ಕರುನಾಡ ವಾಣಿ
ಇದು ನಿಮ್ಮ ಧ್ವನಿ

ಕೊರೊನ ಸಮಯದಲ್ಲಿ ಹೆಚ್ಚು ದಾನ ಮಾಡಿದ ನಟರು ಯಾರು?? ಯಾರ್ಯಾರು ಎಷ್ಟು ದಾನ ಮಾಡಿದ್ದಾರೆ ಗೊತ್ತೇ?? ಕೆಲವರು ಒಂದು ರೂಪಾಯಿ ಕೂಡ ಕೊಟ್ಟಿಲ್ಲ.

13

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ನಿಮಗೆಲ್ಲ ತಿಳಿದಿರುವಂತೆ ಕಳೆದ ಎರಡು ವರ್ಷಗಳಿಂದ ಈ ಮಹಾಮಾರಿ ಮನುಕುಲಕ್ಕೆ ಮಾರಕವಾಗಿ ಪರಿಣಮಿಸಿದೆ. ಇನ್ನು ಈ ಮಹಾಮಾರಿಯ ಸಂದರ್ಭದಲ್ಲಿ ಅದೆಷ್ಟೋ ಜನರು ಕೂಡ ಆರ್ಥಿಕವಾಗಿ ಹಾಗೂ ಆಹಾರವಿಲ್ಲದೆ ಪರದಾಡಿದ್ದಾರೆ. ಈ ಸಂದರ್ಭದಲ್ಲಿ ನಾವು ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಕನ್ನಡ ಚಿತ್ರರಂಗದ ಹಲವಾರು ನಟರು ಈ ಕಾರ್ಯಕ್ಕಾಗಿ ಹಲವಾರು ರೀತಿಯಲ್ಲಿ ಸಹಾಯ ಮಾಡಿದ್ದಾರೆ.

ಹಾಗಿದ್ದರೆ ನಾವು ಇಂದಿನ ವಿಚಾರದಲ್ಲಿ ಮಹಾಮಾರಿ ಸಂದರ್ಭದಲ್ಲಿ ನಮ್ಮ ಕನ್ನಡ ಚಿತ್ರರಂಗದ ಯಾವೆಲ್ಲ ನಟರು ಎಷ್ಟು ದೇಣಿಗೆ ನೀಡಿದ್ದಾರೆ ಎಂಬುದರ ಕುರಿತಂತೆ ವಿವರವಾಗಿ ಹೇಳಲು ಹೊರಟಿದ್ದೇವೆ ತಪ್ಪದೆ ಕೊನೆಯವರೆಗೂ ಓದಿ. ರಮೇಶ್ ಅರವಿಂದ್ ಕನ್ನಡ ಚಿತ್ರರಂಗದ ಎವರ್ಗ್ರೀನ್ ಸ್ಟಾರ್ ಆಗಿರುವ ನಟ ರಮೇಶ್ ಅರವಿಂದ್ ರವರು ಬರೋಬ್ಬರಿ ಐವತ್ತು ಸಾವಿರ ರೂಪಾಯಿ ಹಣವನ್ನು ದೇಣಿಗೆ ಯಾಗಿ ನೀಡಿದ್ದಾರೆ. ಪ್ರಜ್ವಲ್ ದೇವರಾಜ್ ಕನ್ನಡ ಚಿತ್ರರಂಗದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರು ಕೂಡ 50 ಸಾವಿರ ಹಣವನ್ನು ದೇಣಿಗೆಯಾಗಿ ಸರ್ಕಾರಕ್ಕೆ ನೀಡಿದ್ದಾರೆ.

ಅನಿರುದ್ದ ಜಟ್ಕರ್ ಸಾಹಸಸಿಂಹ ವಿಷ್ಣುವರ್ಧನ್ ರವರ ಅಳಿಯ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಟನಾಗಿರುವ ಅನಿರುದ್ಧ ರವರು ಸರ್ಕಾರಕ್ಕೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಧ್ರುವ ಸರ್ಜಾ ಹಾಗೂ ಚಿರು ಸರ್ಜಾ ಸರ್ಜಾ ಮನೆತನದ ಕುಡಿ ಗಳಾಗಿರುವ ಚಿರು ಹಾಗೂ ಧ್ರುವ ಸರ್ಜಾ ಮೊದಲ ಅಲೆಯಲ್ಲಿಯೇ ಇಬ್ಬರೂ ಕೂಡ ತಲಾ ಒಂದು ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ನವರಸ ನಾಯಕ ಜಗ್ಗೇಶ್ ಕನ್ನಡ ಚಿತ್ರರಂಗದ ಹಾಸ್ಯ ನಾಯಕ ನಟನಾಗಿರುವ ನವರಸ ನಾಯಕ ಜಗ್ಗೇಶ್ ಅವರು 1 ಲಕ್ಷದ 1 ಸಾವಿರದ 100 ರೂಪಾಯಿಯನ್ನು ನೀಡಿದ್ದಾರೆ.

