ಕರುನಾಡ ವಾಣಿ
ಇದು ನಿಮ್ಮ ಧ್ವನಿ

ವಿಂಡಿಸ್ ವಿರುದ್ದ ಮೊದಲ ಏಕದಿನ ಪಂದ್ಯಕ್ಕೆ ಆಡುವ 11 ರ ಬಳಗದಲ್ಲಿ ಸ್ಥಾನ ಪಡೆಯಬಹುದಾದ ಸಂಭವನೀಯ ಆಟಗಾರರು ಯಾರ್ಯಾರು ಗೊತ್ತೇ??

20

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ಭಾರತ ಹಾಗೂ ವೆಸ್ಟ್ ಇಂಡಿಸ್ ತಂಡದ ನಡುವೆ ನಡೆಯಲಿರುವ ಸರಣಿ ಇದೇ ಫೆಬ್ರವರಿ 6 ರಿಂದ ನಡೆಯಲಿದೆ. ಮೊದಲು ಮೂರು ಏಕದಿನ ಪಂದ್ಯಗಳು ಅಹಮದಾಬಾದ್ ನಲ್ಲಿ ನಡೆದರೇ, ನಂತರದ ಮೂರು ಟಿ 20 ಪಂದ್ಯಗಳು ಕೋಲ್ಕತ್ತಾದಲ್ಲಿ ನಡೆಯಲಿವೆ. ಈಗಾಗಲೇ ಭಾರತ ತಂಡ ಪ್ರಕಟವಾಗಿದ್ದು, ವಿಂಡೀಸ್ ವಿರುದ್ದ ಮೊದಲ ಪಂದ್ಯಕ್ಕೆ ಕಣಕ್ಕಿಳಿಯುವ ಸಂಭವನೀಯ ತಂಡ ಹೀಗಿದೆ. ಬನ್ನಿ ನೋಡೋಣ.

ಮೊದಲ ಎಕದಿನ ಪಂದ್ಯದಲ್ಲಿ ಕೆ.ಎಲ್.ರಾಹುಲ್ ಹೊರಗುಳಿಯುತ್ತಿರುವ ಕಾರಣ ನಾಯಕ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಇನ್ನಿಂಗ್ಸ್ ಆರಂಭಿಸುವುದು ಖಚಿತ.ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ನಾಲ್ಕನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಹಾಗೂ ಐದನೇ ಕ್ರಮಾಂಕದಲ್ಲಿ ಸೂರ್ಯ ಕುಮಾರ್ ಯಾದವ್ ಆಡುವುದು ಖಚಿತವಾಗಲಿದೆ. ಇನ್ನು ಆರನೇ ಕ್ರಮಾಂಕದಲ್ಲಿ ಆಲ್ ರೌಂಡರ್ ದೀಪಕ್ ಹೂಡಾ ಪದಾರ್ಪಣೆ ಮಾಡುವ ಸಾಧ್ಯತೆ ಇದೆ. ಇನ್ನು ಏಳು ಹಾಗೂ ಎಂಟನೇ ಕ್ರಮಾಂಕದಲ್ಲಿ ಹೊಸ ಬೌಲಿಂಗ್ ಆಲ್ ರೌಂಡರ್ ಗಳಾದ ಶಾರ್ದೂಲ್ ಠಾಕೂರ್ ಹಾಗೂ ದೀಪಕ್ ಚಾಹರ್ ಆಡುವುದು ಪಕ್ಕಾ ಆಗಿದೆ.

ಒಂಬತ್ತನೇ ಕ್ರಮಾಂಕದಲ್ಲಿ ಬುಮ್ರಾ ಹಾಗೂ ಶಮಿ ಆಡದ ಕಾರಣ ವೇಗಿ ಮಹಮದ್ ಸಿರಾಜ್ ತಂಡಕ್ಕೆ ವಾಪಸ್ ಆಗಲಿದ್ದಾರೆ. ಹತ್ತನೇ ಕ್ರಮಾಂಕದಲ್ಲಿ ಲೆಗ್ ಸ್ಪಿನ್ನರ್ ಯುಜವೇಂದ್ರ ಚಾಹಲ್ ಮತ್ತು ಹನ್ನೊಂದನೇ ಕ್ರಮಾಂಕದಲ್ಲಿ ವೇಗಿ ಪ್ರಸಿದ್ಧ್ ಕೃಷ್ಣ ಆಡಲಿದ್ದಾರೆ. ಈ ತಂಡದ ಬಗ್ಗೆ ನಿಮ್ಮ ಮುಕ್ತ ಅಭಿಪ್ರಾಯಗಳನ್ನು ನಮಗೆ ಕಮೆಂಟ್ ಮೂಲಕ ತಿಳಿಸಿ. ಒಟ್ಟಾರೆಯಾಗಿ ಸಂಭಾವ್ಯ ತಂಡ ಇಂತಿದೆ : ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಸೂರ್ಯ ಕುಮಾರ್ ಯಾದವ್, ದೀಪಕ್ ಹೂಡಾ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮಹಮದ್ ಸಿರಾಜ್, ಯುಜವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ.

Get real time updates directly on you device, subscribe now.