ಮುಂದಿನ ವಿಧಾನಸಭಾ ಚುನಾವಣೆಗಾಗಿ ಮಹತ್ವದ ಒಪ್ಪಂದ ಮಾಡಿಕೊಂಡ ಕೇಜ್ರಿವಾಲ್ ! ಒಪ್ಪಂದವೇನು ಗೊತ್ತಾ??

ಮುಂದಿನ ವಿಧಾನಸಭಾ ಚುನಾವಣೆಗಾಗಿ ಮಹತ್ವದ ಒಪ್ಪಂದ ಮಾಡಿಕೊಂಡ ಕೇಜ್ರಿವಾಲ್ ! ಒಪ್ಪಂದವೇನು ಗೊತ್ತಾ??

ಇನ್ನೇನು ಮುಂದಿನ ವರ್ಷ ಭಾರತದ ರಾಜಧಾನಿ ದೆಹಲಿಯಲ್ಲಿ ವಿಧಾನಸಭಾ ಕ್ಷೇತ್ರಗಳ ಚುನಾವಣೆ ನಡೆಯಲಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಏಳು ಕ್ಷೇತ್ರಗಳನ್ನು ಗೆದ್ದು ಬೀಗಿರುವ ಬಿಜೆಪಿ ಪಕ್ಷವು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಫೇವರಿಟ್ ಎನಿಸಿಕೊಂಡಿದೆ. ದೇಶದಲ್ಲಿ ನರೇಂದ್ರ ಮೋದಿರವರ ಹವಾ ಎಷ್ಟಿದೆ ಎಂಬುದು ಕೇಜ್ರಿವಾಲ್ ಅವರಿಗೂ ಕೂಡ ತಿಳಿದಿದೆ. ಹೀಗಿರುವಾಗ ಕೊಂಚ ಯಾಮಾರಿದರೂ ದೆಹಲಿಯ ಗದ್ದುಗೆ ಕಳೆದು ಕೊಳ್ಳಬೇಕಾಗುತ್ತದೆ ಎಂಬುದನ್ನು ಅರಿತುಕೊಂಡಿರುವ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಇದೀಗ ರಾಜಕೀಯ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಬಿಜೆಪಿ ಪಕ್ಷವನ್ನು ಹೆಣೆಯಲು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗುತ್ತಿದ್ದು, ತಾವೇ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಹೌದು, ಮುಂದಿನ ವರ್ಷದ ಆರಂಭದಲ್ಲಿ ದೆಹಲಿಯ ವಿಧಾನಸಭಾ ಚುನಾವಣೆ ನಡೆಯುವ ಕಾರಣ ಕಳೆದ ಬಾರಿ ಎಪ್ಪತ್ತರಲ್ಲಿ 67 ಕ್ಷೇತ್ರಗಳನ್ನು ಗೆದ್ದಿದ್ದರೂ ಕೂಡ ಈಗ ಸೋಲಿನ ಭಯ ಕಾಡುತ್ತಿದೆ. ಅದಕ್ಕಾಗಿಯೇ ರಾಜಕೀಯ ತಂತ್ರಗಳನ್ನು ಹೆಣೆಯುವ ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಅವರನ್ನು ಕೇಜ್ರಿವಾಲ್ ರವರು ಸಂಪರ್ಕ ಮಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಪರವಾಗಿ ಕೆಲಸ ಮಾಡುವಂತೆ ಕೋರಿ ಕೊಂಡಿದ್ದಾರೆ. ಇದಕ್ಕೆ ಪ್ರಶಾಂತ್ ಕಿಶೋರ್ ಅವರು ಕೂಡ ಒಪ್ಪಿಗೆ ನೀಡಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡಿ ಆಮ್ ಆದ್ಮಿ ಪಾರ್ಟಿಯನ್ನು ಗೆಲ್ಲಿಸಲು ಶ್ರಮಿಸಲಿದ್ದಾರೆ ಎಂಬುದು ಖಚಿತವಾಗಿದೆ.