ಟಿ 20 ಭಾರತ ತಂಡದಲ್ಲಿ ಪರಿಣಾಮಕಾರಿ ಆಟಗಾರನನ್ನು ಹೆಸರಿಸಿದ ರಾಹುಲ್ ದ್ರಾವಿಡ್. ಯಾರಂತೆ ಗೊತ್ತೇ?? ಹೇಳಿದ್ದೇನು ಗೊತ್ತೇ??

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ನಾಳೆಯಿಂದ ಸೌತ್ ಆಫ್ರಿಕಾ ವಿರುದ್ಧದ ಟಿ-20 ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಬಾರಿ ರೋಹಿತ್ ಶರ್ಮ ರವರ ಬದಲಿಗೆ ಕೆಎಲ್ ರಾಹುಲ್ ರವರು ತಂಡವನ್ನು ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಶಮಿ ಹಾಗೂ ಬುಮ್ರಾ ಸೇರಿದಂತೆ ಹಲವಾರು ಆಟಗಾರರಿಗೆ ವಿಶ್ರಾಂತಿಯನ್ನು ನೀಡಲಾಗಿದೆ.

ಇನ್ನು ಈ ಬಾರಿ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಬಹುತೇಕ ತಂಡದಲ್ಲಿ ಯುವ ಆಟಗಾರರನ್ನು ಸೇರಿಸಿಕೊಳ್ಳಲಾಗಿದೆ. ಐಪಿಎಲ್ ನಲ್ಲಿ ಅತ್ಯಂತ ಉತ್ತಮವಾಗಿ ಪರ್ಫಾರ್ಮೆನ್ಸ್ ನೀಡಿರುವ ಯುವ ಆಟಗಾರರನ್ನು ಈ ಬಾರಿ ಭಾರತೀಯ ಕ್ರಿಕೆಟ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಮುಂದಿನ ಟಿ-20ವಿಶ್ವಕಪ್ ದೃಷ್ಟಿಯಲ್ಲಿ ಇದೊಂದು ಉತ್ತಮ ಬೆಳವಣಿಗೆ ಎಂದರೆ ತಪ್ಪಾಗಲಾರದು. ಈ ಬಾರಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಒಬ್ಬ ಆಟಗಾರ ಪರಿಣಾಮಕಾರಿಯಾಗಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬುದಾಗಿ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರು ಅಭಿಪ್ರಾಯಪಟ್ಟಿದ್ದಾರೆ. ಹಾಗಿದ್ದರೆ ರಾಹುಲ್ ದ್ರಾವಿಡ್ ಅವರು ಯಾರ ಬಗ್ಗೆ ಈ ರೀತಿ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಹೌದು ಗೆಳೆಯ ರಾಹುಲ್ ದ್ರಾವಿಡ್ ಅವರು ಈ ರೀತಿ ಮಾತನಾಡಿದ್ದು ಬೇರೆ ಯಾರ ಬಗ್ಗೆಯೂ ಅಲ್ಲ ಬದಲಾಗಿ ದಿನೇಶ್ ಕಾರ್ತಿಕ್ ಅವರ ಬಗ್ಗೆ.

ಹೌದು ಗೆಳೆಯರ ಬರೋಬ್ಬರಿ ಮೂರು ವರ್ಷಗಳ ನಂತರ ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ ಆಗಿರುವ ದಿನೇಶ್ ಕಾರ್ತಿಕ್ ರವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ 16 ಪಂದ್ಯಗಳಿಂದ 330 ರನ್ನುಗಳನ್ನು ಬಾರಿಸುವ ಮೂಲಕ ತಂಡದಲ್ಲಿ ಫಿನಿಶರ್ ಜವಾಬ್ದಾರಿಯನ್ನು ಸಂಪೂರ್ಣ ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಈ ಕಾರಣದಿಂದಾಗಿ ಅವರನ್ನು ಈ ಬಾರಿ ಭಾರತೀಯ ಕ್ರಿಕೆಟ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂಬುದಾಗಿ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಆರ್ಸಿಬಿ ತಂಡದಲ್ಲಿ ನಿಭಾಯಿಸಿರುವ ಫಿನಿಶರ್ ಜವಾಬ್ದಾರಿಯನ್ನು ಭಾರತೀಯ ಕ್ರಿಕೆಟ್ ತಂಡದಲ್ಲಿ ಕೂಡ ಯಶಸ್ವಿಯಾಗಿ ನಿಭಾಯಿಸಲು ಎಂಬುದಾಗಿ ರಾಹುಲ್ ದ್ರಾವಿಡ್ ರವರು ಮಾತನಾಡಿದ್ದಾರೆ. ಈ ಕುರಿತಂತೆ ನಿಮ್ಮ ಅಭಿಪ್ರಾಯವನ್ನು ತಪ್ಪದೆ ಕಾಮೆಂಟ್ ಮಾಡಿ ಹಂಚಿಕೊಳ್ಳಿ.