ಶುರುವಾಯಿತು ದ್ರಾವಿಡ್ ಮಾಸ್ಟರ್ ಮೈಂಡ್ ಆತ, ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಅಚ್ಚರಿಯ ತಂಡ ಆಯ್ಕೆ, ಸ್ಥಾನ ಪಡೆದವರು ಯಾರ್ಯಾರು ಗೊತ್ತೇ??

ಶುರುವಾಯಿತು ದ್ರಾವಿಡ್ ಮಾಸ್ಟರ್ ಮೈಂಡ್ ಆತ, ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಅಚ್ಚರಿಯ ತಂಡ ಆಯ್ಕೆ, ಸ್ಥಾನ ಪಡೆದವರು ಯಾರ್ಯಾರು ಗೊತ್ತೇ??

ನಮಸ್ಕಾರ ಸ್ನೇಹಿತರೇ ಸದ್ಯ ವೆಸ್ಟ್ಇಂಡೀಸ್ ವಿರುದ್ಧದ ಟಿ20 ಸರಣಿ ಗೆದ್ದಿರುವ ಭಾರತ ತಂಡ ಮುಂದಿನ ತಿಂಗಳು ಪ್ರವಾಸಿ ಶ್ರೀಲಂಕಾ ವಿರುದ್ಧ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.ಆ ಟೆಸ್ಟ್ ಗಳಿಗಾಗಿ ಈಗ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದ್ದು ಅಚ್ಚರಿಯ ಮೇಲೆ ಅಚ್ಚರಿಯನ್ನು ನೀಡಿದೆ. ಇದೇ ವೇಳೆ ವಿರಾಟ್ ಕೊಹ್ಲಿ ನಂತರ ಭಾರತ ಟೆಸ್ಟ್ ಕ್ರಿಕೆಟ್ ತಂಡಕ್ಕೆ ನಾಯಕನಾರು ಎಂಬ ಪ್ರಶ್ನೆಗೂ ಸಹ ಉತ್ತರವನ್ನು ನೀಡಿದ್ದು, ರೋಹಿತ್ ಶರ್ಮಾ ರನ್ನು ಪೂರ್ಣ ಪ್ರಮಾಣದ ಟೆಸ್ಟ್ ತಂಡದ ನಾಯಕ ಎಂದು ಘೋಷಿಸಲಾಗಿದೆ. ಈ ಸರಣಿಗೆಂದು ಜಸಪ್ರಿತ್ ಬುಮ್ರಾರನ್ನು ನಾಯಕ ಪಟ್ಟಕ್ಕೆ ನೇಮಕ ಮಾಡಲಾಗಿದೆ.

ಇನ್ನು ಸೌತ್ ಆಫ್ರಿಕಾ ಪ್ರವಾಸದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಭಾರತ ತಂಡದ ಹಿರಿಯ ಆಟಗಾರರಾಗಿದ್ದ ಚೇತೆಶ್ವರ ಪೂಜಾರ, ಅಜಿಂಕ್ಯಾ ರಹಾನೆ, ಇಶಾಂತ್ ಶರ್ಮಾ ಹಾಗೂ ವೃದ್ಧಿಮಾನ್ ಸಹಾರನ್ನು ಕೈ ಬಿಟ್ಟಿದೆ. ಆಲ್ ರೌಂಡರ್ ರವೀಂದ್ರ ಜಡೇಜಾ ತಂಡಕ್ಕೆ ವಾಪಸ್ ಆಗಿದ್ದಾರೆ. ಗಾಯಗೊಂಡಿರುವ ಕೆ.ಎಲ್.ರಾಹುಲ್ ಹಾಗೂ ಅಕ್ಷರ್ ಪಟೇಲ್ ಆಯ್ಕೆಯಾಗಿಲ್ಲ. ಅದಲ್ಲದೇ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದ ಪ್ರಿಯಾಂಕ್ ಪಾಂಚಾಲ್ ಪುನರಾಯ್ಕೆಯಾಗಿದ್ದಾರೆ. ವಿಕೇಟ್ ಕೀಪರ್ ಬ್ಯಾಟ್ಸಮನ್ ಕೆ.ಎಸ್.ಭರತ್ ಸಹ ಪುನರಾಯ್ಕೆಯಾಗಿದ್ದಾರೆ.

ಇನ್ನು ಉತ್ತರ ಪ್ರದೇಶದ ಎಡಗೈ ಸ್ಪಿನ್ನರ್ ಸೌರಭ್ ಕುಮಾರ್ ತಂಡದಲ್ಲಿರುವ ಹೊಸ ಮುಖವಾಗಿದ್ದಾರೆ. ಅವರು ಅಕ್ಷರ್ ಪಟೇಲ್ ಸ್ಥಾನವನ್ನು ತುಂಬಲಿದ್ದಾರೆ ಎಂದು ಹೇಳಿದ್ದಾರೆ. ಈ ತಂಡದ ಬಗ್ಗೆ ನಿಮ್ಮ ಮುಕ್ತ ಅಭಿಪ್ರಾಯಗಳನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಿ. ತಂಡ ಇಂತಿದೆ : ರೋಹಿತ್ ಶರ್ಮಾ, ಮಾಯಾಂಕ್ ಅಗರವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮಾನ್ ಗಿಲ್, ರಿಷಭ್ ಪಂತ್, ಕೆ.ಎಸ್.ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮಹಮದ್ ಶಮಿ, ಮಹಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.