ಅದ್ಬುತ ಆಟವಾಡಿ ಪಂದ್ಯ ಗೆಲಿಸಿಕೊಟ್ಟ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ತೆಗೆದುಕೊಳ್ಳುವಾಗ ದಿನೇಶ್ ಕಾರ್ತಿಕ್ ಹೇಳಿದ್ದೇನು ಗೊತ್ತೇ??
ಅದ್ಬುತ ಆಟವಾಡಿ ಪಂದ್ಯ ಗೆಲಿಸಿಕೊಟ್ಟ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ತೆಗೆದುಕೊಳ್ಳುವಾಗ ದಿನೇಶ್ ಕಾರ್ತಿಕ್ ಹೇಳಿದ್ದೇನು ಗೊತ್ತೇ??
ನಮಸ್ಕಾರ ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ದಿನೇಶ್ ಕಾರ್ತಿಕ್ ರವರು ಹಲವಾರು ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗೂ ಐಪಿಎಲ್ ಟೂರ್ನಮೆಂಟ್ ಇಂದ ಹೊರಗಿದ್ದಿದ್ದರು. ಆದರೆ ಈಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡುವ ಮೂಲಕ ಮೂರು ವರ್ಷಗಳ ನಂತರ ಮತ್ತೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದರು. ಈ ವರ್ಷ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ ಅನ್ನು ಗಮನದಲ್ಲಿರಿಸಿಕೊಂಡು ದಿನೇಶ್ ಕಾರ್ತಿಕ್ ರವರು ಆಡಿರುವ ಬಹುತೇಕ ಎಲ್ಲಾ ಸರಣಿಗಳಲ್ಲಿ ಕೂಡ ಮ್ಯಾಚ್ ವಿನ್ನರ್ ಅಥವಾ ಫಿನಿಶ್ವರ್ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸಿರುವುದು ಕಂಡುಬಂದಿದೆ.
ನಿಜಕ್ಕೂ ಕೂಡ ಮುಂದಿನ ದಿನಗಳಲ್ಲಿ ಐಸಿಸಿ ಟೂರ್ನಿಗಳಲ್ಲಿ ಭಾರತೀಯ ಕ್ರಿಕೆಟ್ ತಂಡದ ಟ್ರಂಪ್ ಕಾರ್ಡ್ ಆಗಿ ದಿನೇಶ್ ಕಾರ್ತಿಕ್ ರವರು ಕಂಡು ಬರಲಿದ್ದಾರೆ ಎಂದು ಹೇಳಬಹುದಾಗಿದೆ. ಅದರಲ್ಲೂ ಸದ್ಯಕ್ಕೆ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲನೇ ಟಿ20 ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಳ್ಳುವಂತಹ ಆಟವನ್ನು ದಿನೇಶ್ ಕಾರ್ತಿಕ್ ತೋರ್ಪಡಿಸಿದ್ದಾರೆ. 19 ಎಸೆತಗಳಲ್ಲಿ ಬರೋಬ್ಬರಿ 41 ರನ್ನುಗಳನ್ನು ಬಾರಿಸುವ ಮೂಲಕ ದಿನೇಶ್ ಕಾರ್ತಿಕ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡ ನಂತರ ದಿನೇಶ್ ಕಾರ್ತಿಕ್ ರವರು ತಂಡ ನನಗೆ ನೀಡಿರುವ ಫಿನಿಷರ್ ಜವಾಬ್ದಾರಿಯನ್ನು ನಾನು ಆನಂದಿಸುತ್ತಿದ್ದೇನೆ. ಇದೊಂದು ಪ್ರಮುಖ ಜವಾಬ್ದಾರಿಯಾಗಿದ್ದು ಪ್ರತಿಯೊಂದು ಪಂದ್ಯದಲ್ಲಿ ಸ್ಥಿರವಾಗಿರಲು ಸಾಧ್ಯವಿಲ್ಲ. ಇದಕ್ಕಾಗಿ ಕೋಚ್ ಹಾಗೂ ನಾಯಕನ ಬೆಂಬಲ ಸಿಗಬೇಕು ನನಗೆ ಸಂಪೂರ್ಣ ಬೆಂಬಲ ಸಿಗುತ್ತಿದೆ ಎಂಬುದಾಗಿ ದಿನೇಶ್ ಕಾರ್ತಿಕ್ ಈ ಸಂದರ್ಭದಲ್ಲಿ ಮಾತನಾಡಿದ್ದಾರೆ. ಒಟ್ಟಾರೆಯಾಗಿ ದಿನೇಶ್ ಕಾರ್ತಿಕ್ ಇದೇ ರೀತಿ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿದರೆ ವಿಶ್ವಕಪ್ ತಂಡದಲ್ಲಿ ಸ್ಥಾನವನ್ನು ಪಡೆಯಲು ಯಾವುದೇ ಕಸರತ್ತು ಮಾಡಬೇಕಾದ ಅಗತ್ಯವಿಲ್ಲ ಎಂದು ಹೇಳಬಹುದು.