ಕರುನಾಡ ವಾಣಿ
ಇದು ನಿಮ್ಮ ಧ್ವನಿ

ಡಿ ಬಾಸ್ ಕ್ರಾಂತಿ ಸಿನೆಮಾದಲ್ಲಿ ನಟಿಸಲಿದ್ದಾರೆ ಸಾಕಷ್ಟು ತಾರೆಯರು, ಯಾರ್ಯಾರು ಯಾವ ಪಾತ್ರ ನಿರ್ವಹಣೆ ಮಾಡಲಿದ್ದಾರೆ ಗೊತ್ತೇ??

7

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ಕನ್ನಡದ ಬಾಕ್ಸ್ ಆಫೀಸ್ ಸುಲ್ತಾನ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಹೊಸ ಸಿನಿಮಾ ಕ್ರಾಂತಿ ಸೆಟ್ಟೇರಿರುವುದು ನಿಮಗೆ ತಿಳಿದಿರುವ ವಿಷಯವಾಗಿದೆ. ಯಜಮಾನ ಸಿನಿಮಾ ಖ್ಯಾತಿಯ ಹರಿಕೃಷ್ಣ ಹಾಗೂ ಬಿ.ಸುರೇಶ್ ರವರ ಸಾರಥ್ಯದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಈ ಸಿನಿಮಾಕ್ಕೆ ನಾಯಕಿ ನಟಿಯಾಗಿ ರಚಿತಾ ರಾಮ್ ಇದ್ದಾರೆ. ಈ ಚಿತ್ರಕ್ಕಾಗಿ ನಟ ದರ್ಶನ್ ವಿಶೇಷ ಗೆಟಪ್ ನಲ್ಲಿ ಇರಲಿದ್ದಾರೆ ಎಂಬ ಮಾಹಿತಿ ಹೊರಬಂದಿದೆ.

ಈಗ ಈ ಚಿತ್ರದ ಕುರಿತು ಮತ್ತೊಂದು ಮಹತ್ವದ ಸುದ್ದಿ ಹೊರಬಿದ್ದಿದೆ. ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಯೂಟ್ಯೂಬ್ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಕ್ರಾಂತಿ ಸಿನಿಮಾ ಬಗ್ಗೆ ಮಹತ್ತರವಾದ ಒಂದು ವಿಷಯ ಹೊರಹಾಕಿದ್ದಾರೆ. ಹೌದು ಈ ಸಿನಿಮಾದಲ್ಲಿ ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ದರ್ಶನ್ ರವರ ಅಜ್ಜನ ಪಾತ್ರದಲ್ಲಿ ನಟಿಸುತ್ತಿದ್ದಾರಂತೆ.

ಇನ್ನು ಹಿರಿಯ ನಟಿ ಉಮಾಶ್ರೀರವರು ದರ್ಶನ್ ರವರ ಅಜ್ಜಿಯ ಪಾತ್ರದಲ್ಲಿ ನಟಿಸುತ್ತಿದ್ದಾರಂತೆ. ಹಾಗೆಯೇ ಕನ್ನಡದ ಹಿರಿಯ ನಟ ವಿ.ರವಿಚಂದ್ರನ್ ಸಹ ಈ ಸಿನಿಮಾದಲ್ಲಿ ನಟಿಸುತ್ತಿದ್ದು, ಅವರು ದರ್ಶನ್ ರವರ ತಂದೆಯ ಪಾತ್ರವನ್ನು ನಿರ್ವಹಿಸುತ್ತಾರಂತೆ. ಈ ವಿಷಯವನ್ನ ಸ್ವತಃ ಮುಖ್ಯಮಂತ್ರಿ ಚಂದ್ರು ಬಹಿರಂಗಪಡಿಸಿದ್ದಾರೆ. ಒಟ್ಟಿನಲ್ಲಿ ಎರಡು ವರ್ಷಗಳ ನಂತರ ದರ್ಶನ್ ಮುಖಕ್ಕೆ ಬಣ್ಣ ಹಚ್ಚಿದ್ದು, ಡಿ -ಬಾಸ್ ರವರ ಹೊಸ ಸಿನಿಮಾ ಸಾಕಷ್ಟು ಕ್ರೇಜ್ ಹುಟ್ಟಿಸಿದೆ. ಈ ಬಗ್ಗೆ ನಿಮ್ಮ ಮುಕ್ತ ಅಭಿಪ್ರಾಯಗಳನ್ನು ನಮಗೆ ಕಮೆಂಟ್ ಮೂಲಕ ತಿಳಿಸಿ.

Get real time updates directly on you device, subscribe now.