ದಿಡೀರ್ ಎಂದು ಕೆಲವೇ ಕೆಲವು ನಿಮಿಷಗಳಲ್ಲಿ ಈರುಳ್ಳಿ ಟೊಮೆಟೊ ಚಟ್ನಿ ಮಾಡುವುದು ಹೇಗೆ ಗೊತ್ತೇ??

ದಿಡೀರ್ ಎಂದು ಕೆಲವೇ ಕೆಲವು ನಿಮಿಷಗಳಲ್ಲಿ ಈರುಳ್ಳಿ ಟೊಮೆಟೊ ಚಟ್ನಿ ಮಾಡುವುದು ಹೇಗೆ ಗೊತ್ತೇ??

ನಮಸ್ಕಾರ ಸ್ನೇಹಿತರೇ, ಇಂದು ನಾವು ದಿಡೀರ್ ಈರುಳ್ಳಿ ಟೊಮೆಟೊ ಚಟ್ನಿ ಮಾಡುವ ವಿಧಾನವನ್ನು ನಿಮಗೆ ತಿಳಿಸಲಾಗಿದೆ. ಈರುಳ್ಳಿ ಟೊಮೇಟೊ ಚಟ್ನಿ ಮಾಡಲು ಬೇಕಾಗುವ ಸಾಮಗ್ರಿಗಳು: 2 ದೊಡ್ಡ ಈರುಳ್ಳಿ ಅಥವಾ 7 -8 ಸಣ್ಣ ಈರುಳ್ಳಿ, 2 ಟೊಮೆಟೊ, 5 – 6 ಬೆಳ್ಳುಳ್ಳಿ ಎಸಳು, ಸ್ವಲ್ಪ ಕರಿಬೇವು, 5 ಒಣಮೆಣಸಿನಕಾಯಿ, ಕಾಲು ಚಮಚ ಸಾಸಿವೆ, ಕಾಲು ಚಮಚ ಜೀರಿಗೆ, ಅರ್ಧ ಚಮಚ ಉದ್ದಿನ ಬೇಳೆ, ಅರ್ಧ ಚಮಚ ಕಡಲೆ ಬೇಳೆ, ಸ್ವಲ್ಪ ಕೊತ್ತಂಬರಿ ಸೊಪ್ಪು, ಸ್ವಲ್ಪ ಪುದೀನ, ರುಚಿಗೆ ತಕ್ಕಷ್ಟು ಉಪ್ಪು, ಸ್ವಲ್ಪ ಎಣ್ಣೆ, ಸ್ವಲ್ಪ ಇಂಗು.

ಈರುಳ್ಳಿ ಟಮೋಟೊ ಚಟ್ನಿ ಮಾಡುವ ವಿಧಾನ: ಮೊದಲಿಗೆ ಗ್ಯಾಸ್ ಮೇಲೆ ಒಂದು ಬಾಣಲೆಯನ್ನು ಇಟ್ಟು ಅದಕ್ಕೆ 1 ಚಮಚದಷ್ಟು ಎಣ್ಣೆಯನ್ನು ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ ಇದಕ್ಕೆ ಒಣಮೆಣಸಿನಕಾಯಿ, ಹಚ್ಚಿದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಎಸಳನ್ನು ಹಾಕಿ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಸಣ್ಣಗೆ ಹಚ್ಚಿದ ಟೊಮೆಟೊ, ಸ್ವಲ್ಪ ಕೊತ್ತಂಬರಿ ಸೊಪ್ಪು, ಸ್ವಲ್ಪ ಪುದೀನಾ, ಉದ್ದಿನಬೇಳೆ, ಕಡ್ಲೆಬೇಳೆ, ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಕಡಿಮೆ ಉರಿಯಲ್ಲಿ 2 – 3 ನಿಮಿಷಗಳ ಕಾಲ ಫ್ರೈ ಮಾಡಿಕೊಂಡು ಗ್ಯಾಸ್ ಆಫ್ ಮಾಡಿಕೊಳ್ಳಿ. ನಂತರ ಇದಕ್ಕೆ ಸ್ವಲ್ಪ ನೀರನ್ನು ಹಾಕಿ ಮಿಕ್ಸ್ ಮಾಡಿಕೊಂಡು ತಣ್ಣಗಾಗಲು ಬಿಡಿ.

ನಂತರ ಒಂದು ಮಿಕ್ಸಿ ಜಾರಿಗೆ ತಣ್ಣಗಾದ ಮಿಶ್ರಣವನ್ನು ಹಾಕಿ ತರಿತರಿಯಾಗಿ ರುಬ್ಬಿಕೊಂಡು ಒಂದು ಬಟ್ಟಲಿಗೆ ಹಾಕಿ ಕೊಳ್ಳಿ. ಮತ್ತೊಂದು ಕಡೆ ಗ್ಯಾಸ್ ಮೇಲೆ ಸಣ್ಣ ಬಾಣಲೆಯನ್ನು ಇಟ್ಟುಕೊಂಡು ಅದಕ್ಕೆ ಸ್ವಲ್ಪ ಎಣ್ಣೆಯನ್ನು ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ ಸಾಸಿವೆ,ಜೀರಿಗೆ, ಸ್ವಲ್ಪ ಕರಿಬೇವು, ಸ್ವಲ್ಪ ಇಂಗು, ಹಾಕಿ ಒಗ್ಗರಣೆ ಮಾಡಿಕೊಂಡು ರುಬ್ಬಿಕೊಂಡ ಮಿಶ್ರಣಕ್ಕೆ ಹಾಕಿ ಮಿಕ್ಸ್ ಮಾಡಿದರೆ ಈರುಳ್ಳಿ ಟಮೋಟೊ ಚಟ್ನಿ ಸವಿಯಲು ಸಿದ್ಧ.