ಪ್ರೇಕ್ಷಕರನ್ನು ಸಂಪೂರ್ಣ ಫಿದಾ ಮಾಡಿರುವ ಗರುಡ ಗಮನ ವೃಷಭ ವಾಹನ ಕೇವಲ ಐದು ದಿನಗಳಲ್ಲಿ ಗಳಿಸಿದ್ದು ಎಷ್ಟು ಕೋಟಿ ಗೊತ್ತೇ??

ನಮಸ್ಕಾರ ಸ್ನೇಹಿತರೇ ಕನ್ನಡ ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಉತ್ತಮ ಮಟ್ಟದ ಚಿತ್ರಗಳು ಬಿಡುಗಡೆಯಾಗುತ್ತಿವೆ. ಈಗಾಗಲೇ ನಿಮಗೆ ತಿಳಿದಿರುವಂತೆ ಕೋಟಿಗೊಬ್ಬ3 ಸಲಗ 100 ಹೀಗೆ ಹಲವಾರು ಚಿತ್ರಗಳು ಈಗಾಗಲೇ ಬಿಡುಗಡೆಯಾಗಿ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನವನ್ನು ಕೂಡ ಕಂಡಿವೆ. ಇನ್ನು ಈಗ ನಾವು ಮಾತನಾಡಲು ಹೊರಟಿರುವುದು ಇದೇ ನವೆಂಬರ್ 17ರಂದು ಬಿಡುಗಡೆಯಾಗಿದ್ದ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಜೊತೆಯಾಗಿ ನಟಿಸಿರುವ ಗರುಡ ಗಮನ ವೃಷಭ ವಾಹನ ಚಿತ್ರದ ಕುರಿತಂತೆ.

ಈಗಾಗಲೇ ರಾಜ್ಯಾದ್ಯಂತ ಬಹುತೇಕ ಎಲ್ಲಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ಈ ಚಿತ್ರ ಈಗಾಗಲೇ ಯುವಜನತೆ ಹಾಗೂ ಫ್ಯಾಮಿಲಿ ಆಡಿಯನ್ಸ್ ಮನಗೆದ್ದಿದೆ. ಇತ್ತೀಚಿನ ದಿನಗಳಲ್ಲಿ ಬಿಡುಗಡೆಯಾಗಿರುವ ಎಲ್ಲಾ ವಿಧದ ಪ್ರೇಕ್ಷಕರನ್ನು ಕೂಡ ಆಕರ್ಷಿಸುವಲ್ಲಿ ಯಶಸ್ವಿಯಾಗಿರುವ ಚಿತ್ರವೆಂದು ಹೇಳಬಹುದಾಗಿದೆ. ಇನ್ನು ಗರುಡ ಗಮನ ವೃಷಭ ವಾಹನ ಚಿತ್ರ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಕಾಂಬಿನೇಷನ್ ಅನ್ನು ಮೊದಲ ಬಾರಿಗೆ ಪ್ರೇಕ್ಷಕರಿಗೆ ಪರಿಚಯಿಸಿದೆ. ಇನ್ನು ಪ್ರೇಕ್ಷಕರ ಪ್ರಕಾರ ಈ ಚಿತ್ರ ಈಗಾಗಲೇ ಬಾಕ್ಸಾಫೀಸ್ ನಲ್ಲಿ ಗೆಲುವನ್ನು ಕಂಡಿದೆ ಎಂದು ಹೇಳಲಾಗುತ್ತಿದೆ.

ಇನ್ನು ಗರುಡ ಗಮನ ವೃಷಭ ವಾಹನ ಚಿತ್ರ ಬಾಕ್ಸ್ ಆಫೀಸ್ ನಲ್ಲಿ 5 ದಿನದಲ್ಲಿ ಎಷ್ಟು ಕಲೆಕ್ಷನ್ ಗಳಿಸಿದೆ ಎಂಬುದರ ಕುರಿತಂತೆ ನಾವು ನಿಮಗೆ ಹೇಳಲು ಹೊರಟಿದ್ದೇವೆ ತಪ್ಪದೇ ಕೊನೆಯವರೆಗೂ ಓದಿ. ಹೌದು ಗೆಳೆಯರೇ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ ಗರುಡ ಗಮನ ವೃಷಭ ವಾಹನ ಮೊದಲ ದಿನದಲ್ಲಿ 1 ಕೋಟಿ ಗಳಿಸಿತ್ತು. ಇನ್ನು ಮೊದಲ ಐದು ದಿನದ ಗಳಿಕೆ ಬರೋಬ್ಬರಿ ಏಳರಿಂದ ಎಂಟು ಕೋಟಿ ಇದೆ ಎಂದು ಅಂದಾಜಿಸಲಾಗುತ್ತಿದೆ. ಚಿತ್ರ ಜನಭರಿತ ಪ್ರದರ್ಶನ ವನ್ನು ಕಾಣುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೂ ಕೂಡ ಹೆಚ್ಚಿನ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

Post Author: Ravi Yadav