ಮೈದಾ ಪರೋಟ ಒಳ್ಳೆಯದಲ್ಲ ಎಂದು ಯೋಚನೇನ?? ಗೋದಿ ಪರೋಟ ಟ್ರೈ ಮಾಡಿ, ರುಚಿ ಆರೋಗ್ಯ ಎರಡು ಸಿಗುತ್ತದೆ.

ಮೈದಾ ಪರೋಟ ಒಳ್ಳೆಯದಲ್ಲ ಎಂದು ಯೋಚನೇನ?? ಗೋದಿ ಪರೋಟ ಟ್ರೈ ಮಾಡಿ, ರುಚಿ ಆರೋಗ್ಯ ಎರಡು ಸಿಗುತ್ತದೆ.

ನಮಸ್ಕಾರ ಸ್ನೇಹಿತರೇ, ಇಂದು ನಾವು ವೆಜ್ ಗೋಧಿ ಪರೋಟ ಮಾಡುವ ವಿಧಾನವನ್ನು ನಿಮಗೆ ತಿಳಿಸಲಾಗಿದೆ. ವೆಜ್ ಗೋಧಿ ಪರೋಟ ಮಾಡಲು ಬೇಕಾಗುವ ಪದಾರ್ಥಗಳು: 1 ಬಟ್ಟಲು ಹಸಿ ಬಟಾಣಿ, ಸ್ವಲ್ಪ ಕೊತ್ತಂಬರಿ ಸೊಪ್ಪು, ಸ್ವಲ್ಪ ಪುದೀನಾ, ಸ್ವಲ್ಪ ಎಣ್ಣೆ, 1 ಈರುಳ್ಳಿ, 1 ಬೇಯಿಸಿ ಸ್ಮ್ಯಾಶ್ ಮಾಡಿದ ಆಲೂಗೆಡ್ಡೆ, ಕಾಲು ಚಮಚ ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಸ್ವಲ್ಪ ಅಚ್ಚಖಾರದ ಪುಡಿ, ಸ್ವಲ್ಪ ಜೀರಿಗೆ ಪುಡಿ, ಸ್ವಲ್ಪ ಗರಂ ಮಸಾಲ, ರುಚಿಗೆ ತಕ್ಕಷ್ಟು ಉಪ್ಪು, ಸ್ವಲ್ಪ ಆಮ್ ಚೂರ್ ಪೌಡರ್ ಅಥವಾ ನಿಂಬೆ ಹಣ್ಣಿನ ರಸ, ಸ್ವಲ್ಪ ಗೋಧಿ ಹಿಟ್ಟು, ಅರ್ಧ ಚಮಚ ಸಕ್ಕರೆ.

ವೆಜ್ ಗೋಧಿ ಪರೋಟ ಮಾಡುವ ವಿಧಾನ: ಮೊದಲಿಗೆ ಒಂದು ಸಣ್ಣ ಮಿಕ್ಸಿ ಜಾರನ್ನು ತೆಗೆದುಕೊಂಡು ಅದಕ್ಕೆ ಹಸಿ ಬಟಾಣಿ, ಸ್ವಲ್ಪ ಕೊತ್ತಂಬರಿ ಸೊಪ್ಪು, ಸ್ವಲ್ಪ ಪುದೀನಾವನ್ನು ಹಾಕಿ ನುಣ್ಣಗೆ ಪೇಸ್ಟ್ ರೀತಿ ರುಬ್ಬಿಕೊಳ್ಳಿ. ಮತ್ತೊಂದು ಕಡೆ ಗ್ಯಾಸ್ ಮೇಲೆ ಒಂದು ಸಣ್ಣ ಬಾಣಲೆಯನ್ನು ಇಟ್ಟು ಅದಕ್ಕೆ 1 ಚಮಚ ಎಣ್ಣೆಯನ್ನು ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ ಅದಕ್ಕೆ ಸಣ್ಣಗೆ ಹಚ್ಚಿದ ಈರುಳ್ಳಿಯನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಬೇಯಿಸಿ ಸ್ಮ್ಯಾಶ್ ಮಾಡಿದ ಆಲೂಗಡ್ಡೆಯನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಿ.

