ಎನ್ಸಿಪಿ-ಕಾಂಗ್ರೆಸ್ ಪಕ್ಷಗಳಿಗೆ ಬಹಿರಂಗವಾಗಿ ಸೆಡ್ಡುಹೊಡೆದ ಉದ್ದವ್ ! ಸೋನಿಯಾಗೆ ‘ಕೈ’ ಕೊಟ್ಟು, ಮೋದಿ ಸರ್ಕಾರದ ನಿರ್ಧಾರಕ್ಕೆ ಜೈ ಎಂದು ಮಾಡಿದ್ದೇನು ಗೊತ್ತಾ??

ನಮಸ್ಕಾರ ಸ್ನೇಹಿತರೇ, ಇದೀಗ ದೇಶದ ರಾಜಕೀಯ ಪಂಡಿತರ ಲೆಕ್ಕಾಚಾರ ದಿನೇ ದಿನೇ ಮಹಾರಾಷ್ಟ್ರದ ಮಹಾ ಮೈತ್ರಿಯಲ್ಲಿ ಸತ್ಯವಾಗುತ್ತಿದೆ. ಮಹಾರಾಷ್ಟ್ರ ರಾಜಕೀಯದಲ್ಲಿ ಸಿದ್ಧಾಂತಗಳಿಗೆ ವಿರುದ್ಧವಾಗಿ ಮೈತ್ರಿ ಮಾಡಿಕೊಂಡ ಮೂರು ಪಕ್ಷಗಳಲ್ಲಿ ಭಿನ್ನಮತ ಭುಗಿಲೆದ್ದಿದೆ.

ಹೌದು ಇತ್ತೀಚೆಗಷ್ಟೇ ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರವರು ಭೀಮಾ- ಕೋರೆಗಾಂವ್‌ ತನಿಖೆಯನ್ನು ಎನ್ಐಎಗೆ ವಹಿಸಿದ ಕಾರಣ ಉದ್ಧವ್ ಠಾಕ್ರೆ ಅವರ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಎನ್ಸಿಪಿ ಪಕ್ಷವು ಮೊದಲ ಬಾರಿಗೆ ಬಹಿರಂಗವಾಗಿ ಬಂಡಾಯದ ಬಾವುಟ ಹಾರಿಸಿತ್ತು. ಇದರ ಬೆನ್ನಲ್ಲೇ ಇದೀಗ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾದ NPR ಯೋಜನೆಯನ್ನು ತನ್ನ ಕೈ ಕೆಳಗಡೆ ಇರುವ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡಲು ಬಿಡುವುದಿಲ್ಲ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದ ಸೋನಿಯಾ ಗಾಂಧಿ ಅವರಿಗೆ ಇದೇ ಮೊದಲ ಬಾರಿಗೆ ಉದ್ಧವ್ ಠಾಕ್ರೆ ಸೆಡ್ಡು ಹೊಡೆದಿದ್ದಾರೆ.‌

ಇಷ್ಟು ದಿವಸ ಉದ್ಧವ್ ಠಾಕ್ರೆ ಅವರ ಮೇಲೆ ಸೋನಿಯಾ ಗಾಂಧಿಯವರು ಹೇಳಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ನಡೆದು ಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದ್ದ ಬೆನ್ನಲ್ಲೇ ಮೋದಿ ಸರ್ಕಾರದ ಯಾವುದೇ ಮಸೂದೆಗಳನ್ನು ಮಹಾರಾಷ್ಟ್ರ ರಾಜ್ಯದಲ್ಲಿ ಜಾರಿಗೆ ತರಲು ಬಿಡುವುದಿಲ್ಲ ಎನ್ನುತ್ತಿದ್ದ ಉದ್ಧವ್ ಠಾಕ್ರೆ ಅವರು ಇದ್ದಕ್ಕಿದ್ದ ಹಾಗೆ ಮೋದಿ ಸರ್ಕಾರದ ಮಹತ್ವದ ಯೋಜನೆಯಾದ NPR ಯೋಜನೆಯನ್ನು ಮಹಾರಾಷ್ಟ್ರ ರಾಜ್ಯದಲ್ಲಿ ಜಾರಿಗೆ ತರಲು ಸಮ್ಮತಿ ನೀಡಿ ಆದೇಶ ಹೊರಡಿಸಿದ್ದಾರೆ. ಮಹಾರಾಷ್ಟ್ರದ ಶಿವಸೇನಾ ಶಾಸಕರ, ಸಂಸದರ ಹಾಗೂ ಪ್ರಮುಖವಾಗಿ ಶಿವಸೇನಾ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಈ ನಿರ್ಧಾರ ತೆಗೆದು ಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಇದರ ವಿರುದ್ಧ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕಿಡಿಕಾರಿದೆ. NPR ಯೋಜನೆಯನ್ನು ಎನ್ಆರ್ಸಿ ಮಸೂದೆಗೆ ಹಾಕಿದ ಮುಖವಾಡ ಎಂದು ಕಾಂಗ್ರೆಸ್ ಪಕ್ಷ ಎಲ್ಲ ರಾಜ್ಯಗಳಲ್ಲಿ ವಾದ ಮಂಡಿಸುತ್ತಿದೆ, ಆದರೆ ಅಷ್ಟರಲ್ಲಾಗಲೇ ಮಹಾರಾಷ್ಟ್ರ ರಾಜ್ಯದಲ್ಲಿ ಈ ಯೋಜನೆ ಜಾರಿಯಾಗುವುದು ಖಚಿತವಾಗಿದ್ದು, ಮಹಾ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿದೆ.

Post Author: Ravi Yadav