ಕರುನಾಡ ವಾಣಿ
ಇದು ನಿಮ್ಮ ಧ್ವನಿ

ವಿಂಡೀಸ್ ವಿರುದ್ದದ ಮೊದಲ ಏಕದಿನ ಪಂದ್ಯಕ್ಕೆ ಸ್ಥಾನ ಪಡೆಯಲಿರುವ ಸಂಭವನೀಯ ಆಟಗಾರರು ಯಾರು ಗೊತ್ತೇ??

14

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ವಿಂಡೀಸ್ ವಿರುದ್ದದ ಏಕದಿನ ಸರಣಿ ಭಾನುವಾರ ನಡೆಯಲಿದೆ. ಮೊದಲ ಮೂರು ಏಕದಿನ ಪಂದ್ಯಗಳು ಅಹಮದಾಬಾದ್ ನಲ್ಲಿ ನಡೆದರೇ, ನಂತರದ ಮೂರು ಟಿ 20 ಪಂದ್ಯಗಳು ಕೋಲ್ಕತ್ತಾದಲ್ಲಿ ನಡೆಯಲಿವೆ. ಈಗಾಗಲೇ ಟೀಮ್ ಇಂಡಿಯಾದಲ್ಲಿ ಕೆಲವು ಆಟಗಾರರಿಗೆ ಕೋವಿಡ್ ಸೋಂಕು ಧೃಡವಾದ ಕಾರಣ, ಅವರ ಬದಲಿ ಆಟಗಾರರನ್ನಾಗಿ ಕೆಲವು ಆಟಗಾರರಿಗೆ ಅವಕಾಶ ನೀಡಲಾಗಿದೆ. ಕೋವಿಡ್ ಸೋಂಕು ಇಲ್ಲದ ಆಟಗಾರರನ್ನು ಒಳಗೊಂಡು, ಆಡಲಿರುವ ಸಂಭವನೀಯ ಆಟಗಾರರ ತಂಡ ಇಂತಿದೆ.

ನೀರಿಕ್ಷೆಯಂತೆ ನಾಯಕ ರೋಹಿತ್ ಶರ್ಮಾ ಮತ್ತು ಕನ್ನಡಿಗ ಮಯಾಂಕ್ ಅಗರ್ವಾಲ್ ಇನ್ನಿಂಗ್ಸ್ ಆರಂಭಿಸಿದರೇ, ಮೂರನೇ ಕ್ರಮಾಂಕದಲ್ಲಿ ವಿರಾಟ್, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯ ಕುಮಾರ್ ಯಾದವ್, ಐದನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಆಡುವುದು ಪಕ್ಕಾ ಆಗಲಿದೆ. ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಆಲ್ ರೌಂಡರ್ ದೀಪಕ್ ಹೂಡಾ ಪದಾರ್ಪಣೆ ಮಾಡುವ ಸಾಧ್ಯತೆ ನಿಚ್ಚಳವಾಗಿದೆ.

ಇನ್ನು ಏಳನೇ ಕ್ರಮಾಂಕದಲ್ಲಿ ಆಲ್ ರೌಂಡರ್ ದೀಪಕ್ ಚಾಹರ್, ಎಂಟನೇ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್, ಒಂಬತ್ತನೇ ಕ್ರಮಾಂಕದಲ್ಲಿ ಮಹಮದ್ ಸಿರಾಜ್, ಹತ್ತನೇ ಕ್ರಮಾಂಕದಲ್ಲಿ ಯುಜವೇಂದ್ರ ಚಾಹಲ್ ಹಾಗೂ ಹನ್ನೊಂದನೇ ಕ್ರಮಾಂಕದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆಯುವ ಸಾಧ್ಯತೆ ಇದೆ. ಐವರು ತಜ್ಞ ಬ್ಯಾಟ್ಸಮನ್, ಮೂವರು ಸ್ಪಿನ್ನರ್ ಹಾಗೂ ಮೂವರು ವೇಗದ ಬೌಲರ್ ಗಳೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ. ಮಯಾಂಕ್ ಅಗರ್ವಾಲ್ ಹಾಗೂ ದೀಪಕ್ ಹೂಡಾಗೆ ಸಿಗಲಿರುವ ಅವಕಾಶ ಹೇಗೆ ಬಳಸಿಕೊಳ್ಳುತ್ತಾರೆಂಬುದನ್ನು ಕಾದು ನೋಡಬೇಕಿದೆ. ತಂಡ ಇಂತಿದೆ : ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದೀಪಕ್ ಚಾಹರ್, ವಾಷಿಂಗ್ಟನ್ ಸುಂದರ್, ಮಹಮದ್ ಸಿರಾಜ್, ಯುಜವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ.

Get real time updates directly on you device, subscribe now.