CAA ಜಾರಿಯಾದ ನಂತರ ಬಾಂಗ್ಲಾ ಗಡಿಯಲ್ಲಿ ನಡೆಯುತ್ತಿರುವ ಮಹತ್ವದ ಘಟನೆಯ ಕುರಿತು ಬಾಯಿಬಿಟ್ಟ ಬಿಎಸ್ಎಫ್ ಅಧಿಕಾರಿಗಳು ! ಹೇಳಿದ್ದೇನು ಗೊತ್ತಾ??

CAA ಜಾರಿಯಾದ ನಂತರ ಬಾಂಗ್ಲಾ ಗಡಿಯಲ್ಲಿ ನಡೆಯುತ್ತಿರುವ ಮಹತ್ವದ ಘಟನೆಯ ಕುರಿತು ಬಾಯಿಬಿಟ್ಟ ಬಿಎಸ್ಎಫ್ ಅಧಿಕಾರಿಗಳು ! ಹೇಳಿದ್ದೇನು ಗೊತ್ತಾ??

ನಮಸ್ಕಾರ ಸ್ನೇಹಿತರೇ, ದೇಶದಲ್ಲಿ ಇನ್ನೂ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಪರ-ವಿರೋಧ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಇಂದು ಕೂಡ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ವಿಧಾನ ಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧವಾಗಿ ವಿಧೇಯಕವನ್ನು ಮಂಡಿಸಿತು.

ಒಂದೆಡೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಸರ್ಕಾರಗಳು ವಿಧೇಯಕ ಮಂಡಿಸುವುದರಲ್ಲಿ ನಿರತರಾಗಿದ್ದರೆ ಮತ್ತೊಂದೆಡೆ ಕೆಲವು ರಾಜ್ಯಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿವೆ. ಮತ್ತೊಂದೆಡೆ ಕೇಂದ್ರ ಸರ್ಕಾರವು ಯಾವುದೇ ಕಾರಣಕ್ಕೂ ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದೆ. ಈ ಎಲ್ಲಾ ವಿದ್ಯಮಾನಗಳ ನಡುವೆ ಪೌರತ್ವ ತಿದ್ದುಪಡಿ ಮಸೂದೆ ಜಾರಿಯಾದ ಬಳಿಕ ಬಾಂಗ್ಲಾ ದೇಶದ ಗಡಿಯಲ್ಲಿ ನಡೆಯುತ್ತಿರುವ ಮಹತ್ವದ ಘಟನೆಯ ಬಗ್ಗೆ ಬಿಎಸ್ಸೆಫ್ ಅಧಿಕಾರಿಗಳು ಮಾತನಾಡಿದ್ದಾರೆ. ಹೌದು ಇಂದು ನಡೆದ ಮಹತ್ವದ ವಿದ್ಯಮಾನದಲ್ಲಿ ಬಿಎಸ್ಎಫ್ ಅಧಿಕಾರಿಗಳು ಈ ಕುರಿತು ಮಾತನಾಡಿದ್ದು, ಈಗಾಗಲೇ ಹಲವಾರು ಜನ ಹೆಚ್ಚು ಸಂಖ್ಯೆಯಲ್ಲಿ ಭಾರತ ದೇಶದಿಂದ ತಮ್ಮ ತಮ್ಮ ಮೂಲ ದೇಶಗಳಿಗೆ ವಾಪಸಾಗುತ್ತಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆಯಿಂದ ಅಕ್ರಮ ವಲಸಿಗರಿಗೆ ಆತಂಕ ಹೆಚ್ಚಾಗಿದೆ, ನಾವು ಇನ್ನು ಮುಂದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರಲು ಸಾಧ್ಯವಿಲ್ಲ ಎಂಬುದನ್ನು ಅರಿತಿರುವ ಈ ಜನರು ಗಂಟು ಮೂಟೆ ಕಟ್ಟಿಕೊಂಡು ಭಾರತವನ್ನು ಬಿಟ್ಟು ಹೊರ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ನಮ್ಮ ಗಮನಕ್ಕೆ ಬಂದಿದ್ದು ಈಗಾಗಲೇ ಇನ್ನೂರಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದು ಇನ್ನು ಹಲವಾರು ಜನ ಗಡಿ ದಾಟಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆ ಮೂಲಕ ಕೇಂದ್ರ ಸರ್ಕಾರ ಬಾಂಗ್ಲಾ ದೇಶದಿಂದ ವಲಸೆ ಬಂದಿರುವ ಅಕ್ರಮ ವಲಸಿಗರ ಮೇಲೆ ಕಠಿಣ ನಿಲುವನ್ನು ಪ್ರದರ್ಶನ ಮಾಡುತ್ತಿದ್ದು ಒಂದು ವೇಳೆ ಇಡೀ ದೇಶಾದ್ಯಂತ ಎನ್ಆರ್ಸಿ ಕೂಡ ಜಾರಿಯಾದರೇ ಅಕ್ರಮ ವಲಸಿಗರ ಕತೆ ಮುಂದೇನಾಗುತ್ತದೆ ಎಂಬ ಆತಂಕ ಅವರಲ್ಲಿ ಮೂಡಿದೆ ಎಂದು ಬಿಎಸ್ಎಫ್ ಅಧಿಕಾರಿಗಳು ಹೇಳಿದ್ದಾರೆ.