ಬಿಗ್ ಬ್ರೇಕಿಂಗ್: ಚೀನಾ ಗಡಿಯ ಕುರಿತು ಮಹತ್ವದ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ !

ಬಿಗ್ ಬ್ರೇಕಿಂಗ್: ಚೀನಾ ಗಡಿಯ ಕುರಿತು ಮಹತ್ವದ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ !

ನಮಸ್ಕಾರ ಸ್ನೇಹಿತರೇ, ಇದೀಗ ಭಾರತ ಹಾಗೂ ಚೀನಾ ದೇಶದ ಗಡಿಯಲ್ಲಿ ಯಾವ ರೀತಿಯ ಪರಿಸ್ಥಿತಿ ಉಂಟಾಗಿದೆ ಎಂಬುದು ನಿಮಗೆಲ್ಲರಿಗೂ ತಿಳಿದೇ ಇದೆ. ಗಡಿಯಲ್ಲಿ ನಡೆಯುತ್ತಿರುವ ಭಾರತದ ಅಭಿವೃದ್ಧಿ ಕೆಲಸಗಳು ಚೀನಾ ದೇಶಕ್ಕೆ ಸವಾಲಾಗಿ ಪರಿಣಮಿಸಲಿದೆ ಎಂಬ ಆಲೋಚನೆಯಿಂದ ಚೀನಾ ಸುಖಾಸುಮ್ಮನೆ ಖ್ಯಾತೆ ತೆಗೆಯುತ್ತಿದೆ.

ಇದೀಗ ಇದರ ಕುರಿತು ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಬಿಪಿನ್ ರಾವತ್ ಹಾಗೂ ಅಜಿತ್ ದೋವಲ್ ರವರು ಕೂಡ ಈ ನಿರ್ಧಾರದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ಸರಣಿ ಸಭೆಗಳನ್ನು ನಡೆಸಿದ ಬಳಿಕ ಗಡಿಯಲ್ಲಿನ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ಭೂಸೇನೆ, ವಾಯುಪಡೆ ಹಾಗೂ ನೌಕಾಪಡೆಗೆ ಯಾವುದೇ ಪರಿಸ್ಥಿತಿಯನ್ನು ಸ್ವತಂತ್ರವಾಗಿ ಎದುರಿಸಲು ಆದೇಶ ಹೊರಡಿಸಿದೆ.

ಎಲ್ಲ ರೀತಿಯ ಶಸ್ತ್ರಾಸ್ತ್ರಗಳನ್ನು ಸಿದ್ಧಪಡಿಸಿಕೊಳ್ಳಲು ಹಾಗೂ ಯಾವುದೇ ರೀತಿಯ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲರೂ ಸಿದ್ಧರಾಗಿರಬೇಕು. ಯಾವುದೇ ಪರಿಸ್ಥಿತಿಯಲ್ಲಾಗಲಿ ನೀವು ದೆಹಲಿ ಅಂದರೆ ಸರ್ಕಾರದ ಕದ ತಟ್ಟ ಬಾರದು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಿ, ನೀವು ಸರ್ಕಾರದ ಆದೇಶಕ್ಕೆ ಕಾಯುವ ಅವಶ್ಯಕತೆ ಇಲ್ಲ, ನಿಮಗೆ ಸಂಪೂರ್ಣ ಸ್ವತಂತ್ರ ನೀಡುತ್ತಿದ್ದೇವೆ ಎಂದು ಆದೇಶ ಹೊರಡಿಸಿದೆ‌. ಇದೇ ರೀತಿ ಕಳೆದ ಬಾರಿ ಸಂಪೂರ್ಣ ಸ್ವಾತಂತ್ರ್ಯ ನೀಡಿದಾಗ ಜಮ್ಮು ಹಾಗೂ ಕಾಶ್ಮೀರ ದಲ್ಲಿ ಏನು ನಡೆಯಿತು ಎಂಬುದು ನಮಗೆಲ್ಲರಿಗೂ ತಿಳಿದೇ ಇದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರದ ಈ ನಡೆ ಬಾರಿ ಮಹತ್ವವನ್ನು ಪಡೆದು ಕೊಂಡಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