ಮುಂದಿನ ವಿಧಾನಸಭಾ ಚುನಾವಣೆಯ ಕುರಿತು ಅಚ್ಚರಿಯ ನಿರ್ಧಾರ ತೆಗೆದುಕೊಳ್ಳಲು ಮುಂದಾದ ಸಿಎಂ, ಬೇಡವೇ ಬೇಡ ಎಂದ ಕಾರ್ಯಕರ್ತರು. ಏನಂತೆ ಗೊತ್ತೇ??

ಮುಂದಿನ ವಿಧಾನಸಭಾ ಚುನಾವಣೆಯ ಕುರಿತು ಅಚ್ಚರಿಯ ನಿರ್ಧಾರ ತೆಗೆದುಕೊಳ್ಳಲು ಮುಂದಾದ ಸಿಎಂ, ಬೇಡವೇ ಬೇಡ ಎಂದ ಕಾರ್ಯಕರ್ತರು. ಏನಂತೆ ಗೊತ್ತೇ??

ನಮಸ್ಕಾರ ಸ್ನೇಹಿತರೇ ಇತ್ತಿಚೆಗಷ್ಟೇ ಪ್ರಕಟವಾದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯದ ಮೂರು ಪಕ್ಷಗಳಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ. ಕರ್ನಾಟಕದಲ್ಲಿ ಮುಂದಿನ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆ ಹಲವಾರು ವೈವಿಧ್ಯತೆ ಹಾಗೂ ಅಚ್ಚರಿಗಳಿಗೆ ಕಾರಣವಾಗುವ ಸಾಧ್ಯತೆ ಇದೆ. ಈವರೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಯಕರು ಎರೆಡೆರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ವಾಡಿಕೆಯಾಗುತ್ತಿದೆ.

ಸದ್ಯ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿ ಗೆದ್ದಿರುವುದು ಹಾವೇರಿ ಜಿಲ್ಲೆಯ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ. ಆದರೇ ಮುಂದಿನ ಚುನಾವಣೆಯಲ್ಲಿ ಆ ಕ್ಷೇತ್ರದಿಂದ ಪುನಃ ಸ್ಪರ್ಧಿಸಿದರೇ ಗೆಲ್ಲುವುದು ಕಷ್ಟ ಸಾಧ್ಯ ಎಂದು ಹೇಳಲಾಗುತ್ತಿದೆ. ಕ್ಷೇತ್ರದಲ್ಲಿ ನಿರ್ಣಾಯಕ ಮತಗಳಾದ ಪಂಚಮಸಾಲಿ ಹಾಗೂ ಮುಸ್ಲಿಂ ಮತಗಳು ಮುಂದಿನ ಭಾರಿ ಬಿಜೆಪಿಗೆ ಬಾರದಿದ್ದಲ್ಲಿ ಬೊಮ್ಮಾಯಿ ಸೋಲುವ ಸಾಧ್ಯತೆ ಇದೆ. ಹಾಗಾಗಿ ರಿಸ್ಕ್ ತೆಗೆದುಕೊಳ್ಳದಿರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರಂತೆ.

ಹಾಗಾಗಿ ಹೊಸ ಸೇಫ್ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಬೊಮ್ಮಾಯಿ ದಾವಣಗೆರೆ ಜಿಲ್ಲೆಯ ಒಂದು ಕ್ಷೇತ್ರದಿಂದಲೂ ಸಹ ಸ್ಪರ್ಧಿಸಲು ಸಿದ್ದತೆ ನಡೆಸಿದ್ದಾರೆ. ಅದರಲ್ಲೂ ದಾವಣಗೆರೆ ಜಿಲ್ಲೆಯ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಹಾಲಿ ಬಿಜೆಪಿಯ ಶಾಸಕ ಎಸ್.ಎ.ರವೀಂದ್ರನಾಥ್ ವಯಸ್ಸಿನ ಕಾರಣ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಅನುಮಾನ. ಆದರೇ ಪರಾಜಿತ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ್ ತಂದೆ ಶ್ಯಾಮನೂರು ಶಿವಶಂಕರಪ್ಪ ಸ್ಪರ್ಧಿಸಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಹಾಗಾಗಿ ಅಳೆದು ತೂಗಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಬೊಮ್ಮಾಯಿ ಪಾಲಿಗೆ ಸೇಫ್ ಆಗಲಿದೆ. ಹಾಗಾಗಿ ಬೊಮ್ಮಾಯಿ ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಜೊತೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಿಮ್ಮ ಮುಕ್ತ ಅಭಿಪ್ರಾಯಗಳನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಿ.