ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಒಂದು ಕಾಲದಲ್ಲಿ ಭಾರತೀಯ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಬೆನ್ನೆಲುಬಾಗಿ ಮಹೇಂದ್ರ ಸಿಂಗ್ ಧೋನಿ ಹಾಗೂ ಯುವರಾಜ್ ಸಿಂಗ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಯಾವುದೇ ಸೋಲುವ ಪಂದ್ಯವನ್ನು ಈ ಜೋಡಿ ಗೆಲುವಿನ ಅಂಚಿಗೆ ತಂದು ನಿಲ್ಲಿಸುತ್ತಿದ್ದರು ಎಂಬುದನ್ನು ನಾವು ಹಲವಾರು ಬಾರಿ ಸಾಕ್ಷೀಕರಿಸಿದ್ದೇವೆ.
ಮಹೇಂದ್ರ ಸಿಂಗ್ ಧೋನಿ ಹಾಗೂ ಯುವರಾಜ್ ಸಿಂಗ್ ಅವರ ನಿವೃತ್ತಿಯ ನಂತರ ಭಾರತೀಯ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಜವಾಬ್ದಾರಿಯನ್ನು ಸಂಭಾಳಿಸುವಂತಹ ಜೋಡಿ ಇದುವರೆಗೂ ಸಿಕ್ಕಿರಲಿಲ್ಲ. ಆದರೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಪಂದ್ಯದಲ್ಲಿ ಖಂಡಿತವಾಗಿ ಇಂತಹ ಜವಾಬ್ದಾರಿಯನ್ನು ನಿರ್ವಹಿಸಬಲ್ಲ ಹಾಗೂ ಅದನ್ನು ಯಶಸ್ವಿಯಾಗಿ ಪೂರೈಸಬಲ್ಲ ಜೋಡಿಯೊಂದು ಭಾರತೀಯ ಕ್ರಿಕೆಟ್ ತಂಡಕ್ಕೆ ಸಿಕ್ಕಿದೆ ಎಂದು ನಿಸ್ಸಂಶಯವಾಗಿ ಹೇಳಬಹುದಾಗಿದೆ. ಹೌದು ಗೆಳೆಯರೇ ನಾವು ಮಾತನಾಡುತ್ತಿರುವುದು ರಿಷಬ್ ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ಜೋಡಿಯ ಕುರಿತಂತೆ.
ಇಂಗ್ಲೆಂಡ್ ವಿರುದ್ಧ ಕೊನೆಯ ಏಕದಿನ ಪಂದ್ಯದಲ್ಲಿ ಆರಂಭಿಕ ಆಘಾತವನ್ನು ಅನುಭವಿಸಿ ಸೋಲಿನ ಅಂಚಿಗೆ ಸಾಗುತ್ತಿದ್ದ ತಂಡವನ್ನು ಶತಕದ ಜೊತೆಯಾಟದ ಮೂಲಕ ರಿಷಬ್ ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ಇಬ್ಬರೂ ಕೂಡ ಸರಣಿಯನ್ನು ಗೆಲ್ಲುವ ಆಟವನ್ನು ತೋರ್ಪಡಿಸುತ್ತಾರೆ. ಮುಂದಿನ ವಿಶ್ವಕಪ್ ದೃಷ್ಟಿಯಲ್ಲಿ ಇದು ನಿಜಕ್ಕೂ ಕೂಡ ಭಾರತೀಯ ಕ್ರಿಕೆಟ್ ತಂಡಕ್ಕೆ ಪಾಸಿಟಿವ್ ಅಂಶವಾಗಿದ್ದು ಈ ಜೋಡಿ ಮುಂದಿನ ದಿನಗಳಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ಮಹೇಂದ್ರ ಸಿಂಗ್ ಧೋನಿ ಹಾಗೂ ಯುವರಾಜ್ ಸಿಂಗ್ ಅವರಂತೆ ಮ್ಯಾಚ್ ವಿನ್ನಿಂಗ್ ಜೋಡಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಹಾರ್ದಿಕ್ ಪಾಂಡ್ಯ ಹಾಗೂ ರಿಷಬ್ ಪಂತ್ ರವರ ಜೊತೆಯಾಟದ ಕುರಿತಂತೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಮೂಲಕ ಹಂಚಿಕೊಳ್ಳಿ.