ಪೂಜಾರ ಹಾಗೂ ರಹಾನೆ ಸ್ಥಾನ ತುಂಬಲು ಈತನೊಬ್ಬ ಸಾಕು ಎಂದು ಯುವ ಆಟಗಾರನನ್ನು ಆಯ್ಕೆ ಮಾಡಿದ ರೋಹಿತ್, ಯಾರಂತೆ ಗೊತ್ತೇ??

ಪೂಜಾರ ಹಾಗೂ ರಹಾನೆ ಸ್ಥಾನ ತುಂಬಲು ಈತನೊಬ್ಬ ಸಾಕು ಎಂದು ಯುವ ಆಟಗಾರನನ್ನು ಆಯ್ಕೆ ಮಾಡಿದ ರೋಹಿತ್, ಯಾರಂತೆ ಗೊತ್ತೇ??

ನಮಸ್ಕಾರ ಸ್ನೇಹಿತರೇ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಮುಗಿದಿದೆ. ದೇಶದ ಅತಿ ದೊಡ್ಡ ಕ್ರಿಕೆಟ್ ಹಬ್ಬ ಐಪಿಎಲ್ ಗೆ ಇನ್ನು ಒಂದು ವಾರವಷ್ಟೇ ಬಾಕಿ ಇದೆ. ಈ ಮಧ್ಯೆ ಐಸಿಸಿ ತನ್ನ ನೂತನ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು, ಭಾರತೀಯ ಕ್ರಿಕೇಟಿಗರು ಉತ್ತಮ ಹಾಗೂ ಜೀವನಶ್ರೇಷ್ಠ ಸಾಧನೆಯನ್ನು ಮಾಡಿದ್ದಾರೆ. ಇನ್ನು ಲಂಕಾ ವಿರುದ್ಧ ಟೀಮ್ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಪ್ರದರ್ಶನದ ಬಗ್ಗೆ ಮೆಚ್ಚುಗೆಯ ಸುರಿಮಳೆ ಸುರಿಸಿದ್ದಾರೆ.

ಅದರಲ್ಲೂ ಶ್ರೀಲಂಕಾ ವಿರುದ್ಧದ ಟಿ 20 ಸರಣಿಯಲ್ಲಿ ಸರಣಿ ಶ್ರೇಷ್ಠ ಹಾಗೂ ಎರಡನೇ ಟೆಸ್ಟ್ ನಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ ಮುಂಬೈಕರ್ ಶ್ರೇಯಸ್ ಅಯ್ಯರ್ ಬಗ್ಗೆ ಮತ್ತೊಬ್ಬ ಮುಂಬೈಕರ್ ರೋಹಿತ್ ಶರ್ಮಾ ಹೊಗಳಿಕೆಯ ಮಹಾಪೂರವನ್ನೇ ಹರಿಸಿದ್ದಾರೆ. ಶ್ರೇಯಸ್ ಅಯ್ಯರ್ ತಮಗೆ ಸಿಕ್ಕ ಅವಕಾಶವನ್ನು ಎರಡು ಕೈಗಳಿಂದ ಅತ್ಯುತ್ತಮವಾಗಿ ಬಳಸಿಕೊಂಡಿದ್ದಾರೆ. ತಂಡ ಸಂಕಷ್ಟದಲ್ಲಿದ್ದ ಸಮಯದಲ್ಲಿ ಉತ್ತಮವಾಗಿ ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತ ತಂಡದ ಚೇತೆಶ್ವರ ಪೂಜಾರ ಹಾಗೂ ಅಜಿಂಕ್ಯಾ ರಹಾನೆ ಯವರ ಸ್ಥಾನವನ್ನು ಇವರು ಸಮರ್ಥವಾಗಿ ತುಂಬಬಲ್ಲರು ಎಂದು ಹೇಳಿದ್ದಾರೆ. ಇದು ಇನ್ನು ಮುಂದೆ ರಹಾನೆ ಹಾಗೂ ಚೇತೇಶ್ವರ ಪೂಜಾರ ತಂಡದಲ್ಲಿ ಸ್ಥಾನ ಪಡೆಯುವುದು ಅನುಮಾನ ಎಂದು ಹೇಳಲಾಗುತ್ತಿದೆ. ಸದ್ಯ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕನಾಗಿರುವ ಶ್ರೇಯಸ್ ಅಯ್ಯರ್ ಬ್ಯಾಟ್ ಐಪಿಎಲ್ ನಲ್ಲಿ ಹೇಗೆ ಆಡಲಿದೆ ಎಂಬುದು ಸದ್ಯದ ಕುತೂಹಲವಾಗಿದೆ. ಈ ಬಗ್ಗೆ ನಿಮ್ಮ ಮುಕ್ತ ಅಭಿಪ್ರಾಯಗಳನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಿ.