ಕರುನಾಡ ವಾಣಿ
ಇದು ನಿಮ್ಮ ಧ್ವನಿ

ಹರಾಜಿನಲ್ಲಿ ಮ್ಯಾಕ್ಸ್ವೆಲ್ ರವರನ್ನು ಬಲವಾಗಿ ನಂಬಿಕೊಂಡಿದ್ದ ಆರ್ಸಿಬಿ ಗೆ ಕೈಕೊಟ್ಟ ಮ್ಯಾಕ್ಸ್ವೆಲ್, ಏನು ಗೊತ್ತೇ??.

24

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ಈಗಾಗಲೇ 2022 ರ 15ನೇ ಆವೃತ್ತಿಯ ಟಾಟಾ ಐಪಿಎಲ್ ನ ಮೆಗಾ ಹರಾಜು ಪ್ರಕ್ರಿಯೆ ಸಾಂಗವಾಗಿ ನೆರವೇರಿದ್ದು ಇನ್ನೇನು ಕೆಲವೇ ವಾರಗಳಲ್ಲಿ ಐಪಿಎಲ್ ಟೂರ್ನಮೆಂಟ್ ಪ್ರಾರಂಭವಾಗಲಿದೆ. ಇನ್ನು ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಮಾತನಾಡುವುದಾದರೆ ಹರಾಜು ಪ್ರಕ್ರಿಯೆಯಲ್ಲಿ ಖರೀದಿಸಿರುವ ಆಟಗಾರರನ್ನು ಹೊರತುಪಡಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿರಾಟ್ ಕೊಹ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ.

ಕಳೆದ ಬಾರಿ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಆಸ್ಟ್ರೇಲಿಯಾದ ಮೂಲದ ಆಲ್-ರೌಂಡರ್ ಆಗಿರುವ ಗ್ಲೆನ್ ಮ್ಯಾಕ್ಸ್ವೆಲ್ ಅವರು ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದರು. ಈ ಬಾರಿ ಕೂಡ ಅತ್ಯುತ್ತಮ ಲಯದಲ್ಲಿರುವ ಗ್ಲೆನ್ ಮ್ಯಾಕ್ಸ್ವೆಲ್ ರವರು ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಅತ್ಯುತ್ತಮ ಪ್ರದರ್ಶನವನ್ನು ನೀಡುವ ಭರವಸೆಯನ್ನು ಮೂಡಿಸಿದ್ದಾರೆ.

ಆದರೂ ಕೂಡ ಐಪಿಎಲ್ ಆರಂಭದಲ್ಲಿಯೇ ತಂಡಕ್ಕೆ ಶಾಕ್ ಅನ್ನು ನೀಡಿದ್ದಾರೆ ಗ್ಲೆನ್ ಮ್ಯಾಕ್ಸ್ವೆಲ್ ರವರು. ಹಾಗಿದ್ದರೆ ಆ ಶಾ’ಕ್ ಏನು ಎಂದು ತಿಳಿಯೋಣ ಬನ್ನಿ. ಹೌದು ಗೆಳೆಯರೇ ಭಾರತೀಯ ಮೂಲದ ವಿನಿ ರಾಮನ್ ರವರನ್ನು ಆಸ್ಟ್ರೇಲಿಯಾದ ಕ್ರಿಕೆಟಿಗ ಆಗಿರುವ ಗ್ಲೆನ್ ಮ್ಯಾಕ್ಸ್ವೆಲ್ ರವರು ಮಾರ್ಚ್ ನಲ್ಲಿ ವಿವಾಹ ಆಗುತ್ತಿರುವುದರಿಂದಾಗಿ ಐಪಿಎಲ್ ನ ಮೊದಲ ವಾರದ ಪಂದ್ಯಾಟಗಳನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಹಾಗೂ ಆಸ್ಟ್ರೇಲಿಯಾದ ಪಾಕಿಸ್ತಾನದ ಪ್ರವಾಸವನ್ನು ಕೂಡ ಮಿಸ್ ಮಾಡಿಕೊಳ್ಳಲಿದ್ದಾರೆ. ಎರಡನೇ ವಾರದಿಂದ ಐಪಿಎಲ್ ನ ಪಂದ್ಯಾಟಗಳನ್ನು ಆಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಳ್ಳಲಿದ್ದಾರೆ. ಈ ವಿಚಾರದ ಕುರಿತಂತೆ ನಿಮ್ಮ ಅನಿಸಿಕೆಗಳನ್ನು ತಪ್ಪದೆ ಹಂಚಿಕೊಳ್ಳಿ.

Get real time updates directly on you device, subscribe now.