ಬಾಯಲ್ಲಿ ನೀರೂರಿಸುವಂತಹ ಟೊಮೇಟೊ ತೊಕ್ಕು ಮನೆಯಲ್ಲಿಯೇ ಹೀಗೆ ಮಾಡಿ ನೋಡಿ, ಎಲ್ಲರೂ ಇಷ್ಟ ಪಡುತ್ತಾರೆ.

ಬಾಯಲ್ಲಿ ನೀರೂರಿಸುವಂತಹ ಟೊಮೇಟೊ ತೊಕ್ಕು ಮನೆಯಲ್ಲಿಯೇ ಹೀಗೆ ಮಾಡಿ ನೋಡಿ, ಎಲ್ಲರೂ ಇಷ್ಟ ಪಡುತ್ತಾರೆ.

ನಮಸ್ಕಾರ ಸ್ನೇಹಿತರೇ, ಇಂದು ನಾವು ಟೊಮೇಟೊ ತೊಕ್ಕು ಮಾಡುವ ವಿಧಾನವನ್ನು ನಿಮಗೆ ತಿಳಿಸಲಾಗಿದೆ. ಟೊಮೇಟೊ ತೊಕ್ಕು ಮಾಡಲು ಬೇಕಾಗುವ ಸಾಮಗ್ರಿಗಳು: ಅರ್ಧ ಕೆಜಿ ಟೊಮೇಟೊ, ನಿಂಬೆಹಣ್ಣು ಗಾತ್ರದ ಹುಣಸೆಹಣ್ಣು, 1ಚಮಚ ಮೆಂತ್ಯ, 2 ಚಮಚ ಸಾಸಿವೆ, ಅರ್ಧ ಚಮಚ ಜೀರಿಗೆ, 2 ಚಮಚ ಅಚ್ಚಖಾರದ ಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಅರ್ಧ ಚಮಚ ಅರಿಶಿನ ಪುಡಿ, ಕಾಲು ಬಟ್ಟಲು ಎಣ್ಣೆ, 2 ಗೆಡ್ಡೆ ಬೆಳ್ಳುಳ್ಳಿ, 2 ಒಣಮೆಣಸಿನಕಾಯಿ, ಸ್ವಲ್ಪ ಇಂಗು, 20 ಗ್ರಾಂ ಬೆಲ್ಲ.

ಟೊಮೇಟೊ ತೊಕ್ಕು ಮಾಡುವ ವಿಧಾನ: ಮೊದಲಿಗೆ ಗ್ಯಾಸ್ ಮೇಲೆ ಒಂದು ಬಾಣಲೆಯಲ್ಲಿ ಇಟ್ಟುಕೊಂಡು ಅದಕ್ಕೆ ಎರಡು ಚಮಚದಷ್ಟು ಎಣ್ಣೆಯನ್ನು ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ ಇದಕ್ಕೆ ಸಣ್ಣಗೆ ಹಚ್ಚಿದ ಟೊಮೆಟೊ ಹಾಗೂ ನಿಂಬೆ ಹಣ್ಣುನ್ನು ಹಾಕಿ ಮಧ್ಯಮ ಉರಿಯಲ್ಲಿ ಮೆತ್ತಗಾಗುವವರೆಗೆ ಬೇಯಲು ಬಿಡಿ. ಟೊಮೇಟೊ ಬೇಯುವಾಗ ಮತ್ತೊಂದು ಕಡೆ ಗ್ಯಾಸ್ ಮೇಲೆ ಒಂದು ಬಾಣಲೆಯನ್ನು ಇಟ್ಟುಕೊಂಡು ಅದಕ್ಕೆ 1 ಚಮಚದಷ್ಟು ಮೆಂತ್ಯವನ್ನು ಹಾಕಿ ಕೆಂಪು ಬಣ್ಣಕ್ಕೆ ತಿರುಗುವವರೆಗೂ ಫ್ರೈ ಮಾಡಿಕೊಂಡು ಒಂದು ಬಟ್ಟಲಿಗೆ ಹಾಕಿಕೊಳ್ಳಿ. ನಂತರ ಸಾಸಿವೆಯನ್ನು ಹಾಕಿ ಫ್ರೈ ಮಾಡಿಕೊಂಡು ಅದೇ ಬಟ್ಟಲಿಗೆ ಹಾಕಿಕೊಳ್ಳಿ. ನಂತರ ಅರ್ಧ ಚಮಚದಷ್ಟು ಜೀರಿಗೆಯನ್ನು ಹಾಕಿ ಫ್ರೈ ಮಾಡಿಕೊಂಡು ಅದೇ ಬಟ್ಟಲಿಗೆ ಹಾಕಿಕೊಂಡು ತಣ್ಣಗಾಗಲು ಬಿಡಿ.

ನಂತರ ಒಂದು ಮಿಕ್ಸಿ ಜಾರಿಗೆ ಫ್ರೈ ಮಾಡಿದ ಪದಾರ್ಥಗಳನ್ನು ಹಾಕಿ ನುಣ್ಣಗೆ ಪುಡಿ ಮಾಡಿಕೊಳ್ಳಿ. ಟೊಮೇಟೊ ಚೆನ್ನಾಗಿ ಬೆಂದ ನಂತರ ತಣ್ಣಗಾಗಲು ಬಿಡಿ. ತಣ್ಣಗಾದ ನಂತರ ಒಂದು ಮಿಕ್ಸಿ ಜಾರಿಗೆ ಹಾಕಿ ನುಣ್ಣಗೆ ರುಬ್ಬಿಕೊಂಡು ಒಂದು ಬಟ್ಟಲಿಗೆ ಹಾಕಿಕೊಳ್ಳಿ. ನಂತರ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಅಚ್ಚ ಖಾರದ ಪುಡಿ, ಅರ್ಧ ಚಮಚ ಅರಿಶಿನ ಪುಡಿ, ಹುರಿದ ಮಾಡಿದ ಪುಡಿಯನ್ನು ಹಾಕಿ ಮಿಕ್ಸ್ ಮಾಡಿಕೊಳ್ಳಿ. ನಂತರ ಗ್ಯಾಸ್ ಮೇಲೆ ಒಂದು ಬಾಣಲೆಯನ್ನು ಇಟ್ಟುಕೊಂಡು ಅದಕ್ಕೆ ಎಣ್ಣೆಯನ್ನು ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ ಸ್ವಲ್ಪ ಸಾಸಿವೆ, ಸಣ್ಣಗೆ ಹಚ್ಚಿದ ಬೆಳ್ಳುಳ್ಳಿಯನ್ನು ಹಾಕಿ ಕೆಂಪಗಾಗುವವರೆಗೂ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಒಣಮೆಣಸಿನಕಾಯಿ, ಸ್ವಲ್ಪ ಕರಿಬೇವು, ಸ್ವಲ್ಪ ಇಂಗು ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ರುಬ್ಬಿದ ಟೊಮೆಟೊ ಹಾಗೂ ಸ್ವಲ್ಪ ಬೆಲ್ಲವನ್ನು ಹಾಕಿ ಮಿಕ್ಸ್ ಮಾಡಿಕೊಂಡರೆ ಟೊಮೇಟೊ ತೊಕ್ಕು ಸವಿಯಲು ಸಿದ್ಧ.