ಗೃಹ ಸಚಿವಾಲಯದ ಆದೇಶದ ನಂತರವೂ ಮಸೂದೆ ಜಾರಿ ಮಾಡುವುದಿಲ್ಲ ಎಂದ ಮಮತಾ ಗೆ ರಾಜ್ಯಪಾಲರು ಹೇಳಿದ್ದೇನು ಗೊತ್ತಾ??

ಇದೀಗ ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಮಸೂದೆಯ ಕುರಿತು ಭಾರಿ ಪ್ರತಿಭಟನೆಗಳು ನಡೆಯುತ್ತಿವೆ. ಮಮತಾ ಬ್ಯಾನರ್ಜಿ ರವರ ಪ್ರಮುಖ ಮತ ಬ್ಯಾಂಕ್ ಆಗಿರುವ ರೋಹಿಂಗ್ಯ ಜನಾಂಗದವರನ್ನು ಕೇಂದ್ರ ಸರ್ಕಾರ ಎನ್ಆರ್ಸಿ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಹೊರ ಹಾಕುತ್ತದೆ ಎಂಬ ಸುದ್ದಿಯ ಜೊತೆ ಈ ಮಸೂದೆ ಮಮತಾ ರವರಿಗೆ ನುಂಗಲಾರದ ತುತ್ತಾಗಿದೆ.

ಇವರೆಲ್ಲರ ಬೆಂಬಲವಿಲ್ಲದೆ ಇನ್ನೊಮ್ಮೆ ಮಮತಾ ಬ್ಯಾನರ್ಜಿ ಅವರು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನವನ್ನು ಮತ್ತೊಮ್ಮೆ ಅಲಂಕರಿಸಲು ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಇದೀಗ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ತೀರ್ವ ಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಪಕ್ಷದ ನಾಯಕರು ಮಮತಾ ಬ್ಯಾನರ್ಜಿ ಅವರು ಪರೋಕ್ಷವಾಗಿ ಪ್ರತಿಭಟನಾಕಾರರ ಬೆಂಬಲಕ್ಕೆ ನಿಂತಿದ್ದಾರೆ, ಯಾವುದೇ ಪ್ರತಿಭಟನಾಕಾರರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಸುಮ್ಮನೆ ಪೊಲೀಸ್ ನಿಯೋಜನೆ ಮಾಡಿ ನಾಟಕ ವಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ, ಇನ್ನು ಗೃಹ ಸಚಿವಾಲಯದ ಆದೇಶದ ನಂತರವೂ ಪಶ್ಚಿಮ ಬಂಗಾಳದಲ್ಲಿ ಯಾವುದೇ ಕಾರಣಕ್ಕೂ ಪೌರತ್ವ ತಿದ್ದುಪಡಿ ಮಸೂದೆ ಜಾರಿಯಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದ ಅವರಿಗೆ ರಾಜ್ಯಪಾಲರು ಖಡಕ್ ಸಂದೇಶ ರವಾನೆ ಮಾಡಿದ್ದಾರೆ.

ಮಮತಾ ರವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರಾಜ್ಯಪಾಲರು, ಪೌರತ್ವ ತಿದ್ದುಪಡಿ ಮಸೂದೆಯು ಕೇಂದ್ರ ಸರ್ಕಾರದ ಚೌಕಟ್ಟಿನಲ್ಲಿ ಜಾರಿಯಾಗಿದೆ. ಆದಕಾರಣ ಯಾವುದೇ ಕಾರಣಕ್ಕೂ ಮಮತಾ ಬ್ಯಾನರ್ಜಿ ಅವರು ಜಾರಿಗೆ ತರದೆ ಬೇರೆ ದಾರಿಯಿಲ್ಲ, ಮೊದಲು ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಮಮತಾ ಬ್ಯಾನರ್ಜಿ ಅವರು ಗಮನಹರಿಸಬೇಕು. ಇದರಿಂದ ಯಾರಿಗೂ ತೊಂದರೆ ಯಾಗುವುದಿಲ್ಲ ಎಂಬ ಸತ್ಯವನ್ನು ಎಲ್ಲರಿಗೂ ತಿಳಿಸಿ ಹೇಳಬೇಕು, ಅದನ್ನು ಬಿಟ್ಟು ಮಸೂದೆ ಜಾರಿ ಮಾಡುವುದಿಲ್ಲ ಎಂದು ಭರವಸೆ ನೀಡಬಾರದು, ಒಂದು ವೇಳೆ ಪರಿಸ್ಥಿತಿ ಕೈತಪ್ಪಿ ಹೋದರೆ ಮುಂದಿನ ಶಿಫಾರಸು ಮಾಡಲಾಗುತ್ತದೆ ಎಂದು ಪರೋಕ್ಷವಾಗಿ ರಾಷ್ಟ್ರಪತಿ ಆಡಳಿತದ ಬಗ್ಗೆ ಸೂಚನೆ ನೀಡಿದ್ದಾರೆ. ಬಿಜೆಪಿ ಪಕ್ಷದ ಅಧ್ಯಕ್ಷರು ಕೂಡ ಈ ಕೂಡಲೇ ರಾಷ್ಟ್ರಪತಿ ಆಡಳಿತವನ್ನು ಹೇರಬೇಕು ಎಂದು ಒತ್ತಾಯ ಮಾಡಿದ್ದಾರೆ.

Post Author: Ravi Yadav