ಚುನಾವಣಾ ಫಲಿತಾಂಶಕ್ಕೆ ಮುನ್ನವೇ ಅಚ್ಚರಿಯ ನಿರ್ಧಾರ ಪ್ರಕಟಣೆ ಮಾಡಿದ ಆನಂದ ಸಿಂಗ್ ! ಏನು ಗೊತ್ತಾ??

ನಮಸ್ಕಾರ ಸ್ನೇಹಿತರೇ, ಇದೀಗ ಈಗಾಗಲೇ ರಾಜ್ಯದ ಎಲ್ಲರ ದೃಷ್ಟಿ ಉಪ ಚುನಾವಣೆಯ ಫಲಿತಾಂಶದ ಕಡೆ ನೆಟ್ಟಿದೆ. ಮತದಾರರ ನಿರ್ಧಾರವು ಮತ ಯಂತ್ರಗಳಲ್ಲಿ ಭದ್ರವಾಗಿದೆ. ಇನ್ನೂ ಕರ್ನಾಟಕದ ಮುಂದಿನ ಮೂರು ವರ್ಷಗಳ ಭವಿಷ್ಯ ಮತ ಯಂತ್ರಗಳಲ್ಲಿ ಅಡಗಿದೆ ಎನ್ನುವುದರಲ್ಲಿ ತಪ್ಪಿಲ್ಲ, ಹೀಗಿರುವಾಗ ಕಾಂಗ್ರೆಸ್ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿರುವ ಆನಂದ ಸಿಂಗ್ ರವರು ಫಲಿತಾಂಶಕ್ಕೂ ಮುನ್ನ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಇದೀಗ ಬಿಜೆಪಿ ಕಚೇರಿಯಲ್ಲಿ ಸುದ್ದಿ ಗೋಷ್ಠಿ ನಡೆಸಿರುವ ಆನಂದ್ ಸಿಂಗ್ ರವರು ತಮ್ಮ ಅಂತರಾಳದ ಮಾತುಗಳನ್ನು ಹೊರಗೆ ಹಾಕಿ, ತಮ್ಮ ರಾಜಕೀಯ ಭವಿಷ್ಯದ ಕುರಿತು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಆನಂದ್ ಸಿಂಗ್ ರವರು ನಾನು ಸ್ವಾರ್ಥಕ್ಕಾಗಿ ರಾಜಕಾರಣಕ್ಕೆ ಬಂದಿಲ್ಲ, ರಾಜಕೀಯದ ಇತಿಹಾಸದಲ್ಲಿ ನನ್ನ ರಾಜಕೀಯ ಹೆಜ್ಜೆಗಳು ಉಳಿಯಬೇಕು, ಸಮಾಜಕ್ಕೆ ಏನನ್ನಾದರೂ ಕೊಡುಗೆಯಾಗಿ ನೀಡಬೇಕು ಎಂದು ರಾಜಕೀಯಕ್ಕೆ ಬಂದಿದ್ದೇನೆ. ನನ್ನ ವೈಯಕ್ತಿಕ ಕಾರಣಗಳಿಂದ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿದ್ದೆ, ಕ್ಷೇತ್ರದ ಅಭಿವೃದ್ಧಿಯನ್ನು ಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಸೇರಿದ ನನಗೆ ಅಲ್ಲಿ ಸಂಪೂರ್ಣವಾಗಿ ಅನ್ಯಾಯವಾಯಿತು. ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ನನಗೆ ಸೂಕ್ತ ಸ್ಥಾನಮಾನವನ್ನು ಕಾಂಗ್ರೆಸ್ ಪಕ್ಷ ನೀಡಲಿಲ್ಲ.

ಅದೇ ಕಾರಣಕ್ಕೆ ಇದೀಗ ನಾನು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿದ್ದೇನೆ, ಕ್ಷೇತ್ರದ ಮತದಾರರು ಮೂರು ಬಾರಿ ನನ್ನನ್ನು ಗೆಲ್ಲಿಸಿದ್ದಾರೆ. ಈಗಲೂ ಸಹ ನನ್ನ ಗೆಲ್ಲಿಸುತ್ತಾರೆ ಎಂಬ ನಂಬಿಕೆ ನನಗಿದೆ. ಇದು ನನ್ನ ಕೊನೆಯ ಚುನಾವಣೆ, ಬಿಜೆಪಿ ಸರ್ಕಾರ ನನಗೆ ನೀಡುವ ಅಧಿಕಾರವನ್ನು ಸಂಪೂರ್ಣವಾಗಿ ಬಳಸಿಕೊಂಡು ಕ್ಷೇತ್ರದ ಅಭಿವೃದ್ಧಿ ಮಾಡಿ ನಾನು ನಿವೃತ್ತಿ ಪಡೆಯುತ್ತೇನೆ, ರಾಜಕೀಯದಲ್ಲಿ ಸಕ್ರಿಯವಾಗಿ ಇದ್ದು ಯುವಕರನ್ನು ಬೆಳೆಸಿ ಮುನ್ನೆಲೆಗೆ ತರುವ ಕೆಲಸ ಮಾಡುತ್ತೇನೆಯೇ ಹೊರತು ಯಾವುದೇ ಕಾರಣಕ್ಕೂ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಆನಂದ್ ಸಿಂಗ್ ರವರ ಅಚ್ಚರಿಯ ನಿರ್ಧಾರ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ.

Post Author: Ravi Yadav