ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್ ಗೆ ವೇಗಿಯನ್ನು ಆಯ್ಕೆ ಮಾಡಿದ ಸುನಿಲ್ ಗವಾಸ್ಕರ್. ಇವರು ಇರಬೇಕು ಎಂದದ್ದು ಯಾರನ್ನು ಗೊತ್ತೇ?

ನಮಸ್ಕಾರ ಸ್ನೇಹಿತರೆ ಕಳೆದ ವರ್ಷ ಭಾರತೀಯ ಕ್ರಿಕೆಟ್ ತಂಡ ಟಿ-ಟ್ವೆಂಟಿ ವಿಶ್ವಕಪ್ ನಲ್ಲಿ ಅತ್ಯಂತ ಕಳಪೆ ಪ್ರದರ್ಶನವನ್ನು ನೀಡಿ ಟೂರ್ನಮೆಂಟ್ ಇಂದ ಹೊರಹೋಗಿತ್ತು. ಆದರೆ ಈ ಬಾರಿ ಗೆಲ್ಲಲೇ ಬೇಕಾಗಿರುವ ಒತ್ತಡದಲ್ಲಿದೆ ಅದು ಕೂಡ ಆಸ್ಟ್ರೇಲಿಯಾ ನೆಲದಲ್ಲಿ. ಹೌದು ಗೆಳೆಯರೇ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಎನ್ನುವುದು ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ರವರ ನಾಯಕತ್ವದಲ್ಲಿ ಈ ಬಾರಿ ಭಾರತೀಯ ಕ್ರಿಕೆಟ್ ತಂಡ ವಿಶ್ವಕಪ್ ಗೆಲ್ಲುತ್ತದೆಯೇ ಎಂಬುದನ್ನು ನೋಡಲು ಪ್ರತಿಯೊಬ್ಬ ಭಾರತೀಯ ಕ್ರಿಕೆಟ್ ಅಭಿಮಾನಿ ಕೂಡ ಕಾಯುತ್ತಿದ್ದಾನೆ.

ಇನ್ನು ವಿಶ್ವಕಪ್ ತಂಡದಲ್ಲಿ ಯಾರೆಲ್ಲ ಆಡಬಹುದು ಎನ್ನುವ ಲೆಕ್ಕಾಚಾರಗಳು ಈಗಾಗಲೇ ಕ್ರಿಕೆಟ್ ಪಂಡಿತರಲ್ಲಿ ಪ್ರಾರಂಭವಾಗಿದೆ. ಆದರೆ 83ರ ವಿಶ್ವಕಪ್ ವಿಜೇತ ತಂಡದ ಆಟಗಾರ ಆಗಿರುವ ಸುನಿಲ್ ಗಾವಸ್ಕರ್ ಅವರು ಆಸ್ಟ್ರೇಲಿಯಾದಲ್ಲಿ ನಡೆಯುವ ವಿಶ್ವಕಪ್ ನಲ್ಲಿ ಭಾರತ ಕ್ರಿಕೆಟ್ ಕ್ರಿಕೆಟ್ ತಂಡದಲ್ಲಿ ವೇಗಿ ಖಂಡಿತವಾಗಿ ಇರಲೇಬೇಕು ಎಂಬುದನ್ನು ಪ್ರತಿಪಾದಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯುವ ವಿಶ್ವಕಪ್ ಟೂರ್ನಮೆಂಟ್ ನಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಭುವನೇಶ್ವರ್ ಕುಮಾರ್ ಇರಲೇಬೇಕು ಎಂಬುದಾಗಿ ಸುನೀಲ್ ಗಾವಸ್ಕರ್ ಅವರು ಹೇಳಿದ್ದಾರೆ. ಇದಕ್ಕೆ ಅವರು ಹಲವಾರು ಮೌಲ್ಯಯುತ ಕಾರಣಗಳನ್ನು ಕೂಡ ನೀಡಿದ್ದಾರೆ.

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತೀಯ ತಂಡದ ಪರವಾಗಿ ಮಿಂಚುತ್ತಿರುವ ಏಕೈಕ ವೇಗಿ ಎಂದರೆ ಅದು ಭುವನೇಶ್ವರ್ ಕುಮಾರ್. ಚೆಂಡನ್ನು 2ಕಡೆಗಳಲ್ಲಿ ಸ್ವಿಂಗ್ ಮಾಡುವ ಕಲೆಯನ್ನು ಹೊಂದಿರುವ ಕೆಲವೇ ಕೆಲವು ವಿಶ್ವದ ಬೌಲರ್ಗಳಲ್ಲಿ ಭುವನೇಶ್ವರ್ ಕುಮಾರ್ ಕೂಡ ಒಬ್ಬರು. ಭಾರತೀಯ ಕ್ರಿಕೆಟ್ ತಂಡದ ಅನುಭವಿ ಬೌಲರ್ ಆಗಿರುವ ಭುವನೇಶ್ವರ್ ಕುಮಾರ್ ಅವರು ಆಸ್ಟ್ರೇಲಿಯಾದ ಬೌನ್ಸಿಂಗ್ ಹಾಗೂ ವೇಗದ ಪಿಚ್ ಗಳಲ್ಲಿ ಖಂಡಿತವಾಗಿ ಪರಿಣಾಮಕಾರಿಯಾಗಿ ಹಾಗೂ ಅಪಾಯಕಾರಿ ಬೌಲರ್ ಆಗಿ ಕಾಣಿಸಿಕೊಳ್ಳಬಹುದಾಗಿದೆ ಎಂಬುದಾಗಿ ಸುನಿಲ್ ಗಾವಸ್ಕರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕಾಗಿ ಅವರನ್ನು ವಿಶ್ವಕಪ್ ತಂಡದಲ್ಲಿ ಸೇರಿಸಿಕೊಳ್ಳುವುದು ಅಗತ್ಯವಾಗಿದೆ ಎಂಬುದಾಗಿ ಪ್ರತಿಪಾದಿಸಿದ್ದಾರೆ.