ಉಪ ಚುನಾವಣೆಯಲ್ಲಿ ಬಿಜೆಪಿಗೆ ಆನೆಬಲ ! ಬಿಜೆಪಿ ನಾಯಕನ ಹೊಡೆತಕ್ಕೆ ಮಕಾಡೆ ಮಲಗಿದ ವಿಪಕ್ಷಗಳು.

ಉಪ ಚುನಾವಣೆಯಲ್ಲಿ ಬಿಜೆಪಿಗೆ ಆನೆಬಲ ! ಬಿಜೆಪಿ ನಾಯಕನ ಹೊಡೆತಕ್ಕೆ ಮಕಾಡೆ ಮಲಗಿದ ವಿಪಕ್ಷಗಳು.

ಇದೀಗ ನಡೆಯುತ್ತಿರುವ ಉಪಚುನಾವಣೆ ದಿನೇ ದಿನೇ ಭಾರೀ ಕುತೂಹಲವನ್ನು ಕೆರಳಿಸಿದೆ.. ಬಿಜೆಪಿ ಸರ್ಕಾರದ ಅಳಿವು ಉಳಿವಿನ ಪ್ರಶ್ನೆ ಆಗಿರುವ ಕಾರಣ ಬಿಜೆಪಿ ಪಕ್ಷವು ಶತಾಯ ಗತಾಯ ಕನಿಷ್ಠ ಏಳು ಕ್ಷೇತ್ರಗಳನ್ನು ತನ್ನದಾಗಿಸಿಕೊಳ್ಳಲೇ ಬೇಕು. ಮತ್ತೊಂದೆಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹೇಗಾದರೂ ಮಾಡಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಅಥವಾ ಮತ್ತೊಮ್ಮೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಸೂಚನೆ ನೀಡಿವೆ.

ಹೀಗಿರುವಾಗ ಬಿಜೆಪಿ ಪಕ್ಷಕ್ಕೆ ಪ್ರತಿಯೊಂದು ಕ್ಷೇತ್ರಗಳು ಬಹಳ ಮುಖ್ಯವಾಗಿರುತ್ತದೆ. ಅದರಲ್ಲಿಯೂ ಈ ಪಕ್ಷವು ತನ್ನ ಪ್ರತಿಷ್ಠೆಯನ್ನು ಕಣಕ್ಕೆ ಇಟ್ಟು, ವಲಸೆ ಬಂದಿರುವ ಶಾಸಕರಿಗೆ ಮಣೆ ಹಾಕಿರುವ ಕಾರಣ ಬಿಜೆಪಿ ಪಕ್ಷವು ಸಾಧ್ಯವಾದಷ್ಟು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ತಮ್ಮ ಸರ್ಕಾರ ರಚಿಸಲು ಅವಕಾಶ ನೀಡಿದ ಮಾಜಿ ಶಾಸಕರ ಋಣ ತೀರಿಸಲು ಮುಂದಾಗಿದೆ. ಇದೀಗ ಉಪ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಪ್ರಮುಖವಾಗಿರುವ ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಈಗಾಗಲೇ ಹಲವಾರು ಸಮುದಾಯದ ಬೆಂಬಲವನ್ನು ಹೊಂದಿದ್ದ ಬಿಜೆಪಿ ಪಕ್ಷಕ್ಕೆ ಇದೀಗ ಮತ್ತೊಂದು ಬೃಹತ್ ಸಮುದಾಯದ ಬೆಂಬಲ ಸಿಗುವ ಸೂಚನೆ ಸಿಕ್ಕಿದ್ದು,  ಬಲಿಷ್ಠ ನಾಯಕ ಬಿಜೆಪಿ ಸೇರ್ಪಡೆ ಗೊಂಡಿದ್ದಾರೆ. ಅಷ್ಟಕ್ಕೂ ವಿಷಯದ ಮೂಲ ಹಾಗೂ ವಿವರಗಳನ್ನು ಗೊತ್ತಾ?? ತಿಳಿಯಲು ಒಮ್ಮೆ ಸಂಪೂರ್ಣವಾಗಿ ಓದಿ.

ಇದೀಗ ಬಿಜೆಪಿ ಪಕ್ಷ ಸರಕಾರ ರಚಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಿಪಿ ಯೋಗೇಶ್ವರ್ ಅವರು ಹುಣಸೂರು ಕ್ಷೇತ್ರದಲ್ಲಿ ಮಾಜಿ ಶಾಸಕರಾದ ಎಚ್ ವಿಶ್ವನಾಥ್ ಅವರನ್ನು ಗೆಲ್ಲಿಸಲು ಪಣತೊಟ್ಟಿದ್ದಾರೆ. ಟಿಕೆಟ್ ಸಿಕ್ಕಿಲ್ಲವೆಂದು ಅಸಮಾಧಾನಗೊಳ್ಳದೇ ಪಕ್ಷಕ್ಕಾಗಿ ದುಡಿಯುತ್ತಿರುವ ಸಿಪಿ ಯೋಗೇಶ್ವರ್ ಅವರು ಹಲವಾರು ದಿನಗಳಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಹುಣಸೂರು ಕ್ಷೇತ್ರದ ಒಕ್ಕಲಿಗ ಸಂಘದ ಮಾಜಿ ಅಧ್ಯಕ್ಷ ರಾಮಕೃಷ್ಣ ಗೌಡ ರವರನ್ನು ಬಿಜೆಪಿ ಪಕ್ಷಕ್ಕೆ ಸೇರಿಕೊಳ್ಳುವಂತೆ ಮಾಡಿರುವ ಸಿಪಿ ಯೋಗೇಶ್ವರ್ ಅವರು ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಬಲ ತುಂಬುವುದರಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರೀ ಕುತೂಹಲ ಕೆರಳಿಸಿದ್ದ ಹುಣಸೂರು ಕ್ಷೇತ್ರವು ಇದೀಗ ಮುಂದೆ ಯಾವ ತಿರುವನ್ನು ಪಡೆದುಕೊಂಡು ಯಾರ ಕಡೆ ಮತದಾರರು ಒಲವು ತೋರಲಿದ್ದಾರೆ ಎಂಬುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.