ಟಿ 20 ವಿಶ್ವಕಪ್ ಗೆ ತಂಡ ಪ್ರಕಟಿಸಿದ ಬಿಸಿಸಿಐ, ಶಾಕ್ ಮೇಲೆ ಶಾಕ್ ಕೊಟ್ಟಿದ್ದು ಏಕೆ ಗೊತ್ತೇ?? ಅಚ್ಚರಿಯ ಆಟಗಾರರ ಆಯ್ಕೆ, ಯಾರ್ಯಾರು ಗೊತ್ತೇ??
ಟಿ 20 ವಿಶ್ವಕಪ್ ಗೆ ತಂಡ ಪ್ರಕಟಿಸಿದ ಬಿಸಿಸಿಐ, ಶಾಕ್ ಮೇಲೆ ಶಾಕ್ ಕೊಟ್ಟಿದ್ದು ಏಕೆ ಗೊತ್ತೇ?? ಅಚ್ಚರಿಯ ಆಟಗಾರರ ಆಯ್ಕೆ, ಯಾರ್ಯಾರು ಗೊತ್ತೇ??
ನಮಸ್ಕಾರ ಸ್ನೇಹಿತರೇ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿರುವ ವಿಶ್ವ ಟಿ 20 ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಯು.ಎ.ಇ, ದುಬೈ ಹಾಗೂ ಅಬುಧಾಬಿಯಲ್ಲಿ ನಡೆಯುತ್ತಿರುವ ಕಾರಣ ಹೆಚ್ಚು ಕುತೂಹಲ ಮೂಡಿಸಿದೆ. ಇನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಇಂದು ಟೀಂ ಇಂಡಿಯಾ ಸದಸ್ಯರ ಪಟ್ಟಿ ಘೋಷಿಸಿದ್ದು, ತಂಡದಲ್ಲಿ ಹಲವಾರು ಅನೀರಿಕ್ಷಿತ ಆಯ್ಕೆಗಳು ಆಗಿವೆ.
ವಿರಾಟ್ ಕೊಹ್ಲಿ ನಾಯಕರಾದರೇ, ಉಪನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಇನ್ನು ಬ್ಯಾಟ್ಸಮನ್ ಗಳಾಗಿ ಸೂರ್ಯ ಕುಮಾರ್ ಯಾದವ್ ಹಾಗೂ ಕೆ.ಎಲ್ ರಾಹುಲ್ ಸ್ಥಾನ ಪಡೆದಿದ್ದಾರೆ. ಇನ್ನು ವಿಕೇಟ್ ಕೀಪರ್ ಗಳಾಗಿ ರಿಷಭ್ ಪಂತ್ ಮತ್ತು ಇಶಾನ್ ಕಿಶನ್ ಸ್ಥಾನ ಪಡೆದಿದ್ದಾರೆ. ಆಲ್ ರೌಂಡರ್ ಗಳಾಗಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಸ್ಥಾನಗಳಿಸಿದ್ದರೇ, ವೇಗದ ಬೌಲರ್ ಗಳಾಗಿ ಜಸ್ಪ್ರಿತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಮಹಮದ್ ಶಮಿ ಸ್ಥಾನ ಪಡೆದಿದ್ದಾರೆ. ಇನ್ನು ಸ್ಪಿನ್ ಬೌಲರ್ ಗಳಾಗಿ ರವಿಚಂದ್ರನ್ ಅಶ್ವಿನ್, ವರುಣ್ ಚಕ್ರವರ್ತಿ ಮತ್ತು ರಾಹುಲ್ ಚಾಹರ್ ಸ್ಥಾನ ಪಡೆದುಕೊಂಡಿದ್ದಾರೆ. ಮೀಸಲು ಆಟಗಾರರಾಗಿ ದೀಪಕ್ ಚಾಹರ್, ಶಾರ್ದೂಲ್ ಠಾಕೂರ್ ಮತ್ತು ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದಾರೆ.
ಅಚ್ಚರಿಯೆಂಬಂತೆ ಲೆಗ್ ಸ್ಪಿನ್ನರ್ ಯುಜವೇಂದ್ರ ಚಾಹಲ್, ಕೃನಾಲ್ ಪಾಂಡ್ಯ, ಏಡಗೈ ವೇಗದ ಬೌಲರ್ ನಟರಾಜನ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಅದಲ್ಲದೆ ಕೇವಲ ನಾಲ್ಕು ತಜ್ಞ ಬ್ಯಾಟ್ಸಮನ್ ಗಷ್ಟೇ ಸ್ಥಾನ ನೀಡಿರುವುದು ಅಚ್ಚರಿಯಾಗಿದೆ. ಇನ್ನು ವಿಶೇಷ ಎಂಬಂತೆ ಮಹೇಂದ್ರ ಸಿಂಗ್ ಧೋನಿ ಈ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
ತಂಡ ಹೀಗಿದೆ – ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬೂಮ್ರಾ , ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್