು ಎಲ್ಲವೂ ಬಿಜೆಪಿ ಪಕ್ಷದ ಪರವಾಗಿ ಬಂದಿವೆ.

ಇದೀಗ ದೇಶದ ಮತ್ತೊಂದು ಪ್ರತಿಷ್ಠಿತ ಸಂಸ್ಥೆಯಾಗಿರುವ ಜನ್ ಕಿ ಬಾತ್ ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿ ಪಕ್ಷವು ಭರ್ಜರಿ ಗೆಲುವು ದಾಖಲಿಸುವುದು ಖಚಿತವಾಗಿದೆ. ಈಗಾಗಲೇ ಎರಡು ರಾಜ್ಯಗಳಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದು ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುವುದು ಚುನಾವಣಾ ಪೂರ್ವ ಸಮೀಕ್ಷೆಗಳ ಫಲಿತಾಂಶದಲ್ಲಿ ಕಾಣಸಿಗುತ್ತದೆ. ಒಟ್ಟು 288 ವಿಧಾನಸಭಾ ಸ್ಥಾನಗಳನ್ನು ತನ್ನ ತೆಕ್ಕೆಯಲ್ಲಿ ಇಟ್ಟು ಕೊಂಡಿರುವ ಮಹಾರಾಷ್ಟ್ರ ರಾಜ್ಯದಲ್ಲಿ ಶಿವಸೇನೆ ಪಕ್ಷದ ಜೊತೆ ಚುನಾವಣಾ ಪೂರ್ವ ಮೈತ್ರಿಯನ್ನು ಮಾಡಿಕೊಂಡಿರುವ ಬಿಜೆಪಿ ಪಕ್ಷವು 142-148 ಸ್ಥಾನಗಳನ್ನು ಗೆಲ್ಲಲಿದೆ. ಶಿವಸೇನಾ ಪಕ್ಷವು 83 ರಿಂದ 85 ಸ್ಥಾನಗಳಲ್ಲಿ ಗೆಲುವು ದಾಖಲಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಇನ್ನುಳಿದಂತೆ ಎನ್ಸಿಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ಸಹ ಕಾಂಗ್ರೆಸ್ ಪಕ್ಷ ಬಗ್ಗೆ ಇವರ 21ರಿಂದ 27 ಸೀಟುಗಳಿಗೆ ಸೀಮಿತವಾಗಲಿದೆ.

ವಿಶೇಷವೇನೆಂದರೆ ಇಲ್ಲಿ ಕಾಂಗ್ರೆಸ್ ಪಕ್ಷದ ಮಿತ್ರ ಪಕ್ಷವಾಗಿರುವ ಎನ್ಸಿಪಿ ಪಕ್ಷವು ಕಾಂಗ್ರೆಸ್ ಪಕ್ಷಕ್ಕಿಂತ ಎರಡು ಮೂರು ಸ್ಥಾನಗಳನ್ನು ಹೆಚ್ಚು ಗೆಲ್ಲಲಿದೆ. ಅಷ್ಟೇ ಅಲ್ಲದೆ ಬಿಜೆಪಿ ಪಕ್ಷವು ಚುನಾವಣಾ ಪೂರ್ವ ಮೈತ್ರಿಯನ್ನು ಪಕ್ಕಕ್ಕೆ ಇಟ್ಟರೂ ಸಹ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ಪಡೆದುಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ.‌ ಇನ್ನುಳಿದಂತೆ ಮತ್ತೊಂದು ರಾಜ್ಯವಾದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 90 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಸ್ಪರ್ಧೆ ಮಾಡಲಿದ್ದು 58 ರಿಂದ 20 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರದ ಗದ್ದುಗೆ ಏರಲಿದೆ ಕಾಂಗ್ರೆಸ್ ಪಕ್ಷವು ಕೇವಲ 12 ರಿಂದ 15 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಇದರ ಜೊತೆ ಕೆಲವು ಪ್ರಾದೇಶಿಕ ಪಕ್ಷಗಳು ಇನ್ನುಳಿದ ಕ್ಷೇತ್ರಗಳನ್ನು ಹಂಚಿಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ. ಈ ಮೂಲಕ ಮತ್ತೊಮ್ಮೆ ಎರಡೂ ರಾಜ್ಯಗಳಲ್ಲಿ ಬಿಜೆಪಿ ಪಕ್ಷ ಅಧಿಕಾರ ಸ್ಥಾಪಿಸುವುದು ಖಚಿತವಾದಂತೆ ಕಾಣುತ್ತಿದೆ.

Post Author: Ravi Yadav