ನಡೆಯುತ್ತಿದೆ ರಾಹುಲ್, ರಾಹುಲ್ ಜೋಡಿಯ ಮಾಸ್ಟರ್ ಪ್ಲಾನ್. ಸೌತ್ ಆಫ್ರಿಕಾ ಮೊದಲ ಟಿ 20 ಪಂದ್ಯಕ್ಕೆ ಸಂಭಾವ್ಯ ತಂಡ ಹೇಗಿದೆ ಗೊತ್ತೇ??

ನಡೆಯುತ್ತಿದೆ ರಾಹುಲ್, ರಾಹುಲ್ ಜೋಡಿಯ ಮಾಸ್ಟರ್ ಪ್ಲಾನ್. ಸೌತ್ ಆಫ್ರಿಕಾ ಮೊದಲ ಟಿ 20 ಪಂದ್ಯಕ್ಕೆ ಸಂಭಾವ್ಯ ತಂಡ ಹೇಗಿದೆ ಗೊತ್ತೇ??

ನಮಸ್ಕಾರ ಸ್ನೇಹಿತರೇ ಐಪಿಎಲ್ ಫೈನಲ್ ಗೆ ಇನ್ನು ಒಂದು ಮೆಟ್ಟಿಲು ಮಾತ್ರ ಬಾಕಿ ಇದೆ. ಐಪಿಎಲ್ ನ ಕಪ್ ಎತ್ತಿ ಹಿಡಿಯುವವರು ಗುಜರಾತ್ ಟೈಟಾನ್ಸ್ ತಂಡದವರೋ ಅಥವಾ ರಾಜಸ್ಥಾನ ರಾಯಲ್ಸ್ ತಂಡದವರೋ ಎಂಬುದು ಇನ್ನು 24 ತಾಸಿನೊಳಗೆ ನಿರ್ಧಾರವಾಗುತ್ತದೆ. ಐಪಿಎಲ್ ಜ್ವರ ಮುಗಿದ ಬೆನ್ನಲ್ಲೇ ಭಾರತ ತಂಡ ದಕ್ಷಿಣ ಆಫ್ರಿಕಾದ ವಿರುದ್ಧ ಐದು ಟಿ 20 ಪಂದ್ಯಗಳ ಸರಣಿ ಆಡಲಿದೆ. ಈ ಸರಣಿಗೆ ಈಗಾಗಲೇ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಕೆ.ಎಲ್.ರಾಹುಲ್ ಈ ತಂಡದ ನಾಯಕತ್ವವನ್ನು ವಹಿಸುತ್ತಿದ್ದಾರೆ.

ಜೂನ್ 9 ರಿಂದ ಆರಂಭವಾಗಲಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲಿರುವ ಸಂಭವನೀಯ ಆಟಗಾರರು ಯಾರು ಎಂಬುದನ್ನು ತಿಳಿಯೋಣ ಬನ್ನಿ. ಆರಂಭಿಕರಾಗಿ ನಾಯಕ ಕೆ.ಎಲ್.ರಾಹುಲ್ ಹಾಗೂ ವಿಕೇಟ್ ಕೀಪರ್ ಇಶಾನ್ ಕಿಶನ್ ಆಡಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ನಾಲ್ಕನೇ ಕ್ರಮಾಂಕದಲ್ಲಿ ರಿಷಭ್ ಪಂತ್, ಐದನೇ ಕ್ರಮಾಂಕದಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಆರನೇ ಕ್ರಮಾಂಕದಲ್ಲಿ ವಿಕೇಟ್ ಕೀಪರ್ ಬ್ಯಾಟ್ಸಮನ್ ದಿನೇಶ್ ಕಾರ್ತಿಕ್,

ಏಳನೇ ಕ್ರಮಾಂಕದಲ್ಲಿ ವೇಗಿ ಹರ್ಷಲ್ ಪಟೇಲ್, ಎಂಟನೇ ಕ್ರಮಾಂಕದಲ್ಲಿ ವೇಗಿ ಭುವನೇಶ್ವರ್ ಕುಮಾರ್, ಒಂಬತ್ತನೇ ಕ್ರಮಾಂಕದಲ್ಲಿ ಸ್ಪಿನ್ನರ್ ಕುಲದೀಪ್ ಯಾದವ್, ಹತ್ತನೇ ಕ್ರಮಾಂಕದಲ್ಲಿ ಮ್ಯಾಜಿಕ್ ಸ್ಪಿನ್ನರ್ ಯುಜವೇಂದ್ರ ಚಾಹಲ್, ಹನ್ನೊಂದನೇ ಕ್ರಮಾಂಕದಲ್ಲಿ ಎಡಗೈ ವೇಗಿ ಅರ್ಶದೀಪ್ ಸಿಂಗ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ನಿಮ್ಮ ಮುಕ್ತ ಅಭಿಪ್ರಾಯಗಳನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಿ. ಒಟ್ಟಾರೆಯಾಗಿ ತಂಡ ಇಂತಿದೆ – ಕೆ.ಎಲ್.ರಾಹುಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಯುಜವೇಂದ್ರ ಚಾಹಲ್, ಅರ್ಶದೀಪ್ ಸಿಂಗ್.