ಬುಮ್ರಾ ನಂತರ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ನಾಯಕನಾಗಲು ನಾನು ಸಿದ್ಧ ಎಂದ ಮತ್ತೊಬ್ಬ ಪ್ರಮುಖ ಆಟಗಾರ ಯಾರು ಗೊತ್ತೇ??

ಬುಮ್ರಾ ನಂತರ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ನಾಯಕನಾಗಲು ನಾನು ಸಿದ್ಧ ಎಂದ ಮತ್ತೊಬ್ಬ ಪ್ರಮುಖ ಆಟಗಾರ ಯಾರು ಗೊತ್ತೇ??

ನಮಸ್ಕಾರ ಸ್ನೇಹಿತರೇ ಈಗಾಗಲೇ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡಕ್ಕೆ ನಾಯಕನಾಗಿ ವಿರಾಟ್ ಕೊಹ್ಲಿ ರವರು ರಾಜೀನಾಮೆ ನೀಡಿರುವ ಕಾರಣದಿಂದಾಗಿ ಈ ಸ್ಥಾನ ಬಹುತೇಕ ತೆರವಾಗಿದೆ ಎಂದು ಹೇಳಬಹುದಾಗಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸುದ್ದಿಮಾಧ್ಯಮಗಳಲ್ಲಿ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ನಾಯಕನಾಗಿ ಆಯ್ಕೆ ಆಗಬಲ್ಲಂತಹ ಹಲವಾರು ಆಟಗಾರರ ಹೆಸರನ್ನು ಗಾಳಿ ಸುದ್ದಿಯಂತೆ ಹರಿ ಬಿಡಲಾಗಿದೆ.

ವಿರಾಟ್ ಕೊಹ್ಲಿ ರವರ ನಂತರ ಸೌತ್ ಆಫ್ರಿಕಾದ ಟೆಸ್ಟ್ ಸರಣಿಯಲ್ಲಿ ಕೆ ಎಲ್ ರಾಹುಲ್ ರವರ ನಾಯಕನಾಗಿ ಜವಾಬ್ದಾರಿಯನ್ನು ವಹಿಸಿಕೊಂಡರು ಕೂಡ ಸಮರ್ಥವಾಗಿ ನಿರ್ವಹಿಸಲು ವಿಫಲರಾಗಿರುತ್ತಾರೆ. ಬಿಸಿಸಿಐ ಕೂಡ ಇದರ ಕುರಿತಂತೆ ಇನ್ನೂ ಅಧಿಕೃತವಾಗಿ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಹೀಗಾಗಿ ಟೆಸ್ಟ್ ಕ್ರಿಕೆಟ್ ತಂಡದ ನಾಯಕನ ಸ್ಥಾನಕ್ಕೆ ಕೆ ಎಲ್ ರಾಹುಲ್ ರೋಹಿತ್ ಶರ್ಮಾ ರಿಷಬ್ ಪಂತ್ ಜಸ್ಪ್ರೀತ್ ಬುಮ್ರಾ ಹೀಗೆ ಹಲವಾರು ನ ಆಟಗಾರರ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ. ಇದರ ನಡುವಲ್ಲಿ ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರರೊಬ್ಬರು ಭಾರತೀಯ ಟೆಸ್ಟ್ ಕ್ರಿಕೆಟ್ ತಂಡವನ್ನು ಮುನ್ನಡೆಸಲು ನನಗೇನು ಅಭ್ಯಂತರ ಇಲ್ಲ ಎಂಬುದಾಗಿ ಹೇಳಿಕೊಂಡಿದ್ದಾರೆ. ಹಾಗಿದ್ದರೆ ಭಾರತೀಯ ಆಟಗಾರ ಯಾರು ಎಂಬುದನ್ನು ತಿಳಿಯೋಣ ಬನ್ನಿ.

ಅಷ್ಟೊಂದು ಯೋಚಿಸುವ ಅಗತ್ಯವಿಲ್ಲ ಸ್ನೇಹಿತರೆ ಈ ರೀತಿಯ ಮಾತುಗಳನ್ನು ಆಡಿರುವುದು ಇನ್ಯಾರೂ ಅಲ್ಲ ಭಾರತೀಯ ಕ್ರಿಕೆಟ್ ತಂಡದ ಭರವಸೆಯ ಪ್ರಮುಖ ಬೌಲರ್ ಆಗಿರುವ ಮೊಹಮ್ಮದ್ ಶಮಿ. ಅವರು ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದು ಸಂದರ್ಶನವೊಂದರಲ್ಲಿ ಈ ಕುರಿತಂತೆ ಮಾತನಾಡುವಾಗ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ನಾಯಕತ್ವವನ್ನು ಯಾರು ತಾನೇ ಬಯಸಲ್ಲ ಹೇಳಿ ನನಗೆ ಯಾವುದೇ ರೀತಿಯ ಜವಾಬ್ದಾರಿಯನ್ನು ನೀಡಿದರೂ ನಾನು ನಿಭಾಯಿಸಲು ಸರ್ವ ಸನ್ನದ್ಧನಾಗಿದ್ದೇನೆ ಎಂಬುದಾಗಿ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಉನ್ನತೀಕರಣಕ್ಕೆ ಎಲ್ಲಾ ರೀತಿಯಲ್ಲಿ ಕೊಡುಗೆ ನೀಡಲು ನಾನು ಸಿದ್ಧನಾಗಿದ್ದೇನೆ ಎಂಬುದಾಗಿ ಹೇಳಿದ್ದಾರೆ. ಮೊಹಮ್ಮದ್ ಶಮಿ ಅವರ ಈ ಹೇಳಿಕೆಯ ಕುರಿತಂತೆ ನಿಮ್ಮ ಅಭಿಪ್ರಾಯಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ.