ಕೆ ಎಲ್ ರಾಹುಲ್ ತಂಡದಿಂದ ಹೊರಗುಳಿಯುತ್ತಾರಾ?? ಕೊಹ್ಲಿ ಒಂದೇ ಮಾತಿನಲ್ಲಿ ಹೇಳಿದ್ದೇನು ಗೊತ್ತಾ??

ಕೆ ಎಲ್ ರಾಹುಲ್ ತಂಡದಿಂದ ಹೊರಗುಳಿಯುತ್ತಾರಾ?? ಕೊಹ್ಲಿ ಒಂದೇ ಮಾತಿನಲ್ಲಿ ಹೇಳಿದ್ದೇನು ಗೊತ್ತಾ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಇದೀಗ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟ್ವೆಂಟಿ ಸರಣಿಯಲ್ಲಿ ರಾಹುಲ್ ಅವರು ಸತತ ಮೂರು ಪಂದ್ಯಗಳಲ್ಲಿ ವೈಫಲ್ಯವನ್ನು ಅನುಭವಿಸಿದ್ದಾರೆ, ಅಚ್ಚರಿಯೆಂದರೆ ರಾಹುಲ್ ವಿಶ್ವ ಟ್ವೆಂಟಿ ರ್ಯಾಂಕಿಂಗ್ನಲ್ಲಿ ಮೂರನೇ ಸ್ಥಾನ ಇದ್ದರೂ ಕೂಡ ಕಳೆದ ಮೂರು ಪಂದ್ಯಗಳಲ್ಲಿ ಎರಡು ಬಾರಿ 0 ಸುತ್ತಿರುವ ರಾಹುಲ್ ರವರು ಮತ್ತೊಂದು ಇನ್ನಿಂಗ್ಸ್ ನಲ್ಲಿ ಕೇವಲ ಒಂದು ರನ್ ಗಳಿಸಿದ್ದಾರೆ.

ಇನ್ನು ತಂಡದಲ್ಲಿ ಆರಂಭಿಕರಾಗಿ ಮೊದಲನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಈ ಇಶಾನ್ ಕಿಶನ್ ರವರು ಭರವಸೆ ಮೂಡಿಸಿರುವ ಕಾರಣ ನಾಲ್ಕನೇ ಪಂದ್ಯದಲ್ಲಿ ಕೆಎಲ್ ರಾಹುಲ್ ರವರನ್ನು ಹೊರಗೆ ಕಳಿಸಿ ರೋಹಿತ್ ಶರ್ಮಾ ಹಾಗೂ ಇಶಾಂತ್ ಕಿಶನ್ ಆರಂಭಿಸಲಿದ್ದಾರೆ ಈ ಮೂಲಕ ಸೂರ್ಯ ಕುಮಾರ್ ಯಾದವ್ ರವರು ಪಾದರ್ಪಣೆ ಮಾಡಿದ ಪಂದ್ಯದಲ್ಲಿ ಅವಕಾಶ ವಂಚಿತರಾದರೂ ಕೂಡ ನಾಲ್ಕನೇ ಪಂದ್ಯದಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಆದರೆ ಈ ಎಲ್ಲಾ ಊಹಾಪೋಹಗಳಿಗೆ ಉತ್ತರ ನೀಡಿರುವ ನಾಯಕ ಕೊಹ್ಲಿ ರವರು, ಕೆ ಎಲ್ ರಾಹುಲ್ ನಿಜಕ್ಕೂ ಒಬ್ಬ ಚಾಂಪಿಯನ್ ಆಟಗಾರ, ಕೆಲವು ಪಂದ್ಯಗಳಲ್ಲಿ ವಿಫಲವಾದ ತಕ್ಷಣ ಅವರು ಹೊರಗೆ ಇರುವುದಿಲ್ಲ. ರೋಹಿತ ಶರ್ಮ ರವರ ಜೊತೆಗೆ ಇನ್ನಿಂಗ್ಸ್ ಆರಂಭಿಸುವುದನ್ನು ಮುಂದುವರಿಸುತ್ತಾರೆ ಎಂದು ಕೊಹ್ಲಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಹುಲ್ ರವರು ಮುಂದಿನ ಪಂದ್ಯಗಳಲ್ಲಿ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ ವಾಗಿದೆ. ಈ ಕುರಿತು ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸುವುದನ್ನು ಮರೆಯಬೇಡಿ.