ಬಿಗ್ ನ್ಯೂಸ್: ನಳಿನ್ ಕುಮಾರ್ ಕಟೀಲ್ ರವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಬಿಜೆಪಿ ಹೈಕಮಾಂಡ್ ! ಏನು ಗೊತ್ತಾ??

ನಮಸ್ಕಾರ ಸ್ನೇಹಿತರೇ ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷಕ್ಕೆ ಕರ್ನಾಟಕ ರಾಜ್ಯ ಎಷ್ಟು ಮುಖ್ಯ ಎಂಬುದು ಈಗಾಗಲೇ ಬಿಜೆಪಿ ಪಕ್ಷದ ಹೈಕಮಾಂಡ್ ಅರಿತುಕೊಂಡಿದೆ. ದೇಶದಲ್ಲಿ ಈಗಾಗಲೇ ಹಲವು ರಾಜ್ಯದಲ್ಲಿ ಮತ ಏರಿಕೆ ಪ್ರಮಾಣ ಹೆಚ್ಚಾಗಿದ್ದರೂ ಹಲವು ರಾಜ್ಯಗಳನ್ನು ಕಳೆದುಕೊಂಡಿದೆ. ಹೀಗಿರುವಾಗ ಬಹಳ ಅಳೆದು-ತೂಗಿ ಪ್ರತಿಯೊಂದು ನಿರ್ಧಾರಗಳನ್ನು ಹೈಕಮಾಂಡ್ ತೆಗೆದು ಕೊಳ್ಳಲು ನಿರ್ಧಾರ ಮಾಡಿದಂತೆ ಕಾಣುತ್ತಿದೆ. ಅದೇ ಕಾರಣಕ್ಕಾಗಿ ಕಳೆದ ಕೆಲವು ತಿಂಗಳುಗಳ ಹಿಂದೆ ನಳಿನ್ ಕುಮಾರ್ ಕಟೀಲ್ ರವರನ್ನು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಘೋಷಣೆ ಮಾಡಿತ್ತು. ಆದರೆ ರಾಜಕೀಯ ವಿದ್ಯಮಾನಗಳನ್ನು ಗಮನದಲ್ಲಿಟ್ಟು ಕೊಂಡು ನಳಿನ್ ಕುಮಾರ್ ಕಟೀಲ್ ರವರು ಎಷ್ಟು ದಿನ ಅಧಿಕಾರದಲ್ಲಿ ಇರುತ್ತಾರೆ ಎಂದು ಘೋಷಣೆ ಮಾಡಿರಲಿಲ್ಲ.

ಆದರೆ ಇದೀಗ ಇನ್ನೇನು ಕೆಲವೇ ದಿನಗಳಲ್ಲಿ ಅಮಿತ್ ಶಾ ರವರು ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಯುವ ಸಂದರ್ಭದಲ್ಲಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ, ಈ ಘೋಷಣೆಯ ಅನ್ವಯ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ರಾಗಿರುವ ನಳಿನ್ ಕುಮಾರ್ ಕಟೀಲ್ ರವರು ಇನ್ನು ಮುಂದಿನ ಮೂರು ವರ್ಷಗಳ ಕಾಲ ಕರ್ನಾಟಕ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ರಾಗಿ ಮುಂದುವರೆ ಯಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕಾಗಿ ಜನವರಿ 16 ರಂದು ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಮಾಡಲಾಗುತ್ತದೆ ಎಂಬುದು ತಿಳಿದುಬಂದಿದೆ.

Facebook Comments

Post Author: Ravi Yadav