ಕ್ರೇಜಿಸ್ಟಾರ್ ರವಿಚಂದ್ರನ್ ಕನ್ನಡ ಚಿತ್ರರಂಗದ ಕನಸುಗಾರ ನಿರ್ದೇಶಕ ನಟ ನಿರ್ಮಾಪಕ ರವಿಚಂದ್ರನ್ ರವರು 1.5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ದುನಿಯಾ ವಿಜಯ್ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ನಿರ್ದೇಶಕ ನಾಗಿರುವ ದುನಿಯಾ ವಿಜಯ್ ರವರು ಎರಡು ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ರಕ್ಷಿತ್ ಶೆಟ್ಟಿ ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ಎರಡು ಲಕ್ಷ ರೂಪಾಯಿ ಹಣವನ್ನು ನೀಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಚಿತ್ರರಂಗದ ಮಳೆ ಹುಡುಗ ಗೋಲ್ಡನ್ ಸ್ಟಾರ್ ಗಣೇಶ್ ಅವರು 3 ಲಕ್ಷದ 1 ಸಾವಿರ ಹಣವನ್ನು ನೀಡಿದ್ದಾರೆ.

ಕರುನಾಡ ಚಕ್ರವರ್ತಿ ಶಿವಣ್ಣ ಕನ್ನಡ ಚಿತ್ರರಂಗದ ಲೀಡರ್ ಆಗಿರುವ ಶಿವಣ್ಣನವರು 5ಲಕ್ಷ ರೂಪಾಯಿ ನೀಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ರಿಯಲ್ ಸ್ಟಾರ್ ಉಪೇಂದ್ರ ರವರು 7 ಲಕ್ಷ ರೂಪಾಯಿ ಹಣವನ್ನು ನೀಡಿದ್ದು ಮಾತ್ರವಲ್ಲದೆ ಕೃಷಿಕರಿಂದ ಅವರ ಬೆಳೆಯನ್ನು ಉತ್ತಮ ಬೆಲೆಗೆ ಖರೀದಿಸಿ ಎಲ್ಲರಿಗೂ ಉಚಿತವಾಗಿ ನೀಡಿದ್ದಾರೆ. ವಿನೋದ್ ರಾಜ್ ಹಾಗೂ ಲೀಲಾವತಿ ಅಮ್ಮ ತಮ್ಮ ಜಮೀನು ಮಾರಿ ಬಂದಂತಹ 18 ಲಕ್ಷ ರೂಪಾಯಿ ಹಣವನ್ನು ನೀಡಿದ್ದಾರೆ. ಅಭಿಷೇಕ್ ಅಂಬರೀಶ್ ಅಭಿಷೇಕ್ ಅಂಬರೀಶ್ ರವರು ಬರೋಬ್ಬರಿ 20 ಲಕ್ಷ ರೂಪಾಯಿ ನೀಡಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಿಚ್ಚ ಸುದೀಪ್ ರವರು ಬರೋಬ್ಬರಿ 25 ಲಕ್ಷ ರೂಪಾಯಿ ಹಣವನ್ನು ನೀಡಿದ್ದಾರೆ.

ಇಷ್ಟು ಮಾತ್ರವಲ್ಲದೆ ತಮ್ಮ ಚಾರಿಟೇಬಲ್ ಟ್ರಸ್ಟ್ ಮೂಲಕ ದಿನಕ್ಕೆ ಸಾವಿರಾರು ಜನರಿಗೆ ಅನ್ನದಾನವನ್ನು ಕೂಡ ಮಾಡಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಗಳು ಬರೋಬ್ಬರಿ 25 ಲಕ್ಷ ರೂಪಾಯಿ ಹಣವನ್ನು ನೀಡಿದ್ದಾರೆ. ಇಷ್ಟು ಮಾತ್ರವಲ್ಲದೆ ಕನ್ನಡ ಚಿತ್ರರಂಗದ ಕಾರ್ಮಿಕ ಕುಟುಂಬಕ್ಕೆ ಎಲ್ಲರಿಗೂ ಸೇರಿಸಿ ಒಂದು ಕೋಟಿಗೂ ಮೀರಿ ದೇಣಿಗೆ ನೀಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಡಿ ಬಾಸ್ ರವರು ಬರೋಬ್ಬರಿ 30 ಲಕ್ಷ ರುಪಾಯಿ ನೀಡಿದ್ದಾರೆ. ಎಷ್ಟು ಮಾತುಗಳಿಗೆ ತಮ್ಮ ಅಭಿಮಾನಿಗಳ ಮೂಲಕ ಮೈಸೂರು ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ಹಸಿದವರಿಗೆ ಅನ್ನದಾನವನ್ನು ಮಾಡಿಸುವ ಮಹಾನ್ ಕಾರ್ಯವನ್ನು ಕೂಡ ಮಾಡಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನ್ನೆಲ್ಲಾ ಅಗಲಿ ಇರುವ ಕನ್ನಡ ಚಿತ್ರರಂಗದ ಧ್ರುವ ನಕ್ಷತ್ರ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರು ಬರೋಬ್ಬರಿ 51 ಲಕ್ಷ ರೂಪಾಯಿ ನೀಡಿದ್ದಾರೆ.

Get real time updates directly on you device, subscribe now.