ನಂತರ ಇದಕ್ಕೆ ಸ್ವಲ್ಪ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ ಹಸಿವಾಸನೆ ಹೋಗುವವರೆಗೂ ಚೆನ್ನಾಗಿ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ರುಬ್ಬಿದ ಪೇಸ್ಟ್ ಅನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ನಂತರ ಇದಕ್ಕೆ ಸ್ವಲ್ಪ ಅಚ್ಚಖಾರದ ಪುಡಿ, ಸ್ವಲ್ಪ ಜೀರಿಗೆ ಪುಡಿ, ಸ್ವಲ್ಪ ಗರಂ ಮಸಾಲ ಪುಡಿ ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ 2 ನಿಮಿಷಗಳ ಕಾಲ ಮಿಕ್ಸ್ ಮಾಡಿಕೊಳ್ಳಿ. ನಂತರ ಇದಕ್ಕೆ ಆಮ್ ಚೂರ್ ಪೌಡರ್ ಅಥವಾ ನಿಂಬೆಹಣ್ಣಿನ ರಸವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಂಡು ಗ್ಯಾಸ್ ಆಫ್ ಮಾಡಿ ತಣ್ಣಗಾಗಲು ಬಿಡಿ.

ಮತ್ತೊಂದೆಡೆ ಒಂದು ದೊಡ್ಡ ಬಟ್ಟಲಿಗೆ ಗೋಧಿ ಹಿಟ್ಟು, ಸ್ವಲ್ಪ ಉಪ್ಪು, 1 ಚಮಚದಷ್ಟು ಎಣ್ಣೆ ಹಾಗು ಅರ್ಧ ಚಮಚದಷ್ಟು ಸಕ್ಕರೆಯನ್ನು ಹಾಕಿ ಮಿಕ್ಸ್ ಮಾಡಿಕೊಳ್ಳಿ.ನಂತರ ಇದಕ್ಕೆ ಸ್ವಲ್ಪ ಸ್ವಲ್ಪ ನೀರನ್ನು ಹಾಕುತ್ತಾ ಚಪಾತಿ ಹಿಟ್ಟಿನ ಹದಕ್ಕೆ ಗೋದಿಹಿಟ್ಟನ್ನು ಕರೆಸಿಕೊಳ್ಳಿ. ನಂತರ ಗೋಧಿ ಹಿಟ್ಟನ್ನು ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಿಕೊಳ್ಳಿ. ನಂತರ ಮಿಶ್ರಣವನ್ನು ಅದೇ ಗಾತ್ರದ ಉಂಡೆಗಳನ್ನಾಗಿ ಮಾಡಿಕೊಳ್ಳಿ.ನಂತರ ಗೋಧಿ ಹಿಟ್ಟನ್ನು ಸ್ವಲ್ಪ ಅಗಲವಾಗಿ ಲಟ್ಟಿಸಿಕೊಂಡು ಅದರ ಮಧ್ಯಕ್ಕೆ ಉಂಡೆ ಮಾಡಿದ ಮಿಶ್ರಣವನ್ನು ಇಟ್ಟು ಗೋಧಿಹಿಟ್ಟಿನಿಂದ ಮುಚ್ಚಿಕೊಂಡು ಮತ್ತೆ ವೃತ್ತಾಕಾರದ ಉಂಡೆಗಳನ್ನಾಗಿ ಮಾಡಿಕೊಳ್ಳಿ.

ಇದೇ ರೀತಿಯಾಗಿ ಎಲ್ಲಾ ಉಂಡೆಗಳನ್ನು ಮಾಡಿಕೊಳ್ಳಿ. ನಂತರ ಒಣ ಹಿಟ್ಟನ್ನು ಬಳಸಿಕೊಂಡು ಚಪಾತಿ ಲಟ್ಟಿಸಿದ ಹಾಗೆ ಲಟ್ಟಿಸಿಕೊಳ್ಳಿ. ಗ್ಯಾಸ್ ಮೇಲೆ ತವಾವನ್ನು ಇಟ್ಟು ಕಾಯಲು ಬಿಡಿ. ನಂತರ ಲಟ್ಟಿಸಿದ ಚಪಾತಿಯನ್ನು ಹಾಕಿ ಎರಡು ಬದಿಯಲ್ಲಿ ಎಣ್ಣೆ ಸವರಿ ಬೇಯಿಸಿಕೊಂಡರೇ ವೆಜ್ ಗೋಧಿ ಪರೋಟ ಸವಿಯಲು ಸಿದ್ಧ.