ಕೊಹ್ಲಿ ರಾಹುಲ್ ಇಲ್ಲದೆ, ನಾಳೆ ನಡೆಯುವ ಶ್ರೀಲಂಕಾ ವಿರುದ್ಧದ ಮೊದಲ ಟಿ೨೦ ಗೆ ಭಾರತದ ಸಂಭಾವ್ಯ ಇಲೆವೆನ್ ಹೇಗಿದೆ ಗೊತ್ತೇ??

ಕೊಹ್ಲಿ ರಾಹುಲ್ ಇಲ್ಲದೆ, ನಾಳೆ ನಡೆಯುವ ಶ್ರೀಲಂಕಾ ವಿರುದ್ಧದ ಮೊದಲ ಟಿ೨೦ ಗೆ ಭಾರತದ ಸಂಭಾವ್ಯ ಇಲೆವೆನ್ ಹೇಗಿದೆ ಗೊತ್ತೇ??

ನಮಸ್ಕಾರ ಸ್ನೇಹಿತರೇ ವೆಸ್ಟ್ಇಂಡೀಸ್ ವಿರುದ್ಧದ ಟಿ20 ಸರಣಿ ಗೆದ್ದಿರುವ ಭಾರತ ತಂಡ ಈಗ ಪ್ರವಾಸಿ ಶ್ರೀಲಂಕಾ ವಿರುದ್ಧ ಮೂರು ಟಿ ೨೦ ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಆದರೇ ಸರಣಿಗೆ ಮುನ್ನವೇ ಭಾರತ ತಂಡಕ್ಕೆ ಆಘಾತವಾಗಿದ್ದು, ಸ್ಟಾರ್ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ಯಾದವ್ ಹಾಗೂ ವೇಗಿ ದೀಪಕ್ ಚಾಹರ್ ತಂಡದಿಂದ ಹೊರಬಿದ್ದಿದ್ದಾರೆ. ಇವರಿಬ್ಬರ ಅನುಪಸ್ಥಿತಿಯ ನಡುವೆ ಆಡುವ ಹನ್ನೊಂದರ ಬಳಗ ಹೇಗಿದೆ ಎಂಬುದನ್ನು ತಿಳಿಯೋಣ ಬನ್ನಿ.

ತಂಡದ ಆರಂಭಿಕರಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯುವುದು ಖಚಿತವಾಗಿದೆ. ಮೂರನೇ ಕ್ರಮಾಂಕದಲ್ಲಿ ವಿಕೇಟ್ ಕೀಪರ್ ಬ್ಯಾಟ್ಸಮನ್ ಸಂಜು ಸ್ಯಾಮ್ಸನ್ , ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ಐದನೇ ಕ್ರಮಾಂಕದಲ್ಲಿ ಆಲ್ ರೌಂಡರ್ ದೀಪಕ್ ಹೂಡಾ ಕಣಕ್ಕಿಳಿಯಲಿದ್ದಾರೆ. ಆರನೇ ಕ್ರಮಾಂಕದಲ್ಲಿ ಕಮ್ ಬ್ಯಾಕ್ ಮಾಡಿರುವ ಆಲ್ ರೌಂಡರ್ ರವೀಂದ್ರ ಜಡೇಜಾ, ಏಳನೇ ಕ್ರಮಾಂಕದಲ್ಲಿ ಆಲ್ ರೌಂಡರ್ ವೆಂಕಟೇಶ್ ಅಯ್ಯರ್ ಕಣಕ್ಕಿಳಿಯುತ್ತಾರೆ.

ಎಂಟನೇ ಕ್ರಮಾಂಕದಲ್ಲಿ ವೇಗಿ ಹರ್ಷಲ್ ಪಟೇಲ್, ಒಂಬತ್ತನೇ ಕ್ರಮಾಂಕದಲ್ಲಿ ಭುವನೇಶ್ವರ್ ಕುಮಾರ್ ಹಾಗೂ ಹತ್ತು ಮತ್ತು ಹನ್ನೊಂದನೇ ಕ್ರಮಾಂಕದಲ್ಲಿ ವೇಗಿ ಜಸಪ್ರಿತ್ ಬುಮ್ರಾ ಹಾಗೂ ಸ್ಪಿನ್ನರ್ ಯುಜವೇಂದ್ರ ಚಾಹಲ್ ಕಣಕ್ಕಿಳಿಯಲಿದ್ದಾರೆ. ಮತ್ತೊಬ್ಬ ಸ್ಪಿನ್ನರ್ ರವಿ ಬಿಷ್ಣೋಯಿ ಆಡಬೇಕು ಎಂದಾಗ, ದೀಪಕ್ ಹೂಡಾ ಹೊರಗುಳಿಯಬೇಕಾಗುತ್ತದೆ. ಈ ಬಗ್ಗೆ ನಿಮ್ಮ ಮುಕ್ತ ಅಭಿಪ್ರಾಯಗಳನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಿ. ತಂಡ ಇಂತಿದೆ : ರೋಹಿತ್ ಶರ್ಮಾ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸಪ್ರಿತ್ ಬುಮ್ರಾ, ಯುಜವೇಂದ್ರ ಚಾಹಲ್, ರವಿ ಬಿಷ್ಣೋಯಿ.