ಕನ್ನಡ ಅಷ್ಟೇ ಅಲ್ಲಾ, ದಕ್ಷಿಣ ಭಾರತದ ಎಲ್ಲ ದಾಖಲೆಗಳನ್ನು ಕುಟ್ಟಿ ಪುಡಿ ಪುಡಿ ಮಾಡಲು ಸಿದ್ದವಾದ ದರ್ಶನ್, ಹೊಸ ಸಿನಿಮಾ ಯಾವುದು ಗೊತ್ತೇ??

ನಮಸ್ಕಾರ ಸ್ನೇಹಿತರೇ ಕನ್ನಡ ಚಿತ್ರರಂಗದಲ್ಲಿ ಹಲವಾರು ಸ್ಟಾರ್ ನಟರಿದ್ದು ಅವರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಒಬ್ಬರು. ಹೌದು ಕನ್ನಡ ಚಿತ್ರರಂಗದಲ್ಲಿ ಅನೇಕ ಸಿನಿಮಾಗಳಲ್ಲಿ ವಿವಿಧ ಪಾತ್ರಗಳನ್ನು ಅಭಿನಯಿಸುವ ಮೂಲಕ ಕನ್ನಡಿಗರ ಮನೆಮಾತಾಗಿದ್ದಾರೆ. ಇನ್ನು ಇವರು ನಟಿಸುವ ಪ್ರತಿಯೊಂದು ಚಿತ್ರಗಳು ಕೂಡ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತವೆ. ಇನ್ನು ಇತ್ತೀಚಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಮಾರ್ಚ್ ತಿಂಗಳಲ್ಲಿ ತೆರೆಕಂಡಿದ್ದು, ಯಶಸ್ವಿ ಪ್ರದರ್ಶನವನ್ನು ಕಂಡಿದೆ.

ಅಷ್ಟೇ ಅಲ್ಲದೆ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಿದ್ದು, ಭಾರಿ ಆದಾಯವನ್ನು ಬಾಚಿಕೊಂಡಿದೆ. ಇನ್ನು ಈ ಸಿನಿಮಾದಲ್ಲಿ ನಟ ದರ್ಶನ್ ಅವರು ನಟಿ ಆಶಾ ಭಟ್ ಅವರೊಂದಿಗೆ ಸಿನಿ ಪರದೆಯನ್ನು ಹಂಚಿಕೊಂಡಿದ್ದರು. ಇನ್ನು ಈ ಸಿನಿಮಾದಲ್ಲಿ ದೇವರಾಜ್, ಜಗಪತಿ ಬಾಬು, ರವಿಶಂಕರ್, ವಿನೋದ್ ಪ್ರಭಾಕರ್ ಸೇರಿದಂತೆ ಸಾಕಷ್ಟು ಕನ್ನಡ ಚಿತ್ರರಂಗದ ಖ್ಯಾತ ಕಲಾವಿದರಿದ್ದರು.

ಇನ್ನು ಚಾಲೆಂಜ್ ಸ್ಟಾರ್ ದರ್ಶನ್ ಅವರ ಸಿನಿಮಾ ತೆರೆಕಾಣುತ್ತದೆ ಎಂದು ಹೇಳಿದರೆ ಸಾಕು ಆ ದಿನ ಎಲ್ಲ ಚಿತ್ರಮಂದಿರಗಳಲ್ಲಿ ಹಬ್ಬದಂತೆ ಆಚರಣೆ ಮಾಡಲಾಗುತ್ತದೆ. ಹೌದು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ನಟ ದರ್ಶನ್ ಅವರ ಸಿನಿಮಾ ರಿಲೀಸ್ ಆಗುವ ದಿನ ಹಬ್ಬದ ದಿನವಾಗಿರುತ್ತದೆ. ಅಂದರೆ ಅಷ್ಟೊಂದು ಅಭಿಮಾನಿಗಳು ಖುಷಿಯಿಂದ ಚಿತ್ರವನ್ನು ಚಿತ್ರಮಂದಿರಗಳಲ್ಲಿ ಸ್ವಾಗತಿಸುತ್ತಾರೆ. ಇನ್ನು ಅದೇ ರೀತಿ ಅಭಿಮಾನಿಗಳು ದರ್ಶನ್ ಅವರ ಮುಂದಿನ ಸಿನಿಮಾ ಯಾವುದು ಎಂದು ಕೂಡ ನಿರೀಕ್ಷಿಸುತ್ತಿದ್ದಾರೆ.

ಇನ್ನು ದರ್ಶನ್ ಅವರ ಮುಂದಿನ ಸಿನಿಮಾ ಯಾವುದು ಎಂದು ತಿಳಿದುಬಂದಿದ್ದು, ಬಿಗ್ ಬಜೆಟ್ ಸಿನಿಮಾ ಒಂದರಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಕೂಡ ಕೇಳಿಬಂದಿದೆ. ಹೌದು ರಾಬರ್ಟ್ ಸಿನಿಮಾದ ನಂತರ ದರ್ಶನ ನಟಿಸುವ ಮುಂದಿನ ಸಿನಿಮಾ ಯಾವುದು ಎಂದು ಹಲವಾರು ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇನ್ನು ದರ್ಶನ್ ಅವರು ಹೊಸ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದು, ಆ ಸಿನಿಮಾದ ಬಗ್ಗೆ ಕಳೆದ ಯುಗಾದಿ ಹಬ್ಬದ ದಿನ ಅಧಿಕೃತವಾಗಿ ಹೇಳಬೇಕೆಂದಿದ್ದರು.

ಆದರೆ ಕಾರಣಾಂತರಗಳಿಂದ ಅದು ಮುಂದೂಡಲಾಯಿತು. ಇದೀಗ ದರ್ಶನ್ ಅವರು ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ‘ವೀರ ಮದಕರಿ ನಾಯಕ’ ಎಂಬ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಕೆಲವು ಮಾಹಿತಿಗಳಿಂದ ಈ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಬಜೆಟ್ ಹೊಂದಿದೆ ಎಂದು ಹೇಳಲಾಗುತ್ತಿದೆ. ಇನ್ನು ಈ ಸಿನಿಮಾದ ಮೂಲಕ ನಟ ದರ್ಶನ್ ಅವರು ಕನ್ನಡ ಚಿತ್ರರಂಗದ ಸಾಕಷ್ಟು ದಾಖಲೆಗಳನ್ನು ಮೂರು ಎಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಬೆಳವಣಿಗೆಯನ್ನು ಕಾದುನೋಡಬೇಕಾಗಿದೆ.

Post Author: Ravi Yadav