ಅಸ್ಸಾಂ ಜನರು ಸಿಎಎ ವಿರೋಧಿಸುತ್ತಾರೆ ಎಂದ ವಿಪಕ್ಷಗಳಿಗೆ ಚುನಾವಣೆಯಲ್ಲಿ ಉತ್ತರ ನೀಡಿದ ಅಸ್ಸಾಂ ಜನತೆ ! ಅಷ್ಟಕ್ಕೂ ಇಲ್ಲಿ ನಡೆದದ್ದೇನು ಗೊತ್ತಾ??

ಅಸ್ಸಾಂ ಜನರು ಸಿಎಎ ವಿರೋಧಿಸುತ್ತಾರೆ ಎಂದ ವಿಪಕ್ಷಗಳಿಗೆ ಚುನಾವಣೆಯಲ್ಲಿ ಉತ್ತರ ನೀಡಿದ ಅಸ್ಸಾಂ ಜನತೆ ! ಅಷ್ಟಕ್ಕೂ ಇಲ್ಲಿ ನಡೆದದ್ದೇನು ಗೊತ್ತಾ??

ನಮಸ್ಕಾರ ಸ್ನೇಹಿತರೇ, ನಿಮಗೆಲ್ಲರಿಗೂ ತಿಳಿದಿರುವಂತೆ ಪೌರತ್ವ ತಿದ್ದುಪಡಿ ಮಸೂದೆ ಹಾಗೂ ಎನ್ಆರ್ಸಿ ಯೋಜನೆಗಳು ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಬಾಂಗ್ಲಾದೇಶ ಸೇರಿದಂತೆ ನೆರೆಹೊರೆಯ ರಾಷ್ಟ್ರಗಳಿಂದ ಅಕ್ರಮವಾಗಿ ವಲಸೆ ಬಂದಿರುವ ಬಹುತೇಕ ಅಕ್ರಮ ವಲಸಿಗರು ಈ ಎರಡು ರಾಜ್ಯಗಳಲ್ಲಿ ನೆಲೆಸಿದ್ದಾರೆ. ಕೇವಲ ಅಸ್ಸಾಂ ರಾಜ್ಯವೊಂದರಲ್ಲೇ ಬರೋಬ್ಬರಿ 40 ಲಕ್ಷಕ್ಕೂ ಹೆಚ್ಚು ಜನರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.

ಇನ್ನು ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷದ ಅಸ್ಸಾಂ ರಾಜ್ಯದ ಗುವಾಹಟಿ ಸಂಸದ ಕಿರಿಕ್ ಚಾಲಿಹ ರವರು ಕೂಡ ಅಸ್ಸಾಮ್ ರಾಜ್ಯದಲ್ಲಿ ಅಕ್ರಮವಾಗಿ ವಲಸೆ ಬಂದಿರುವ ವಲಸಿಗರಿಗೆ ಕಾಂಗ್ರೆಸ್ ಪಕ್ಷವು ನೆಲೆಯೂರಲು ಸಹಾಯ ಮಾಡಿ, ರಾಜಕೀಯ ಉದ್ದೇಶಕ್ಕಾಗಿ ಹಾಗೂ ರಾಜಕೀಯ ಲಾಭ ಗಳಿಗಾಗಿ ಈ ಕೆಲಸವನ್ನು ಅಸ್ಸಾಂ ರಾಜ್ಯದ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಮಾಡಿದ್ದರು ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅಸ್ಸಾಮ್ ರಾಜ್ಯದಲ್ಲಿ ಎನ್ಆರ್ಸಿ ಯೋಜನೆ ಜಾರಿ ಮಾಡುತ್ತೇವೆ ಎಂದು ಘೋಷಣೆ ಮಾಡಿದ ತಕ್ಷಣ ಹಲವಾರು ಕಡೆ ಪ್ರತಿಭಟನೆಗಳು ನಡೆದಿದ್ದವು. ಈ ಎಲ್ಲಾ ವಿದ್ಯಮಾನಗಳ ನಡುವೆ ವಿಪಕ್ಷಗಳು, ಮಾಧ್ಯಮಗಳು ಸೇರಿದಂತೆ ಇನ್ನೂ ಹಲವಾರು ನಾಯಕರು ಅಸ್ಸಾಮ್ ರಾಜ್ಯದಲ್ಲಿ ಶಾಂತಿ ನೆಲೆಸಿಲ್ಲ, ಅಸ್ಸಾಂ ರಾಜ್ಯದ ಜನತೆಯೂ ಎನ್ಆರ್ಸಿ ಹಾಗೂ ಸಿಎಂ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಆದ ಕಾರಣ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷ ನೆಲ ಕಚ್ಚಲಿದೆ ಎಂದು ಹೇಳಿಕೆ ನೀಡಿದ್ದರು.

ಆದರೆ ಇತ್ತೀಚೆಗೆ ನಡೆದ ಅಸ್ಸಾಂ ರಾಜ್ಯದ ಕಾರ್ಬಿ ಆಂಗ್ಲಾಂಗ್‌ ಪಟ್ಟಣ ಸಮಿತಿ ಚುನಾವಣೆಯಲ್ಲಿ ಜನರೇ ಈ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಅಸ್ಸಾಂ ರಾಜ್ಯದ ಮೂಲ ಜನರು ಯಾರ ಪರವಾಗಿ ಇದ್ದಾರೆ ಎಂಬುದನ್ನು ಸಾರಿ ಹೇಳಿದ್ದಾರೆ. ಹೌದು ಇದೀಗ ಅಸ್ಸಾಂ ರಾಜ್ಯದ ಕಾರ್ಬಿ ಆಂಗ್ಲಾಂಗ್‌ ನಗರ ಸಮಿತಿ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಒಟ್ಟು 67 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷವು ಕಳೆದ ಚುನಾವಣೆ ಗಿಂತ 5 ಹೆಚ್ಚುವರಿ ಕ್ಷೇತ್ರಗಳನ್ನು ಗಳಿಸಿಕೊಂಡು ಒಟ್ಟಾರೆ 59 ಕ್ಷೇತ್ರಗಳಲ್ಲಿ ಜಯ ದಾಖಲಿಸಿದೆ, ಇನ್ನು ಪೌರತ್ವ ತಿದ್ದುಪಡಿ ಮಸೂದೆ ಹಾಗೂ ಎನ್ಆರ್ಸಿ ಯೋಜನೆಯನ್ನು ಅಸ್ತ್ರವಾಗಿ ಬಳಸಿದರೂ ಕಾಂಗ್ರೆಸ್ ಪಕ್ಷವು ಕಳೆದ ಬಾರಿಗಿಂತ ಒಂದು ಸ್ಥಾನ ಕಡಿಮೆ ಪಡೆದುಕೊಂಡು ಕೇವಲ ಮೂರು ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸಲು ಯಶಸ್ವಿಯಾಗಿದೆ. ಇನ್ನುಳಿದಂತೆ ಪಕ್ಷೇತರ ನಾಯಕರು ಐದು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದಾರೆ.