ಪ್ರಧಾನಿ ಭೇಟಿ ನಂತರ ಕಾಂಗ್ರೆಸ್ ಹಾಗೂ ಎನ್ಸಿಪಿ ಪಕ್ಷಗಳಿಗೆ ನುಂಗಲಾರದ ಬಿಸಿತುಪ್ಪ ವಾದ ಉದ್ಧವ್ ಠಾಕ್ರೆ ‌! ಯಾಕೆ ಗೊತ್ತಾ??

ಪ್ರಧಾನಿ ಭೇಟಿ ನಂತರ ಕಾಂಗ್ರೆಸ್ ಹಾಗೂ ಎನ್ಸಿಪಿ ಪಕ್ಷಗಳಿಗೆ ನುಂಗಲಾರದ ಬಿಸಿತುಪ್ಪ ವಾದ ಉದ್ಧವ್ ಠಾಕ್ರೆ ‌! ಯಾಕೆ ಗೊತ್ತಾ??

ನಮಸ್ಕಾರ ಸ್ನೇಹಿತರೇ, ನಿಮಗೆಲ್ಲರಿಗೂ ತಿಳಿದಿರುವಂತೆ ಬಿಜೆಪಿ ಪಕ್ಷದ ಜೊತೆ ಮೈತ್ರಿಯನ್ನು ತೊರೆದುಕೊಂಡು ಕಾಂಗ್ರೆಸ್ ಹಾಗೂ ಎನ್ಸಿಪಿ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿರುವ ಶಿವಸೇನಾ ಪಕ್ಷದ ಉದ್ಧವ್ ಠಾಕ್ರೆ ಅವರು ಇದೀಗ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಇಷ್ಟು ದಿವಸ ಕಾಂಗ್ರೆಸ್ ಹಾಗೂ ಎನ್ಸಿಪಿ ಪಕ್ಷಗಳ ಮಾತನ್ನು ಮೀರದೇ ಅಧಿಕಾರ ನಡೆಸಿಕೊಂಡು ಬರುತ್ತಿದ್ದ ಉದ್ಧವ್ ಠಾಕ್ರೆ ಅವರು ನಮಗೆಲ್ಲರಿಗೂ ತಿಳಿದಿರುವಂತೆ ಎರಡು ದಿನಗಳ ಹಿಂದೆ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ಇದಕ್ಕೂ ಮುನ್ನ ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಮಸೂದೆಯಾದ ಪೌರತ್ವ ತಿದ್ದುಪಡಿ ಮಸೂದೆ ಯನ್ನು ಮಹಾರಾಷ್ಟ್ರ ರಾಜ್ಯದಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಹೇಳಿಕೆ ನೀಡುತ್ತಿದ್ದ ಉದ್ಧವ್ ಠಾಕ್ರೆ ಅವರು ಇದೀಗ ಯು-ಟರ್ನ್ ಹೊಡೆದಿದ್ದಾರೆ. ಒಂದೆಡೆ ಕಾಂಗ್ರೆಸ್ ಪಕ್ಷವು ರಾಜ್ಯಗಳ ಬೆಂಬಲ ಪಡೆದುಕೊಂಡು ಪೌರತ್ವ ತಿದ್ದುಪಡಿ ಮಸೂದೆ ಯನ್ನು ಜಾರಿಗೊಳಿಸಬಾರದು ಎಂದು ಕೇಂದ್ರದ ಮೇಲೆ ಒತ್ತಡ ಹೇರುತ್ತಿರುವ ಸಂದರ್ಭದಲ್ಲಿ ಉದ್ಧವ್ ಠಾಕ್ರೆ ಅವರ ಈ ನಡೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಹೌದು ಇದೀಗ ಇದರ ಕುರಿತು ಮಾತನಾಡಿರುವ ಉದ್ಧವ ಠಾಕ್ರೆ ಅವರು, ಪೌರತ್ವ ತಿದ್ದುಪಡಿ ಮಸೂದೆ ಹಾಗೂ ರಾಷ್ಟ್ರೀಯ ನೋಂದಣಿ ಮಸೂದೆಗಳನ್ನು ಮಹಾರಾಷ್ಟ್ರ ರಾಜ್ಯದಲ್ಲಿ ಜಾರಿಗೆ ತರಲು ನಿರ್ಧರಿಸಿದ್ದೇನೆ. ಇದರ ಕುರಿತು ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ, ಇದರಿಂದ ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇವರ ಪ್ರತಿಕ್ರಿಯೆಗೆ ಸ್ಪಂದನೆ ನೀಡಿರುವ ಎನ್ಸಿಪಿ ಪಕ್ಷದ ಶರತ್ ಪವಾರ್ ಅವರು, ಉದ್ಧವ್ ಠಾಕ್ರೆ ಅವರ ಮನವೊಲಿಸಿ ತಮ್ಮ ನಿರ್ಧಾರದಿಂದ ಹಿಂದೆ ಹರಿಸುವಂತೆ ಮಾಡಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.