ರೋಹಿತ್ ಔಟ್, ಕೊಹ್ಲಿ ಅಲಭ್ಯವಿಲ್ಲದೆ ದಕ್ಷಿಣ ಆಫ್ರಿಕಾ ಏಕದಿನ ಸರಣಿಗೆ ಭಾರತ ತಂಡದ ಪ್ರಕಟಣೆ, ನಾಯಕ ಹಾಗೂ ಸ್ಥಾನ ಪಡೆದವರು ಯಾರ್ಯಾರು ಗೊತ್ತೇ??

ರೋಹಿತ್ ಔಟ್, ಕೊಹ್ಲಿ ಅಲಭ್ಯವಿಲ್ಲದೆ ದಕ್ಷಿಣ ಆಫ್ರಿಕಾ ಏಕದಿನ ಸರಣಿಗೆ ಭಾರತ ತಂಡದ ಪ್ರಕಟಣೆ, ನಾಯಕ ಹಾಗೂ ಸ್ಥಾನ ಪಡೆದವರು ಯಾರ್ಯಾರು ಗೊತ್ತೇ??

ನಮಸ್ಕಾರ ಸ್ನೇಹಿತರೇ ದಕ್ಷಿಣ ಆಫ್ರಿಕಾದ ವಿರುದ್ದ ಭಾರತ ತಂಡ ಮೊದ ಟೆಸ್ಟ್ ಪಂದ್ಯ ಗೆದ್ದ ನಂತರ ಈಗ ಜನೇವರಿ 19 ರಿಂದ ನಡೆಯುವ ಏಕದಿನ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಹಲವಾರು ವರ್ಷಗಳ ನಂತರ ಕನ್ನಡಿಗರೊಬ್ಬರು ಭಾರತ ತಂಡದ ನಾಯಕರಾಗಿದ್ದಾರೆ. ಹೌದು ಕನ್ನಡಿಗ ಕೆ.ಎಲ್.ರಾಹುಲ್ ಭಾರತ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿದ್ದಾರೆ. ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ತಂಡದ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ರೋಹಿತ್ ಶರ್ಮಾ ಇನ್ನು ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಅವರ ಬದಲು ಕೆ.ಎಲ್.ರಾಹುಲ್ ಗೆ ನಾಯಕನ ಪಟ್ಟ ನೀಡಲಾಗಿದೆ. ಇನ್ನು ನಾಲ್ಕು ವರ್ಷಗಳ ಬಳಿಕ ಆರ್.ಅಶ್ವಿನ್ ಏಕದಿನ ತಂಡಕ್ಕೆ ಮರಳಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರಂಭಿಕ ಬ್ಯಾಟ್ಸಮನ್ ರುತುರಾಜ್ ಗಾಯಕ್ವಾಡ್ ಹಾಗೂ ಆಲ್ ರೌಂಡರ್ ವೆಂಕಟೇಶ ಅಯ್ಯರ್ ತಂಡದಲ್ಲಿ ಸ್ಥಾನ ಪಡೆದ ಹೊಸಮುಖಗಳಾಗಿದ್ದಾರೆ.

ಇನ್ನು ವೇಗದ ಬೌಲರ್ ಮಹಮದ್ ಶಮಿಯವರಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ರಿಸ್ಟ್ ಸ್ಪಿನ್ನರ್ ಯುಜವೇಂದ್ರ ಚಾಹಲ್ ಹಾಗೂ ಆಫ್ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ತಂಡಕ್ಕೆ ವಾಪಸ್ ಆಗಿದ್ದಾರೆ. ವೇಗಿ ಭುವನೇಶ್ವರ್ ಕುಮಾರ್ ಸಹ ತಂಡಕ್ಕೆ ಮರಳಿದ್ದಾರೆ. ಕನ್ನಡಿಗ ಪ್ರಸಿಧ್ ಕೃಷ್ಣ ಸಹ ಸ್ಥಾನ ಪಡೆದಿದ್ದಾರೆ. ಮೀಸಲು ವಿಕೇಟ್ ಕೀಪರ್ ಆಗಿ ಇಶಾನ್ ಕಿಶನ್ ಸ್ಥಾನ ಗಿಟ್ಟಿಸಿದ್ದಾರೆ. ಒಟ್ಟಿನಲ್ಲಿ ರಾಹುಲ್ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಆಡುವುದನ್ನ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ತಂಡ ಇಂತಿದೆ : ಕೆ.ಎಲ್.ರಾಹುಲ್,ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್,ರಿಷಭ್ ಪಂತ್, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ವಾಷಿಂಗ್ಟನ್ ಸುಂದರ್, ಯುಜವೇಂದ್ರ ಚಾಹಲ್, ಆರ್.ಅಶ್ವಿನ್, ಜಸಪ್ರಿತ್ ಬುಮ್ರಾ, ಭುವನೇಶ್ವರ್ ಕುಮಾರ್, ಮಹಮದ್ ಸಿರಾಜ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಪ್ರಸಿದ್ಧ್ ಕೃಷ್ಣ.