ಕಾಂಗ್ರೆಸ್ ಪಕ್ಷಕ್ಕೆ ಮರ್ಮಾಘಾತ ! ಸಂದಿಗ್ಧ ಪರಿಸ್ಥಿತಿಯಲ್ಲಿ ರಾಹುಲ್ ಗಾಂಧಿ ಹೇಳಿಕೆಯಿಂದ ಮತ್ತಷ್ಟು ಬಿಗಡಾಯಿಸಿದ ಪರಿಸ್ಥಿತಿ !

ಕಾಂಗ್ರೆಸ್ ಪಕ್ಷಕ್ಕೆ ಮರ್ಮಾಘಾತ ! ಸಂದಿಗ್ಧ ಪರಿಸ್ಥಿತಿಯಲ್ಲಿ ರಾಹುಲ್ ಗಾಂಧಿ ಹೇಳಿಕೆಯಿಂದ ಮತ್ತಷ್ಟು ಬಿಗಡಾಯಿಸಿದ ಪರಿಸ್ಥಿತಿ !

ನಮಸ್ಕಾರ ಸ್ನೇಹಿತರೇ, ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ ಸೋನಿಯಾ ಗಾಂಧಿಯವರ ಮಧ್ಯಂತರ ಅಧ್ಯಕ್ಷ ಸ್ಥಾನದ ಪಟ್ಟದ ಅವಧಿ ಮುಗಿದ ಕಾರಣ ಇಂದು ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕಾರಣಿ ಸಭೆಯಲ್ಲಿ ರಾಜೀನಾಮೆ ಪ್ರಸ್ತಾಪವನ್ನು ಇರಿಸಿ ರಾಜೀನಾಮೆ ನೀಡಿದ್ದಾರೆ. ಇದಾದ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಹೊಸ ಅಧ್ಯಕ್ಷ ಯಾರಾಗಬಹುದು ಎಂಬ ಕುತೂಹಲ ಕೆಲವರಲ್ಲಿ ಮೂಡಿತಾದರೂ, ಯಾವುದೇ ಕಾರಣಕ್ಕೂ ಗಾಂಧಿ ಕುಟುಂಬದವರನ್ನು ಹೊರತುಪಡಿಸಿ ಇನ್ಯಾವುದೇ ನಾಯಕರು ಅಧ್ಯಕ್ಷರಾಗಲು ಸಾಧ್ಯವಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಇದು ಪಕ್ಷದ ಹಿತದೃಷ್ಟಿಯಿಂದ ಹಿರಿಯ ನಾಯಕರು ಕೈಗೊಂಡ ನಿರ್ಧಾರ ಎಂಬ ಮಾತುಗಳು ಕೂಡ ಕೇಳಿ ಬಂದಿದ್ದವು. ಯಾಕೆಂದರೆ ಒಂದು ವೇಳೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಪಟ್ಟ ಗಾಂಧಿ ಕುಟುಂಬದೇಯಯೇತರ ವ್ಯಕ್ತಿಗೆ ದೊರಕಿದ್ದಲ್ಲಿ ಪಕ್ಷದಲ್ಲಿ ಹಲವಾರು ಭಿನ್ನಮತೀಯ ಮಾತುಗಳು ಕೇಳಿ ಬರಬಹುದು ಎಂಬ ಆ’ತಂಕ ಎಲ್ಲರಲ್ಲೂ ಮನೆ ಮಾಡಿತ್ತು.

