ಬಿಗ್ ನ್ಯೂಸ್: ಮೋದಿ ಕಾರ್ಯವೈಖರಿಯ ಬಗ್ಗೆ ಮಾತನಾಡಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಅರುಣ್ ಮಿಶ್ರಾ ! ಹೇಳಿದ್ದೇನು ಗೊತ್ತಾ??

ಬಿಗ್ ನ್ಯೂಸ್: ಮೋದಿ ಕಾರ್ಯವೈಖರಿಯ ಬಗ್ಗೆ ಮಾತನಾಡಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಅರುಣ್ ಮಿಶ್ರಾ ! ಹೇಳಿದ್ದೇನು ಗೊತ್ತಾ??

ನಮಸ್ಕಾರ ಸ್ನೇಹಿತರೇ, ನಿಮಗೆಲ್ಲರಿಗೂ ತಿಳಿದಿರುವಂತೆ ಭಾರತೀಯ ಕಾನೂನುಗಳು ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಕೂಡ ನ್ಯಾಯಾಂಗವೂ ಇದೇ ರೀತಿಯ ಸವಾಲುಗಳನ್ನು ಎದುರಿಸುತ್ತಿದೆ.

ಈ ಮಾತನ್ನು ಸ್ವತಹ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿರುವ ಅರುಣ್ ಮಿಶ್ರಾ ರವರು ಒಪ್ಪಿಕೊಂಡಿದ್ದಾರೆ. ಹೌದು ಇದರ ಕುರಿತು ಇದೀಗ ಮಾತನಾಡಿರುವ ಅರುಣ್ ಮಿಶ್ರಾ
ರವರು, ಸುಪ್ರೀಂ ಕೋರ್ಟ್ ನಲ್ಲಿ ನಡೆದ ಅಂತರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನದಲ್ಲಿ ಭಾಗವಹಿಸಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ನ್ಯಾಯಾಂಗ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ, ನ್ಯಾಯಾಂಗವು ಜಗತ್ತನ್ನು ಬದಲಾಯಿಸುವ ಮಹತ್ವದ ಪಾತ್ರ ವಹಿಸುತ್ತದೆ. ಇದರ ಕುರಿತು ನರೇಂದ್ರ ಮೋದಿರವರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಗಳು ಬಹಳ ಶ್ಲಾಘನೀಯ.

ಬಳಕೆಯಲ್ಲಿಲ್ಲದ ಸುಮಾರು 1500 ಕ್ಕೂ ಹೆಚ್ಚು ಕಾನೂನುಗಳನ್ನು ಮೋದಿ ಸರ್ಕಾರ ರದ್ದುಗೊಳಿಸಿದೆ, ಇದಕ್ಕಾಗಿ ನಾನು ಪ್ರಧಾನಿ ಮೋದಿ ಹಾಗೂ ಕಾನೂನು ಸಚಿವ ರವಿಶಂಕರ್ ಪ್ರಸಾದ್ ರವರಿಗೆ ವಿಶೇಷ ಧನ್ಯವಾದಗಳನ್ನು ತಿಳಿಸುತ್ತೇನೆ. ನರೇಂದ್ರ ಮೋದಿರವರು ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದ ದೂರದೃಷ್ಟಿ ಹಾಗೂ ಜಾಗತಿಕವಾಗಿ ಯೋಚನೆ ಮಾಡಿ ಸ್ಥಳೀಯವಾಗಿ ಕಾರ್ಯ ನಿರ್ವಹಣೆ ಮಾಡುವ ಬಹುಮುಖ ವ್ಯಕ್ತಿತ್ವ, ಇವರ ಉಸ್ತುವಾರಿ ಅಡಿಯಲ್ಲಿ ಭಾರತ ದೇಶವು ಅಂತಾರಾಷ್ಟ್ರೀಯ ಸಮುದಾಯದಲ್ಲಿ ಜವಾಬ್ದಾರಿಯುತ ಹಾಗೂ ಅತ್ಯಂತ ಸ್ನೇಹಪರ ಸದಸ್ಯನಾಗಿ ಹೊರಹೊಮ್ಮಿದೆ ಎಂದು ಶ್ಲಾಘಿಸಿದ್ದಾರೆ. ಭಾರತವು ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ, ಈ ಪ್ರಜಾಪ್ರಭುತ್ವ ದೇಶವು ತನ್ನದೇ ಆದ ವ್ಯವಸ್ಥೆಯ ಮೂಲಕ ಎಷ್ಟು ಯಶಸ್ವಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತದೆ ಎಂಬುದನ್ನು ನೋಡಿ ಎಲ್ಲರೂ ಆಶ್ಚರ್ಯ ಪಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