ಸಾಮಾನ್ಯ ಚಿತ್ರಾನ್ನ ಬಿಡಿ, ಹೀಗೆ ಮಾವಿನ ಕಾಯಿ ಚಿತ್ರಾನ್ನ ಮಾಡಿ ನೋಡಿ, ಎಲ್ಲರೂ ಪ್ಲೇಟ್ ಖಾಲಿ ಮಾಡ್ತಾರೆ.

ಸಾಮಾನ್ಯ ಚಿತ್ರಾನ್ನ ಬಿಡಿ, ಹೀಗೆ ಮಾವಿನ ಕಾಯಿ ಚಿತ್ರಾನ್ನ ಮಾಡಿ ನೋಡಿ, ಎಲ್ಲರೂ ಪ್ಲೇಟ್ ಖಾಲಿ ಮಾಡ್ತಾರೆ.

ನಮಸ್ಕಾರ ಸ್ನೇಹಿತರೇ, ಇಂದು ನಾವು ಮಾವಿನಕಾಯಿ ಚಿತ್ರಾನ್ನ ಮಾಡುವ ವಿಧಾನವನ್ನು ನಿಮಗೆ ತಿಳಿಸಲಾಗಿದೆ. ಮಾವಿನಕಾಯಿ ಚಿತ್ರಾನ್ನ ಮಾಡಲು ಬೇಕಾಗುವ ಪದಾರ್ಥಗಳು: 1 ಮಾವಿನ ಕಾಯಿ, 5 – 6 ಚಮಚ ಎಣ್ಣೆ, 7 – 8 ಹಸಿಮೆಣಸಿನಕಾಯಿ, 4 ಚಮಚ ಕಡಲೆಕಾಯಿ ಬೀಜ, ಸ್ವಲ್ಪ ಕೊತ್ತಂಬರಿ ಸೊಪ್ಪು, ಸ್ವಲ್ಪ ಕರಿಬೇವು, ಸ್ವಲ್ಪ ಸಾಸಿವೆ, ಸ್ವಲ್ಪ ಅರಿಶಿನ ಪುಡಿ, 1 ಚಮಚ ಜೀರಿಗೆ, 2 ಚಮಚ ಕಡಲೆ ಬೇಳೆ, 2 ಚಮಚ ಉದ್ದಿನಬೇಳೆ, ರುಚಿಗೆ ತಕ್ಕಷ್ಟು ಉಪ್ಪು.

ಮಾವಿನಕಾಯಿ ಚಿತ್ರಾನ್ನ ಮಾಡುವ ವಿಧಾನ: ಮೊದಲಿಗೆ ಗ್ಯಾಸ್ ಮೇಲೆ ಒಂದು ಬಾಣಲೆಯನ್ನು ಇಟ್ಟುಕೊಂಡು ಅದಕ್ಕೆ 4 ಚಮಚದಷ್ಟು ಎಣ್ಣೆಯನ್ನು ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ ಇದಕ್ಕೆ ಸಾಸಿವೆ, ಜೀರಿಗೆ, ಕಡ್ಲೆಬೇಳೆ, ಉದ್ದಿನಬೇಳೆಯನ್ನು ಹಾಕಿ 30 ಸೆಕೆಂಡ್ ಗಳ ಕಾಲ ಫ್ರೈ ಮಾಡಿಕೊಳ್ಳಿ. ಇದಕ್ಕೆ ಸಣ್ಣಗೆ ಹಚ್ಚಿಕೊಂಡ ಹಸಿಮೆಣಸಿನಕಾಯಿಯನ್ನು ಹಾಕಿ ಮತ್ತೆ 30 ಸೆಕೆಂಡುಗಳ ಕಾಲ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ತೆಗೆದುಕೊಂಡ ಕರಿಬೇವನ್ನು ಹಾಕಿ ಒಂದು ಬಾರಿ ಮಿಕ್ಸ್ ಮಾಡಿಕೊಳ್ಳಿ. ನಂತರ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ತುರಿದ ಮಾವಿನ ಕಾಯಿಯನ್ನು ಹಾಕಿ 1 ನಿಮಿಷಗಳ ಕಾಲ ಫ್ರೈ ಮಾಡಿಕೊಳ್ಳಿ.

ನಂತರ ಇದಕ್ಕೆ ಸ್ವಲ್ಪ ಅರಿಶಿನಪುಡಿಯನ್ನು ಹಾಕಿ ಒಂದು ಬಾರಿ ಮಿಕ್ಸ್ ಮಾಡಿಕೊಂಡು ಗ್ಯಾಸ್ ಆಫ್ ಮಾಡಿ ಪಕ್ಕಕ್ಕಿಡಿ. ಮತ್ತೊಂದು ಕಡೆ ಗ್ಯಾಸ್ ಮೇಲೆ ಒಂದು ಸಣ್ಣ ಬಾಣಲೆಯಲ್ಲಿ ಇಟ್ಟುಕೊಂಡು ಅದಕ್ಕೆ ಸ್ವಲ್ಪ ಎಣ್ಣೆಯನ್ನು ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ ಕಡಲೆಕಾಯಿ ಬೀಜವನ್ನು ಹಾಕಿ 1 ನಿಮಿಷಗಳ ಕಾಲ ಫ್ರೈ ಮಾಡಿಕೊಂಡು ದೊಡ್ಡ ಬಾಣಲಿಗೆ ಹಾಕಿ ಕೊಳ್ಳಿ. ಕೊನೆಯದಾಗಿ ಇದಕ್ಕೆ ಸ್ವಲ್ಪ ಸಣ್ಣಗೆ ಹಚ್ಚಿದ ಕೊತ್ತಂಬರಿ ಸೊಪ್ಪು ಹಾಗೂ ಗೊಜ್ಜಿಗೆ ಬೇಕಾಗುವಷ್ಟು ಅನ್ನವನ್ನು ಹಾಕಿ ಮಿಕ್ಸ್ ಮಾಡಿದರೆ ಮಾವಿನಕಾಯಿ ಚಿತ್ರಾನ್ನ ಸವಿಯಲು ಸಿದ್ಧ.