ಈಗಾಗಲೇ ಕಾಂಗ್ರೆಸ್ ಪಕ್ಷ ದೇಶದಲ್ಲಿ ಬಹುತೇಕ ಮುಳುಗಿದ್ದು ಲೋಕಸಭಾ ಚುನಾವಣೆಯಲ್ಲಿ ಕೇವಲ ಎರಡಂಕಿ ಸೀಟುಗಳನ್ನು ಮಾತ್ರ ಪಡೆದು ಕೊಳ್ಳುವಲ್ಲಿ ಮಾತ್ರ ಯಶಸ್ವಿಯಾಗಿದೆ. ಇನ್ನು ಕೆಲವೇ ಕೆಲವು ದಿನಗಳಲ್ಲಿ ದೇಶದ ರಾಜಕೀಯಕ್ಕೆ ಮಹತ್ವದ ತಿರುವು ನೀಡುವ ಶಕ್ತಿ ಹೊಂದಿರುವ ಉತ್ತರ ಪ್ರದೇಶದ ರಾಜ್ಯದ ಚುನಾವಣೆ ನಡೆಯಲಿದೆ, ಒಂದು ವೇಳೆ ಕಾಂಗ್ರೆಸ್ ಪಕ್ಷವು ಈ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರೇ ಖಂಡಿತ ಇದು ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿ- ಣಾಮ ಬೀರುವುದು ಖಚಿತ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಸ್ಥಾನದ ಆಯ್ಕೆ ಬಹಳ ಕುತೂಹಲ ಕೆರಳಿಸಿತ್ತು.

ಆದರೆ ಪಕ್ಷದ ಸಭೆ ಆರಂಭವಾದ ತಕ್ಷಣ ರಾಹುಲ್ ಗಾಂಧಿ ರವರು ಸೋನಿಯಾಗಾಂಧಿ ರವರಿಗೆ ಕಾಂಗ್ರೆಸ್ ಪಕ್ಷದ 23 ಪ್ರಮುಖ ನಾಯಕರು ಪತ್ರ ಬರೆದಿದ್ದ ವಿಷಯವನ್ನು ಪ್ರಸ್ತಾಪ ಮಾಡಿ ಬಿಜೆಪಿ ಪಕ್ಷದ ಕೈವಾಡವಿದೆ ಎಂದು ಹೇಳುವ ಮೂಲಕ ಸಭೆಯಲ್ಲಿ ಕೋಲಾ – ಹಲ ಉಂಟು ಮಾಡಿದರು. ರಾಹುಲ್ ಗಾಂಧಿ ರವರ ಮಾತಿನಿಂದ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದ್ದು ಕಳೆದ ಮೂವತ್ತು ವರ್ಷಗಳಿಂದ ನಾವು ಕಾಂಗ್ರೆಸ್ ಪಕ್ಷದ ಸೇವೆ ಮಾಡುತ್ತಿದ್ದೇವೆ ಇಲ್ಲಿಯವರೆಗೂ ಬಿಜೆಪಿ ಪಕ್ಷದ ಪರವಾಗಿ ಹೇಳಿಕೆಗಳನ್ನು ಕೂಡ ನೀಡಿಲ್ಲ. ಇಂತಹ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೀಗೆ ಮಾತನಾಡುವುದು ಸರಿಯಲ್ಲ ಎಂದು ಬಹಿರಂಗವಾಗಿ ಕಪಿಲ್ ಸಿಬಲ್ ಟ್ವೀಟ್ ಮಾಡಿದ್ದಾರೆ. ಮತ್ತೊಂದು ಕಡೆ ಗುಲಾಬ್ ನಬಿ ಆಜಾದ್ ರವರು ರಾಹುಲ್ ಗಾಂಧಿ ಹೇಳಿಕೆಗೆ ಗರಂ ಆಗಿ ಒಂದು ವೇಳೆ ರಾಹುಲ್ ಗಾಂಧಿ ಅವರು ಬಿಜೆಪಿ ಪಕ್ಷದ ಜೊತೆ ನನ್ನ ಸಂಪರ್ಕವನ್ನು ನಿರೂಪಿಸಿದಲ್ಲಿ ನಾನು ರಾಜೀನಾಮೆ ನೀಡಲು ಸಿದ್ದನಿದ್ದೇನೆ ಎಂದು ಹೇಳಿದ್ದಾರೆ. ಇನ್ನು ಸಭೆಯಲ್ಲಿಯೇ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುವ ಗುಲಾಂ ನಬಿ ಆಜಾದ್ ರವರು ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಯು ಕೂಡ ಬಹಿರಂಗ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.