ಪುನೀತ್ ರವರ ಅಂತಿಮದರ್ಶನಕ್ಕೆ ಏಕೆ ಬಂದಿಲ್ಲ ಎಂದಿದ್ದಕ್ಕೆ ರಾಧಿಕಾ ಪಂಡಿತ್ ಹೇಳಿದ್ದೇನು ಗೊತ್ತಾ?? ಕೊನೆಗೂ ಉತ್ತರ ಕೊಟ್ಟ ರಾಧಿಕಾ, ಭೇಷ್ ಎಂದ ನೆಟ್ಟಿಗರು.

ನಮಸ್ಕಾರ ಸ್ನೇಹಿತರೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಇಂದಿಗೆ ಹದಿಮೂರು ದಿನಗಳು ಕಳೆದಿವೆ. ಇನ್ನು ಇದುವರೆಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಮಾಧಿಗೆ ಹಲವಾರು ಗಣ್ಯರು ಬಂದು ನಮಸ್ಕರಿಸಿ ಹೋಗಿದ್ದಾರೆ. ಆದರೆ ನಟಿ ರಾಧಿಕಾ ಪಂಡಿತ್ ಅವರು ಎಲ್ಲು ಕೂಡ ಕಾಣಿಸಿಕೊಂಡಿರಲಿಲ್ಲ. ಇನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜೊತೆಗೆ ಹುಡುಗರು ಹಾಗೂ ದೊಡ್ಮನೆ ಹುಡುಗ ಚಿತ್ರದಲ್ಲಿ ರಾಧಿಕಾ ಪಂಡಿತ್ ಅವರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಇನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ರಾಧಿಕಾ ಪಂಡಿತ್ ಅವರು ಇಂದು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಭಾವಚಿತ್ರವನ್ನು ಹಂಚಿಕೊಳ್ಳುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಹಲವಾರು ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಲು ನಿಮಗೆ ಇಷ್ಟು ದಿನ ಬೇಕಾಯಿತು ಯಾಕೆ ನೀವು ಅವರ ಅಂತಿಮದರ್ಶನಕ್ಕೆ ಹೋಗಿಲ್ಲ ಎಂದು ಅಸಮಾಧಾನದಿಂದ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ರಾಧಿಕಾ ಪಂಡಿತ್ ಅವರು ಏನು ಉತ್ತರ ನೀಡಿದ್ದಾರೆ ಎಂಬುದನ್ನು ಈ ಕೆಳಗೆ ನೋಡಿ.

ಜೀವನದಲ್ಲಿ ಆದಷ್ಟು ಒಬ್ಬರ ಮೇಲೆ ಕೋಪ ಇದ್ದರೂ ಪ್ರೀತಿ ಹಂಚಿ, ತಾಳ್ಮೆ ಇರಲಿ. ನಾನು ಅವರ ಅಂತಿಮ ದರ್ಶನ ಪಡೆದೆನೋ ಇಲ್ಲವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ ನಮಗೆ ತಿಳಿದಿದೆ. ಕ್ಯಾಮರಾ ಮುಂದೆ ಬಂದು ಮಾತನಾಡುವ ಶಕ್ತಿ ನನಗಿರಲಿಲ್ಲ. ಕ್ಯಾಮರಾ ಮುಂದೆ ಬಂದು ಮಾತನಾಡದೆ ಇರುವುದು ದೊಡ್ಡ ತಪ್ಪು ಎಂದು ನಾನು ಭಾವಿಸಿರಲಿಲ್ಲ. ಅವರ ಮೇಲಿರುವ ಪ್ರೀತಿಗೆ ನೀವು ಹೀಗೆ ಮಾತನಾಡುತ್ತಿರುವುದು ಸಹಜ. ಅಪ್ಪು ಸಾರ್ ಆಗಲಿಕೆ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಾದ ನಿಮಗೆ ಎಷ್ಟು ನೋವು ನೀಡುತ್ತಿದೆಯೋ ಅಷ್ಟೇ ನೋವು ನನಗೂ ನಮ್ಮ ಕುಟುಂಬಕ್ಕೂ ಆಗಿದೆ. ನಮ್ಮೆಲ್ಲರ ನೆಚ್ಚಿನ ಅಪ್ಪು ಸರ್ ಅಗಲಿಕೆ ಎಂದೆಂದಿಗೂ ನಮ್ಮನ್ನು ಕಾಡುತ್ತಲೇ ಇರುತ್ತದೆ ಎಂಬುದಾಗಿ ಉತ್ತರ ನೀಡಿದ್ದಾರೆ. ಈ ವಿಚಾರದ ಕುರಿತಂತೆ ನಿಮ್ಮ ಅನಿಸಿಕೆಗಳನ್ನು ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.

Post Author: Ravi Yadav