ಕರುನಾಡ ವಾಣಿ
ಇದು ನಿಮ್ಮ ಧ್ವನಿ

ಇಂಗ್ಲೆಂಡ್ ವಿರುದ್ಧದ ಏಕಮಾತ್ರ ಟೆಸ್ಟ್ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದ ಬಿಸಿಸಿಐ;, ತಂಡದಲ್ಲಿ ಯಾರ್ಯಾರು ಇದ್ದಾರೆ ಗೊತ್ತೇ??

120

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ಇಂಗ್ಲೆಂಡ್ ಹಾಗೂ ಭಾರತದ ಮುಗಿಯದ ಒಂದು ಟೆಸ್ಟ್ ಮ್ಯಾಚ್ ಅನ್ನು ಭಾರತ ಇಂಗ್ಲೆಂಡ್ ಪ್ರವಾಸದಲ್ಲಿ ಆಡಲಿದ್ದು ಬಿಸಿಸಿಐ ಈಗಾಗಲೆ ತಂಡವನ್ನು ಅಧಿಕೃತವಾಗಿ ಪ್ರಕಟಣೆ ಮಾಡಿದೆ. ರೋಹಿತ್ ಶರ್ಮ ಈ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದು ಕನ್ನಡಿಗ ಕೆಎಲ್ ರಾಹುಲ್ ರವರು ಈ ಸಂದರ್ಭದಲ್ಲಿ ಉಪನಾಯಕನಾಗಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೌತ್ ಆಫ್ರಿಕಾ ಸರಣಿಯ ವಿಶ್ರಾಂತಿಯ ನಂತರ ವಿರಾಟ್ ಕೊಹ್ಲಿ ರವರು ಈ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಯುವ ಉದಯೋನ್ಮುಖ ಬ್ಯಾಟ್ಸ್ಮನ್ ಶುಭಮನ್ ಗಿಲ್ ಶ್ರೇಯಸ್ ಅಯ್ಯರ್ ಹನುಮ ವಿಹಾರಿ ರವರಂತಹ ಭರವಸೆಯ ಬ್ಯಾಟ್ಸ್ಮನ್ಗಳು ಕೂಡ ಈ ಬಾರಿ ತಂಡದಲ್ಲಿ ಆಯ್ಕೆಯಾಗಿದ್ದಾರೆ. ರಿಷಬ್ ಪಂತ್ ರವರು ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದು ಕೆಎಎಸ್ ಭರತ್ ರವರು ಕೂಡ ಬದಲಿ ವಿಕೆಟ್ ಕೀಪರ್ ಆಗಿ ತಂಡದಲ್ಲಿದ್ದಾರೆ. ಭಾರತೀಯ ಟೆಸ್ಟ್ ಕ್ರಿಕೆಟ್ ತಂಡ ಖಾಯಂ ಆಟಗಾರ ಹಾಗೂ ಓಪನಿಂಗ್ ಬ್ಯಾಟ್ಸ್ ಮನ್ ಆಗಿರುವ ಚೇತೇಶ್ವರ ಪೂಜಾರ ಅವರು ಕೂಡ ಈ ಬಾರಿ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇನ್ನುಳಿದಂತೆ ಆಲ್ರೌಂಡರ್ ಗಳಾಗಿರುವ ರವೀಂದ್ರ ಸಿಂಗ್ ಜಡೇಜಾ ರವಿಚಂದ್ರನ್ ಅಶ್ವಿನ್ ಹಾಗೂ ಶಾರ್ದುಲ್ ಠಾಕೂರ್ ಅವರು ಕೂಡ ತಂಡದಲ್ಲಿದ್ದಾರೆ. ಇನ್ನುಳಿದಂತೆ ಬೌಲರ್ಗಳ ವಿಚಾರಕ್ಕೆ ಬರುವುದಾದರೆ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ಈ ಬಾರಿಯ ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶನದ ನಂತರ ಉಮೇಶ್ ಯಾದವ್ ಅವರು ಕೂಡ ತಂಡಕ್ಕೆ ಮರುಕಳಿಸಿದ್ದಾರೆ. ಮತ್ತೊಬ್ಬ ಕನ್ನಡಿಗನಾಗಿರುವ ಪ್ರಸಿದ್ಧ್ ಕೃಷ್ಣ ಕೂಡ ಈ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಏಕಮಾತ್ರ ಟೆಸ್ಟ್ ಪಂದ್ಯಕ್ಕೆ ಈ ತಂಡವನ್ನು ಪ್ರಕಟಿಸಲಾಗಿದ್ದು ಈ ತಂಡದ ಕುರಿತಂತೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.

Get real time updates directly on you device, subscribe now.