ಮೋದಿಗೂ ಮುನ್ನವೇ ಜನಸಂಖ್ಯಾ ನಿಯಂತ್ರಣ ಕಾನೂನಿನ ಅಡಿಯಲ್ಲಿ ಮಹತ್ವದ ಹೆಜ್ಜೆ ಇಡಲು ಮುಂದಾದ ಯೋಗಿ ಮಾಡಲು ಹೊರಟಿರುವುದು ಏನು ಗೊತ್ತಾ??

ನಮಸ್ಕಾರ ಸ್ನೇಹಿತರೇ ಇದೀಗ ದೇಶದ ಎಲ್ಲೆಡೆ ಪೌರತ್ವ ತಿದ್ದುಪಡಿ ಮಸೂದೆ ಹಾಗೂ ಎನ್ಆರ್ಸಿ ಯೋಜನೆಗಳು ಸದ್ದು ಮಾಡುತ್ತಿರುವ ಸಂದರ್ಭದಲ್ಲಿ ಮತ್ತೊಂದೆಡೆ ದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿಯಾಗುತ್ತದೆ, ಮೋದಿ ಸರ್ಕಾರ ನೀಡಿದ ಮಾತನ್ನು ಉಳಿಸಿ ಕೊಳ್ಳುತ್ತದೆ ಎಂದು ಎಲ್ಲೆಡೆ ಅಭಿಪ್ರಾಯಗಳು ಕೇಳಿಬರುತ್ತಿವೆ.

ಈಗಾಗಲೇ ತನ್ನ ಪ್ರಣಾಳಿಕೆಯಲ್ಲಿನ ಬಹುಮುಖ್ಯ ಅಂಶಗಳನ್ನು ಜಾರಿಗೊಳಿಸುವುದರಲ್ಲಿ ನಿರತವಾಗಿರುವ ಬಿಜೆಪಿ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಮಾತು ನೀಡಿದಂತೆ ಜನಸಂಖ್ಯಾ ನಿಯಂತ್ರಣ ಕಾನೂನನ್ನು ಜಾರಿಗೆ ತಂದೇ ತರುತ್ತದೆ ಎಂದು ಎಲ್ಲರೂ ನಂಬಿದ್ದಾರೆ. ಆದರೆ ಅಷ್ಟರಲ್ಲಾಗಲೇ ಯೋಗಿ ಆದಿತ್ಯನಾಥ್ ರವರು ಕೇಂದ್ರ ಸರಕಾರಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ಜನಸಂಖ್ಯಾ ನಿಯಂತ್ರಣ ಕಾನೂನಿಗೆ ಪೂರಕವಾಗಿರುವ ಹೊಸ ಕಾನೂನನ್ನು ಜಾರಿಗೆ ತರಲು ಉತ್ತರ ಪ್ರದೇಶದಲ್ಲಿ ಯೋಜನೆಯೊಂದನ್ನು ರೂಪಿಸುತ್ತಿದ್ದಾರೆ.

ಇದೀಗ ಬಂದಿರುವ ಅಧಿಕೃತ ಮಾಹಿತಿಗಳ ಪ್ರಕಾರ ಯೋಗಿ ಆದಿತ್ಯನಾಥ್ ಸರ್ಕಾರವು ಈಗಾಗಲೇ ವಿಶೇಷ ತಂಡವನ್ನು ರಚಿಸಿದ್ದು, ಜನಸಂಖ್ಯೆಯ ನಿಯಂತ್ರಣದಲ್ಲಿ ಇಟ್ಟು ಕೊಳ್ಳಬೇಕು ಎಂದರೆ ಯಾವ ರೀತಿಯ ಕಾನೂನುಗಳು ನಮ್ಮ ರಾಜ್ಯದಲ್ಲಿ ಜಾರಿಗೆ ತರಬೇಕು ಎಂಬುದರ ಕುರಿತು ಚಿಂತನೆ ನಡೆಸಿವೆ.

ಮೂಲಗಳ ಪ್ರಕಾರ ರಾಜ್ಯ ಸರ್ಕಾರದ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಎಲ್ಲಾ ಪ್ರಯೋಜನಗಳನ್ನು ಸ್ಥಗಿತಗೊಳಿಸಿ ಪೋಷಕರನ್ನು ಎರಡು ಮಕ್ಕಳು ಹೊಂದುವಂತೆ ಮಾಡುವುದು, ಒಂದು ವೇಳೆ ಈ ನೀತಿಯನ್ನು ಮೀರಿ ಎರಡಕ್ಕಿಂತ ಹೆಚ್ಚು ಮಕ್ಕಳು ಮಾಡಿಕೊಂಡರೆ ಕುಟುಂಬ ಕಲ್ಯಾಣ ಹಾಗೂ ರಾಜ್ಯ ಸರ್ಕಾರದ ಯಾವುದೇ ಕಲ್ಯಾಣ ಯೋಜನೆಗಳ ಅಡಿಯಲ್ಲಿ ನೀಡುವ ಪ್ರಯೋಜನಗಳು ಅವರಿಗೆ ಲಭ್ಯವಾಗುವುದಿಲ್ಲ. ಇನ್ನು ಸರ್ಕಾರಿ ನೌಕರರಿಗೆ ಇಷ್ಟು ದಿವಸ ನೀಡಲಾಗುತ್ತಿದ್ದ ಶಾಲಾ ಶುಲ್ಕ ಭತ್ಯೆಯನ್ನು ಮರುಪಾವತಿ ಮಾಡುವುದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ಇದಕ್ಕಾಗಿಯೇ ರಚನೆಯಾಗಿರುವ ವಿಶೇಷ ತಂಡವು ಇತರ ರಾಜ್ಯಗಳಲ್ಲಿ ಜಾರಿಗೆ ತಂದಿರುವ ಜನಸಂಖ್ಯಾ ನಿಯಂತ್ರಣ ಕಾನೂನನ್ನು ಅಧ್ಯಯನ ಮಾಡಿ ಮತ್ತಷ್ಟು ಅಂಶಗಳನ್ನು ಸೇರಿಸುವ ಕೆಲಸದಲ್ಲಿ ನಿರತವಾಗಿದೆ. ಈ ಕಾನೂನಿನ ಕುರಿತು ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸ್ನಲ್ಲಿ ತಿಳಿಸಿ.

Post Author: Ravi Yadav