ಕೊನೆಗೂ ಪ್ರಕಟವಾಯ್ತು ಬಹು ನಿರೀಕ್ಷಿತ ಟೆಸ್ಟ್ ಸರಣಿಗೆ ಭಾರತ ತಂಡ, ಅಚ್ಚರಿಯಾಗಿ ಸ್ಥಾನ ಪಡೆದವರು ಯಾರ್ಯಾರು ಗೊತ್ತೇ??

ನಮಸ್ಕಾರ ಸ್ನೇಹಿತರೇ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಗೆ ಮಹತ್ವ ಎನಿಸಿರುವ ನ್ಯೂಜಿಲೆಂಡ್ ವಿರುದ್ದದ ಸರಣಿಗೆ ಭಾರತ ತಂಡ ಕೊನೆಗೂ ಪ್ರಕಟವಾಗಿದೆ. ನೀರಿಕ್ಷೆಯಂತೆಯೇ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಇದಲ್ಲದೇ ಹಲವಾರು ತಿಂಗಳುಗಳಿಂದ ಬಯೋ ಬಬಲ್ ನಲ್ಲಿದ್ದ ವೇಗದ ಬೌಲರ್ ಗಳಾದ ಜಸಪ್ರಿತ್ ಬುಮ್ರಾ, ಮಹಮದ್ ಶಮಿ, ರಿಷಭ್ ಪಂತ್, ಶಾರ್ದೂಲ್ ಠಾಕೂರ್ ರವರಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ನಾಯಕ ವಿರಾಟ್ ಕೊಹ್ಲಿ ಎರಡನೇ ಟೆಸ್ಟ್ ಸಮಯಕ್ಕೆ ತಂಡಕ್ಕೆ ಸೇರ್ಪಡೆಯಾಗಲಿದ್ದು, ಮೊದಲನೇ ಟೆಸ್ಟ್ ನ ನಾಯಕತ್ವವನ್ನು ಅಜಿಂಕ್ಯಾ ರಹಾನೆ ಮುನ್ನಡೆಸಲಿದ್ದಾರೆ.

ಇನ್ನು ಇದೇ ಮೊದಲ ಭಾರಿ ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ ಗೆ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರ ಜೊತೆ ಕನ್ನಡಿಗ ವೇಗದ ಬೌಲರ್ ಪ್ರಸಿದ್ ಕೃಷ್ಣ ಸಹ ಸ್ಥಾನ ನೀಡಲಾಗಿದೆ. ಸ್ಪಿನ್ ಬೌಲಿಂಗ್ ವಿಭಾಗದಲ್ಲಿ, ಆರ್‌.ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಯಂತ್ ಯಾದವ್ ಸ್ಥಾನ ಪಡೆದಿದ್ದಾರೆ. ವೇಗದ ಬೌಲರ್ ಗಳಾಗಿ ಅನುಭವಿಗಳಾದ ಇಶಾಂತ್ ಶರ್ಮಾ, ಉಮೇಶ್ ಯಾದವ್ ಜೊತೆ ಮಹಮದ್ ಸಿರಾಜ್ ಸ್ಥಾನ ಪಡೆದಿದ್ದಾರೆ. ಆರಂಭಿಕರಾಗಿ ಕೆ.ಎಲ್.ರಾಹುಲ್,ಮಯಾಂಕ್ ಅಗರವಾಲ್ ಸ್ಥಾನ ಪಡೆದರೇ, ಶುಭಮಾನ್ ಗಿಲ್ ಮೀಸಲು ಆರಂಭಿಕರಾಗಿದ್ದಾರೆ.

ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಅಂಗವಾಗಿ ಈ ಎರಡು ಟೆಸ್ಟ್ ಪಂದ್ಯಗಳನ್ನ ಗೆಲ್ಲಲೇಬೇಕಾದ ಒತ್ತಡದಲ್ಲಿ ಭಾರತ ತಂಡ ಇದೆ. ಅನುಭವಿ ಆಟಗಾರರು ವಿಶ್ರಾಂತಿ ಬಯಸಿರುವ ಕಾರಣ, ಯುವ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ತೋರಲು ಉತ್ತಮ ಅವಕಾಶ ಲಭಿಸಿದೆ. ತಂಡ ಇಂತಿದೆ. – ಅಜಿಂಕ್ಯಾ ರಹಾನೆ (ನಾಯಕ), ರಾಹುಲ್, ಮಯಾಂಕ್ ಅಗರ್ವಾಲ್, ಶುಭಮಾನ್ ಗಿಲ್, ಚೇತೆಶ್ವರ ಪೂಜಾರ, ಶ್ರೇಯಸ್ ಅಯ್ಯರ್, ಕೆ.ಎಸ್.ಭರತ್,ವೃದ್ಧಿಮಾನ್ ಸಹಾ, ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಯಂತ್ ಯಾದವ್, ಉಮೇಶ್ ಯಾದವ್, ಇಶಾಂತ್ ಶರ್ಮಾ, ಮಹಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

Post Author: Ravi Yadav