ಬೆಂಗಳೂರಿನ ಘಟನೆಯ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದ ತೇಜಸ್ವಿ ಸೂರ್ಯ ! ಮನವಿ ಮಾಡಿದ್ದೇನು ಗೊತ್ತಾ??

ಬೆಂಗಳೂರಿನ ಘಟನೆಯ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದ ತೇಜಸ್ವಿ ಸೂರ್ಯ ! ಮನವಿ ಮಾಡಿದ್ದೇನು ಗೊತ್ತಾ??

ನಮಸ್ಕಾರ ಸ್ನೇಹಿತರೇ ಕಳೆದ ರಾತ್ರಿಯಿಂದ ಬೆಂಗಳೂರಿನಲ್ಲಿ ನಡೆದ ಘಟನೆ ಇಡೀ ದೇಶದಲ್ಲಿ ಸದ್ದು ಮಾಡಲು ಆರಂಭಿಸಿದೆ. ರಾಷ್ಟ್ರೀಯ ಮಾಧ್ಯಮಗಳು ಕೂಡ ಈ ಕುರಿತು ವರದಿ ಮಾಡಿದ್ದು, ಮನಬಂದಂತೆ ತಮ್ಮದೇ ಆದ ಕಾರಣಗಳನ್ನು ನೀಡುತ್ತಾ ಕೆಲವರು ನಡೆದ ಘಟನೆ ತಪ್ಪು ಎಂದು ಸುಮ್ಮನಾದರೇ ಇನ್ನು ಕೆಲವರು ಘಟನೆ ನಡೆದದ್ದು ತಪ್ಪು, ಆದರೆ ಅದಕ್ಕೆ ಕಾರಣ ಪೊಲೀಸರು ಎಂದೆಲ್ಲ ವರದಿಗಳನ್ನು ಸಿದ್ದಪಡಿಸಿ TRP ಜಾಸ್ತಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನು ಇದರ ಕುರಿತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇದು ಕೇವಲ ತೇಜಸ್ವಿ ಸೂರ್ಯ ರವರ ಮನವಿ ಮಾತ್ರವಲ್ಲದೇ, ಇನ್ನೂ ಹಲವಾರು ನಾಯಕರು ಹಾಗೂ ಮಾಧ್ಯಮದವರು ಕೂಡ ಈ ರೀತಿಯ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕು ಎಂದು ಮನವಿ ಮಾಡುತ್ತಿದ್ದಾರೆ.

ಇದರ ಕುರಿತು ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ತೇಜಸ್ವಿ ಸೂರ್ಯ ರವರು, ಯೋಗಿ ಆದಿತ್ಯನಾಥ್ ಅವರು ಕಳೆದ ಬಾರಿ ಉತ್ತರ ಪ್ರದೇಶದಲ್ಲಿ ಇದೇ ರೀತಿಯ ಘಟನೆಗಳು ನಡೆದು ಸಾರ್ವಜನಿಕ ಆಸ್ತಿಪಾಸ್ತಿಗಳು ನಷ್ಟವಾದಾಗ, ಘಟನೆಯಲ್ಲಿ ಭಾಗಿಯಾಗಿದ್ದ ಜನರಿಂದ ಪರಿಹಾರ ವಸೂಲಿ ಮಾಡಲು ಮುಂದಾಗಿ ಅವರ ಆಸ್ತಿಪಾಸ್ತಿಗಳನ್ನು ವಶಪಡಿಸಿಕೊಳ್ಳಲು ನಿರ್ಧಾರ ಮಾಡಿದರು. ಆದರೆ ಕೆಲವರು ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲು ಏರಿ, ಇದಕ್ಕೆ ಸಾವಿಧಾನಿಕ ವಾಗಿ ಅವಕಾಶ ಇಲ್ಲ ಎಂದು ಹೈಕೋರ್ಟ್ ಮೂಲಕ ಹೇಳಿಸಲು ಪ್ರಯತ್ನ ಪಡುತ್ತಿರುವ ಸಂದರ್ಭದಲ್ಲಿ ಸುಗ್ರೀವಾಜ್ಞೆ ಮೂಲಕ ಯೋಗಿ
ಆದಿತ್ಯನಾಥ್ ರವರು ಘಟನೆಯಲ್ಲಿ ಭಾಗಿಯಾದ ಎಲ್ಲರ ಆಸ್ತಿ ಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಸರ್ಕಾರದ ಆಸ್ತಿಪಾಸ್ತಿಗಳಿಗೆ ಹಾಗೂ ಜನ ಸಾಮಾನ್ಯರಿಗೆ ಪರಿಹಾರ ನೀಡಿದರು.

ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಅದೇ ರೀತಿಯ ನಿರ್ಧಾರ ತೆಗೆದುಕೊಂಡು ಘಟನೆಯಲ್ಲಿ ಭಾಗಿಯಾದ ಪ್ರತಿಯೊಬ್ಬರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಸಾರ್ವಜನಿಕ ಆಸ್ತಿಗಳಿಗೆ ಉಂಟಾಗಿರುವ ನಷ್ಟ ತುಂಬಬೇಕು ಎಂದು ಮನವಿ ಮಾಡಿದ್ದಾರೆ. ಬೆಂಗಳೂರು ನಗರ ಶಾಂತಿ ಮತ್ತು ಸಾಮರಸ್ಯ ಸಮಾಜಕ್ಕೆ ಹೆಸರುವಾಸಿಯಾಗಿದೆ ನಮ್ಮ ನಗರದ ಈ ಶಕ್ತಿಯನ್ನು ನಾವು ಎಷ್ಟೇ ಕಷ್ಟವಾದರೂ ಸರಿ ರಕ್ಷಣೆ ಮಾಡಬೇಕು ಎಂದು ಪತ್ರದ ಮೂಲಕ ಟ್ವೀಟ್ ಮಾಡಿದ್ದಾರೆ.