ಕರುನಾಡ ವಾಣಿ
ಇದು ನಿಮ್ಮ ಧ್ವನಿ

ನೀವು ಕೇವಲ ಹತ್ತನೇ ತರಗತಿ ಪಾಸ್ ಮಾಡಿದ್ದಾರೆ ಸಾಕು, ಪೋಸ್ಟ್ ಆಫೀಸ್ ನಲ್ಲಿ ಸರ್ಕಾರೀ ಹುದ್ದೆ, ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತೇ??

32

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ, ಭಾರತೀಯ ಅಂಚೆ ಇಲಾಖೆ ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಜನವರಿ 17ರಿಂದ ಆರಂಭವಾಗಿದೆ. ಅಂಚೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಇನ್ನಷ್ತು ಮಾಹಿತಿಗಳನ್ನು ಈ ಲೇಖನದಲ್ಲಿ ಕೊಡಲಾಗಿದೆ. ಮುಂದೆ ಓದಿ..

ಭಾರತೀಯ ಅಂಚೆಯಲ್ಲಿ ಒಟ್ಟು 29 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಅರ್ಹರು ಅರ್ಜಿ ಸಲ್ಲಿಸಬಹುದು. ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ ಹತ್ತನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 15 ಅರ್ಜಿ ಸಲ್ಲಿಸಲು ನಿಮಗೆ ಕೊನೆಯ ದಿನಾಂಕವಾಗಿದೆ.

ಇನ್ನು ವಿದ್ಯಾರ್ಹತೆಯ ಬಗ್ಗೆ ನೋಡುವುದಾದರೆ, ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ಹಾಗೆಯೇ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲೈಟ್ ಮತ್ತು ಹೆವಿ ಮೋಟಾರ್ ವೆಹಿಕಲ್ ಡ್ರೈವಿಂಗ್ ನಲ್ಲಿ ಕನಿಷ್ಠ 3 ವರ್ಷ ಅನುಭವ ಇರಬೇಕು. ಇನ್ನು ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-27 ವರ್ಷ ಮೀರಿರಬಾರದು.

ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದೆಹಲಿಯಲ್ಲಿ ಪೋಸ್ಟಿಂಗ್ ಆಗಲಿದೆ. ಇನ್ನು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 19,900-63,200 ರೂ. ತಿಂಗಳ ವೇತನ ಇರುತ್ತದೆ. ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗೆ ಅಭ್ಯರ್ಥಿಗಳು ಆಫ್ ಲೈನ್ ಅರ್ಜಿ ಸಲ್ಲಿಸಬೇಕಾಗಿದ್ದು, ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಿ. ವಿಳಾಸ: ಹಿರಿಯ ವ್ಯವಸ್ಥಾಪಕರು, ಮೇಲ್ ಮೋಟಾರ್ ಸೇವೆ, ಸಿ-121, ನರೈನಾ ಇಂಡಸ್ಟ್ರಿಯಲ್ ಏರಿಯಾ ಹಂತ-I, ನರೈನಾ, ನವದೆಹಲಿ -110028. ಹೆಚ್ಚಿನ ಮಾಹಿತಿಗಾಗಿ www.indiapost.gov.in ಗೆ ಭೇಟಿ ನೀಡಿ.

Get real time updates directly on you device, subscribe now.