ಕರುನಾಡ ವಾಣಿ
ಇದು ನಿಮ್ಮ ಧ್ವನಿ

ಗೆಲುವಿನ ಟ್ರ್ಯಾಕ್ ಮರಳಿದ್ದರೂ ಕೂಡ ಬಲಾಢ್ಯ ಹೈದರಾಬಾದ್ ತಂಡವನ್ನು ಸೋಲಿಸಲು ಆರ್ಸಿಬಿ ತಂಡದಲ್ಲಿ ಮಾಡಬೇಕಾದ ಬದಲಾವಣೆಗಳೇನು ಗೊತ್ತೇ?? ಯಾರು ಹೊರಹೋಗಬೇಕು ಗೊತ್ತೇ?

1,251

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ನಮ್ಮೆಲ್ಲರ ನೆಚ್ಚಿನ ತಂಡವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದ್ವಿತಿಯಾರ್ಧದ ಪಂದ್ಯಗಳಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿತ್ತು. ಆದರೆ ಮತ್ತೆ ಮೊನ್ನೆಯಷ್ಟೇ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಗೆಲುವಿನ ಮರಳಿ ಬಂದಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉಳಿದಿರುವ ಮೂರು ಪಂದ್ಯಗಳಲ್ಲಿ ಕೂಡ ಎಲ್ಲವನ್ನು ಗೆಲ್ಲುವಂತಹ ಪರಿಸ್ಥಿತಿಗೆ ಒಳಗಾಗಿದೆ. ಸುಲಭವಾಗಿ ಪ್ಲೇಆಫ್ ಹಂತಕ್ಕೆ ತೇರ್ಗಡೆಯಾಗಲು ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉಳಿದಿರುವಂಥ ಮೂರು ಪಂದ್ಯಗಳಲ್ಲಿ ಗೆಲ್ಲಲೇಬೇಕಾಗಿದೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯದಲ್ಲಿ ಸಂದರ್ಭ ತಂಡದ ವಿರುದ್ಧ ಸೆಣಸಲಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಹಿಂದೆ ಇದೇ ಟೂರ್ನಮೆಂಟಿನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 68 ರನ್ನಿಗೆ ಆಲೌಟ್ ಆಗಿತ್ತು. ಹೀಗಾಗಿ ಮುಂದಿನ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಡುಪ್ಲೆಸಿಸ್ ನಾಯಕತ್ವದ ಆರ್ಸಿಬಿ ಸಾಕಷ್ಟು ಬದಲಾವಣೆಗಳು ಹಾಗೂ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ತಂಡವನ್ನು ಎದುರಿಸಬೇಕಾಗಿದೆ. ಇನ್ನು ಇದರಲ್ಲಿ ಮಾಡಬೇಕಾದಂತಹ ಪ್ರಮುಖ ಬದಲಾವಣೆಗಳೆಂದರೆ ಮಹಿಪಾಲ್ ಲೊಮ್ರೋರ್ ರವರನ್ನು ಬ್ಯಾಟಿಂಗ್ ಕ್ರಮಾಂಕದಲ್ಲಿ ಸ್ವಲ್ಪ ಮೇಲಕ್ಕೆ ಕಳಿಸಬೇಕಾಗಿದೆ. ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಸ್ವಲ್ಪ ಕೆಳಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಕಳಿಸಬೇಕಾಗುತ್ತದೆ.

ಯಾಕೆಂದರೆ ಅವರಿಗೆ ಒಂದು ವೇಳೆ ಆರಂಭಿಕ ಬ್ಯಾಟಿಂಗ್ ಕ್ರಮಾಂಕ ಕಳಪೆ ಪ್ರದರ್ಶನವನ್ನು ನೀಡಿದರೂ ಕೂಡ ತಂಡದ ಬ್ಯಾಟಿಂಗ್ ಜವಾಬ್ದಾರಿಯನ್ನು ನಿರ್ವಹಿಸುವ ಕ್ಷಮತೆಯಿದೆ. ರಜತ್ ಪಾಟಿದಾರ್ ಅವರನ್ನು ಕೂಡ ಮೇಲಿನ ಕ್ರಮಾಂಕದಲ್ಲಿ ಆಡಿಸಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಆರ್ಸಿಬಿ ತಂಡದ ಪರವಾಗಿ ಮೊಹಮ್ಮದ್ ಸಿರಾಜ್ ಕೆಲವರು ದುಬಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರ ಬದಲಿಗೆ ಸಿದ್ಧಾರ್ಥ ಕೌಲ್ ರವರನ್ನು ಆಡಿಸಿದರೆ ಚೆನ್ನಾಗಿರುತ್ತದೆ. ಕೇವಲ ಒಂದು ಪಂದ್ಯದಲ್ಲಿ ಇದೊಂದು ಬದಲಾವಣೆ ಮಾಡಿದರೆ ಖಂಡಿತವಾಗಿ ಇದು ವರ್ಕೌಟ್ ಆದರೆ ಮುಂದಿನ ಪಂದ್ಯಗಳಲ್ಲಿ ಕೂಡ ಇದರ ಪ್ರಯೋಗವನ್ನು ಮಾಡಬಹುದಾಗಿದೆ. ಈ ವಿಚಾರದ ಕುರಿತಂತೆ ನಿಮ್ಮ ಅನಿಸಿಕೆಗಳನ್ನು ನಮ್ಮೊಂದಿಗೆ ತಪ್ಪದೇ ಹೆಚ್ಚಿಕೊಳ್ಳಿ.

Get real time updates directly on you device, subscribe now.