ಇಂದು ನಡೆಯಲಿರುವ ಆಸ್ಟ್ರೇಲಿಯಾ ತಂಡದ ವಿರುದ್ದದ ಮೊದಲ ಪಂದ್ಯಕ್ಕೆ ಭಾರತ ತಂಡ ಹೇಗಿರಲಿದೆ ಗೊತ್ತೇ?? ಹನ್ನೊಂದರಲ್ಲಿ ಸ್ಥಾನ ಪಡೆಯುವವರು ಯಾರ್ಯಾರು ಗೊತ್ತೇ??
ಇಂದು ನಡೆಯಲಿರುವ ಆಸ್ಟ್ರೇಲಿಯಾ ತಂಡದ ವಿರುದ್ದದ ಮೊದಲ ಪಂದ್ಯಕ್ಕೆ ಭಾರತ ತಂಡ ಹೇಗಿರಲಿದೆ ಗೊತ್ತೇ?? ಹನ್ನೊಂದರಲ್ಲಿ ಸ್ಥಾನ ಪಡೆಯುವವರು ಯಾರ್ಯಾರು ಗೊತ್ತೇ??
ನಾಳೆಯಿಂದ ಆಸ್ಟ್ರೇಲಿಯಾ ವಿರುದ್ಧದ ಚುಟುಕು ಪಂದ್ಯಗಳು ಶುರುವಾಗಲಿದೆ, ಮೊಹಾಲಿಯಲ್ಲಿ ಮೂರು ಟಿ20 ಪಂದ್ಯಗಳು ನಡೆಯಲಿದ್ದು, ವಿಶ್ವಕಪ್ ದೃಷ್ಟಿಯಿಂದ ಇದು ಭಾರತಕ್ಕೆ ಬಹಳ ಮಹತ್ವದ ಪಂದ್ಯ ಆಗಿದೆ. ನಾಳಿನ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಅವರು ಪ್ಲೇಯಿಂಗ್ 11 ನಲ್ಲಿ ಯಾರನ್ನೆಲ್ಲ ಕಣಕ್ಕೆ ಇಳಿಸುತ್ತಾರೆ ಎನ್ನುವ ಪ್ರಶ್ನೆ ಈಗ ಶುರುವಾಗಿದೆ. ನಾಯಕ ರೋಹಿತ್ ಶರ್ಮಾ ಅವರಿಗೆ ಇರುವ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಇದು ಸರಿಯಾದ ಸಮಯ ಆಗಿದೆ. ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ರೋಹಿತ್ ಶರ್ಮಾ ಅವರು ಆರಂಭಿಕ ಆಟಗಾರನ ಸ್ಥಾನಕ್ಕೆ ಕೆ.ಎಲ್.ರಾಹುಲ್ ಅವರಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುವುದಾಗಿ ತಿಳಿಸಿದರು, ಹಾಗಾಗಿ ಓಪನರ್ ಆಗಿ ರಾಹುಲ್ ಅವರೇ ಕಣಕ್ಕೆ ಇಳಿಯುವುದು ಪಕ್ಕಾ ಆಗಿದೆ, ಇನ್ನು ವಿರಾಟ್ ಕೋಹ್ಲಿ ಅವರು 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಅವರು ಇರಲಿದ್ದು, ಆಲ್ ರೌಂಡರ್ ಆಗಿ ಹಾರ್ದಿಕ್ ಪಾಂಡ್ಯ ಕಣಕ್ಕೆ ಇಳಿಯಲಿದ್ದಾರೆ. ಇನ್ನು ವಿಕೆಟ್ ಕೀಪಿಂಗ್ ಮಾಡುವವರ ಬಗ್ಗೆ ಚರ್ಚೆ ಶುರುವಾಗಿದೆ, ಏಷ್ಯಾಕಪ್ ನಲ್ಲಿ ದಿನೇಶ್ ಕಾರ್ತಿಕ್ ಅವರಿಗೆ ಹೆಚ್ಚಿನ ಅವಕಾಶ ನೀಡಲಿಲ್ಲ, ಅವರ ಬದಲಾಗಿ ರಿಷಬ್ ಪಂತ್ ಅವರಿಗೆ ಅವಕಾಶ ನೀಡಲಾಯಿತು. ಆದರೆ ರಿಷಬ್ ಪಂತ್ ಅವರು ವೈಫಲ್ಯ ಅನುಭವಿಸಿದರು, ಅದರಿಂದಾಗಿ ಈ ಬಾರಿ ಡಿಮೇಶ್ ಕಾರ್ತಿಕ್ ಅವರಿಗೆ ಅವಕಾಶ ಕೊಡುತ್ತಾರಾ ಎಂದು ಕಾದು ನೋಡಬೇಕಿದೆ. ಹಾಗೆಯೇ ದೀಪಕ್ ಹೂಡಾ ಮತ್ತು ಅಕ್ಷರ್ ಪಟೇಲ್ ನಡುವೆ ಯಾರು ಕಣಕ್ಕೆ ಇಳಿಯುತ್ತಾರೆ ಎನ್ನುವ ಚರ್ಚೆ ಸಹ ಶುರುವಾಗಿದ್ದು, ಅಕ್ಷರ್ ಪಟೇಲ್ ಅವರಿಗೆ ಸ್ಥಾನ ಫಿಕ್ಸ್ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಬೌಲಿಂಗ್ ನಲ್ಲಿ ಇಂಜುರಿ ಇಂದ ಚೇತರಿಸಿಕೊಂಡಿರುವ ಜಸ್ಪ್ರೀತ್ ಬುಮ್ರ ಹಾಗೂ ಹರ್ಷಲ್ ಪಟೇಲ್ ಅವರಿಗೆ ಸ್ಥಾನ ಸಿಗುವುದು ಖಚಿತ, ಇನ್ನುಳಿದ ಹಾಗೆ ಭುವನೇಶ್ವರ್ ಕುಮಾರ್ ಅವರು ಬೌಲಿಂಗ್ ನಲ್ಲಿ ಇರಲಿದ್ದು, ಸ್ಪಿನ್ನರ್ ಆಗಿ ಯುಜವೇಂದ್ರ ಚಾಹಲ್ ಅವರು ಆಯ್ಕೆಯಾಗುತ್ತಾರೆ. ಆಸ್ಟ್ರೇಲಿಯಾ ತಂಡ ಸಹ ನಾಳಿನ ಪಂದ್ಯಕ್ಕೆ ಬಹಳ ತಯಾರಿ ಮಾಡಿಕೊಂಡಿದೆ, ಈ ಬಾರಿ ಡೇವಿಡ್ ವಾರ್ನರ್ ಹಾಗೂ ಮಿಕ್ಥಿಲ್ ಸ್ಟಾರ್ಕ್ ಅವರು ಇಂಜುರಿ ಕಾರಣದಿಂದ ಮ್ಯಾಚ್ ನಲ್ಲಿ ಭಾಗವಹಿಸುತ್ತಿಲ್ಲ, ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರ ಟಿಮ್ ಡೇವಿಡ್ ತಂಡದಲ್ಲಿದ್ದಾರೆ, ಇನ್ನು ಜೋಶ್ ಇಂಗ್ಲಿಸ್, ನಾಥನ್ ಎಲ್ಲಿಸ್ ಈ ಬಾರಿ ಆಸ್ಟ್ರೇಲಿಯಾ ತಂಡದಲ್ಲಿ ಕಾಣಿಸಿಕೊಳ್ಳುವ ಹೊಸ ಸದಸ್ಯರಾಗಿದ್ದಾರೆ.
ನಾಳಿನ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ 11 ಹೀಗಿರಬಹುದು. ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ ಹಾಗೂ ಯುಜ್ವೇಂದ್ರ ಚಹಾಲ್. ಆಸ್ಟ್ರೇಲಿಯಾ ತಂಡದ ಪ್ಲೇಯಿಂಗ್ 11 ಹೀಗಿರಬಹುದು. ಆರನ್ ಫಿಂಚ್, ಮ್ಯಾಥ್ಯೂ ವೇಡ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಟಿಮ್ ಡೇವಿಡ್, ಆಡಮ್ ಝಂಪಾ, ಪ್ಯಾಟ್ ಕಮಿನ್ಸ್, ಜೋಶ್ ಹ್ಯಾಜಲ್‌ವುಡ್, ಸೀನ್ ಅಬಾಟ್, ಆಸ್ಟನ್ ಅಗರ್