ಕರುನಾಡ ವಾಣಿ
ಇದು ನಿಮ್ಮ ಧ್ವನಿ

ಭಾರತ ತಂಡಕ್ಕೆ ಅಸ್ತ್ರವಾಗಲಿದ್ದಾನೆ ಈ ಯುವ ಆಟಗಾರ, ಖಂಡಿತಾ ಈತ ಆಡಿದರೆ ಭಾರತಕ್ಕೆ ವಿಶ್ವಕಪ್ ಪಕ್ಕ. ಯಾರು ಗೊತ್ತೇ??

2,635

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಈಗ ಭಾರತೀಯ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಮುಗಿಸಿ ಟಿ20 ಪಂದ್ಯಕ್ಕೆ ಅಣಿಯಾಗಿದೆ. ರೋಹಿತ್ ಶರ್ಮ ರವರ ನೇತೃತ್ವದಲ್ಲಿ ಭಾರತೀಯ ಕ್ರಿಕೆಟ್ ತಂಡ ಈಗ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಇನ್ನು ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಮೊದಲ ಪಂದ್ಯದಲ್ಲಿ ಆರಂಭಿಕ ಆಟಗಾರನ ಜವಾಬ್ದಾರಿಯನ್ನು 23ವರ್ಷದ ಇಶಾನ್ ಕಿಶನ್ ರವರು ನಿರ್ವಹಿಸಲಿದ್ದಾರೆ.

Follow us on Google News

ಕೇವಲ 23 ವರ್ಷದವರ ಆಗಿದ್ದರೂ ಕೂಡ ಇಶಾನ್ ಯಾವುದೇ ಅತ್ಯಂತ ಅನುಭವಿ ಬೌಲರ್ ಅನ್ನು ಕೂಡ ಪರಿಪರಿಯಾಗಿ ಕಾಡುವಂತೆ ಆಕ್ರಮಣಕಾರಿ ರೀತಿಯಲ್ಲಿ ಬ್ಯಾಟಿಂಗ್ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಕ್ರಿಕೆಟ್ ತಂಡ ಕಂಡಿರುವ ಅತ್ಯಂತ ಉತ್ತಮ ಯುವ ಆಟಗಾರ ಎಂದರೆ ತಪ್ಪಾಗಲಾರದು. ಇತ್ತೀಚಿಗಷ್ಟೇ ಭಾರತದಲ್ಲಿ ಮುಗಿದಿರುವ ಸೌತ್ ಆಫ್ರಿಕಾ ವಿರುದ್ಧದ ಟಿ-20 ಸರಣಿಯಲ್ಲಿ ಭಾರತೀಯ ಕ್ರಿಕೆಟ್ ತಂಡದ ಪರವಾಗಿ ಮಾತ್ರವಲ್ಲದೆ ಇಡೀ ಸರಣಿಯಲ್ಲಿ ಅತ್ಯಂತ ಹೆಚ್ಚು ರನ್ ಗಳಿಸಿರುವ ಆಟಗಾರ ಇಶಾನ್ ಕಿಶನ್ ಆಗಿದ್ದಾರೆ. ಈ ಬಾರಿ ಐಪಿಎಲ್ ನಲ್ಲಿ ಮಂಕಾಗಿದ್ದರು ಕೂಡ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ತಂಡದ ಪರವಾಗಿ ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವುದು ನಿಜಕ್ಕೂ ಕೂಡ ಶ್ಲಾಘನೀಯವಾಗಿದೆ.

ಹೀಗಾಗಿ ಅಕ್ಟೋಬರ್ ಹಾಗೂ ನವೆಂಬರ್ನಲ್ಲಿ ಮುಂಬರುವ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ತಂಡದಲ್ಲಿ ಇಶಾನ್ ಕಿಶನ್ ರವರನ್ನು ತಂಡದಲ್ಲಿ ಆಯ್ಕೆ ಮಾಡಿದರು ಖಂಡಿತವಾಗಿ ರೋಹಿತ್ ಶರ್ಮ ರವರ ತಂಡಕ್ಕೆ ಮ್ಯಾಚ್ ವಿನ್ನರ್ ಆಗಿ ಕಾಣಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನ ಇಲ್ಲ ಎನ್ನುವುದಾಗಿ ಕ್ರಿಕೆಟ್ ಪಂಡಿತರ ಲೆಕ್ಕಾಚಾರ ಹಾಕುತ್ತಿದ್ದಾರೆ. ಈಗಾಗಲೇ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಓಪನಿಂಗ್ ಬ್ಯಾಟ್ಸ್ ಮನ್ ಆಗಿ ಕಾಣಿಸಿಕೊಳ್ಳುವ ಅವಕಾಶವನ್ನು ಪಡೆದಿರುವ ಇಶಾನ್ ಕಿಶನ್ ಯಾವ ರೀತಿಯಲ್ಲಿ ತಮ್ಮ ಸ್ಥಾನವನ್ನು ಸಮರ್ಥಿಸಿಕೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.